ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಬಿಕ್ಕಟ್ಟಿನ ಸಮಯದಲ್ಲಿ ಅಧ್ಯಕ್ಷ ಗೊಟಬಾಯ ರಾಜಪಕ್ಸ ದೇಶದಿಂದ ಹೊರಗೆ ತೆರಳಿದ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಂಗಾಮಿ ಅಧ್ಯಕ್ಷರ ನಿವಾಸದ ಮೇಲೆ ಸೇನಾ ಹೆಲಿಕಾಪ್ಟರ್ಗಳು ಹಾರಾಟ ನಡೆಸುತ್ತಿವೆ.
ಶ್ರೀಲಂಕಾ ತೊರೆದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ವಿರುದ್ಧ ಜನರ ಆಕ್ರೋಶ ಮುಂದುವರಿದಿದೆ. ರಾಜಧಾನಿ ಕೊಲಂಬೊದಲ್ಲಿ ಜನರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಹಲವೆಡೆ ಕಲ್ಲುತೂರಾಟ ನಡೆದಿದೆ. ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉದ್ರಿಕ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆಶ್ರುವಾಯು ಶೆಲ್ಗಳನ್ನು ಸಿಡಿಸಿದರು. ಇದೀಗ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ಕಚೇರಿ ಈ ಬಗ್ಗೆ ಮಾಹಿತಿ ನೀಡಿದೆ.
ಇದನ್ನೂ ಓದಿ: Basil Rajapaksa: ಶ್ರೀಲಂಕಾದಿಂದ ಪಲಾಯನಕ್ಕೆ ಮುಂದಾದ ಮಾಜಿ ಸಚಿವ ಬಸಿಲ್ ರಾಜಪಕ್ಸ; ದುಬೈಗೆ ಹಾರದಂತೆ ತಡೆದ ಅಧಿಕಾರಿಗಳು
ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಲು ಮತ್ತು ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಹಂಗಾಮಿ ಅಧ್ಯಕ್ಷ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಆದೇಶ ಹೊರಡಿಸಿದ್ದಾರೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವವರನ್ನು ಬಂಧಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.
#WATCH | Sri Lanka: Air patrolling being conducted by security forces as protestors storm Sri Lankan PM’s residence in Colombo pic.twitter.com/HlOjmvFUNf
— ANI (@ANI) July 13, 2022
Published On - 11:55 am, Wed, 13 July 22