AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BREAKING: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮ ಸಿಂಘೆ ಅಧಿಕಾರ ಸ್ವೀಕಾರ

ಅಧ್ಯಕ್ಷ ಗೊಟಬಯ ರಾಜಪಕ್ಸೆ ಪಲಾಯನ ಮಾಡಿದ ನಂತರ ಶ್ರೀಲಂಕಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.  ಪ್ರಧಾನಿ ಕಚೇರಿ ಈ ಬಗ್ಗೆ ತಿಳಿಸಿದೆ ಎಂದು  ಸುದ್ದಿ ಸಂಸ್ಥೆ AFP ತಿಳಿಸಿದೆ. 

BREAKING: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮ ಸಿಂಘೆ ಅಧಿಕಾರ ಸ್ವೀಕಾರ
Emergency declared in Sri Lanka
TV9 Web
| Edited By: |

Updated on:Jul 13, 2022 | 12:13 PM

Share

ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ.  ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಬಿಕ್ಕಟ್ಟಿನ ಸಮಯದಲ್ಲಿ ಅಧ್ಯಕ್ಷ ಗೊಟಬಾಯ ರಾಜಪಕ್ಸ ದೇಶದಿಂದ ಹೊರಗೆ ತೆರಳಿದ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಂಗಾಮಿ ಅಧ್ಯಕ್ಷರ ನಿವಾಸದ ಮೇಲೆ ಸೇನಾ ಹೆಲಿಕಾಪ್ಟರ್​ಗಳು ಹಾರಾಟ ನಡೆಸುತ್ತಿವೆ.

ಶ್ರೀಲಂಕಾ ತೊರೆದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ವಿರುದ್ಧ ಜನರ ಆಕ್ರೋಶ ಮುಂದುವರಿದಿದೆ. ರಾಜಧಾನಿ ಕೊಲಂಬೊದಲ್ಲಿ ಜನರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಹಲವೆಡೆ ಕಲ್ಲುತೂರಾಟ ನಡೆದಿದೆ. ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉದ್ರಿಕ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆಶ್ರುವಾಯು ಶೆಲ್​​ಗಳನ್ನು ಸಿಡಿಸಿದರು. ಇದೀಗ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ಕಚೇರಿ ಈ ಬಗ್ಗೆ ಮಾಹಿತಿ ನೀಡಿದೆ.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಇದನ್ನೂ ಓದಿ: Basil Rajapaksa: ಶ್ರೀಲಂಕಾದಿಂದ ಪಲಾಯನಕ್ಕೆ ಮುಂದಾದ ಮಾಜಿ ಸಚಿವ ಬಸಿಲ್ ರಾಜಪಕ್ಸ; ದುಬೈಗೆ ಹಾರದಂತೆ ತಡೆದ ಅಧಿಕಾರಿಗಳು

ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಲು ಮತ್ತು ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಹಂಗಾಮಿ ಅಧ್ಯಕ್ಷ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಆದೇಶ ಹೊರಡಿಸಿದ್ದಾರೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವವರನ್ನು ಬಂಧಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

Published On - 11:55 am, Wed, 13 July 22

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​