ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ದೇಶದಲ್ಲಿ ಮುಹೂರ್ತ ನಿಗದಿಯಾದ ಬೆನ್ನಲ್ಲೇ ತಮಗೂ 20 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆ ನೀಡುವಂತೆ ಬ್ರೆಜಿಲ್ ಭಾರತಕ್ಕೆ ಮನವಿ ಮಾಡಿದೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಲಸಿಕೆ ನೀಡುವಂತೆ ಮನವಿ ಮಾಡಿದ್ದಾರೆ.
ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೊವಿಶೀಲ್ಡ್ ಲಸಿಕೆ ನೀಡುವಂತೆ ಬ್ರೆಜಿಲ್ ಅಧ್ಯಕ್ಷ ಮನವಿ ಮಾಡಿದ್ದಾರೆ. ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ತೊಂದರೆ ಆಗದಂತೆ ನೋಡಿಕೊಂಡು ನಮಗೂ 20 ಲಕ್ಷ ಡೋಸ್ ನೀಡಿ ಸಹಕರಿಸಿ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ