ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ- ಭಾರತ ಮುಖಾಮುಖಿ; ಭಯೋತ್ಪಾದನೆ ವಿರುದ್ಧ ದ್ವಂದ್ವ ನಿಲುವಿಲ್ಲ ಎಂದ ಮೋದಿ
ರಷ್ಯಾದಲ್ಲಿ ನಡೆದಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಮತ್ತು ಚೀನಾ ಮುಖಾಮುಖಿಯಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಚೀನಾದ ವಿರುದ್ಧ ಮುಸುಕಿನ ಗುದ್ದಾಟ ನಡೆಸಿದ್ದಾರೆ. ಭಯೋತ್ಪಾದನೆಯ ವಿರುದ್ಧ ಜಗತ್ತು ಒಗ್ಗೂಡಬೇಕು. ಇಂತಹ ಗಂಭೀರ ವಿಷಯದಲ್ಲಿ ದ್ವಂದ್ವ ನೀತಿಗೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.
ಕಜಾನ್: “ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಫಂಡಿಂಗ್ ಮಾಡುವುದನ್ನು ಎದುರಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ಇಂತಹ ಗಂಭೀರ ವಿಷಯದ ಬಗ್ಗೆ ದ್ವಂದ್ವ ನಿಲುವಿಗೆ ಜಾಗವಿಲ್ಲ” ಎಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೂಲಕ ಚೀನಾದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಪಿಎಂ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಆರ್ಥಿಕ ನೆರವು ನೀಡುತ್ತಿರುವ ಚೀನಾದತ್ತ ಬೆರಳು ತೋರಿಸಿದ್ದಾರೆ.
ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವಂತಹ ಗಂಭೀರ ವಿಷಯಗಳ ಬಗ್ಗೆ ದ್ವಂದ್ವ ನಿಲುವಿಗೆ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 16ನೇ ಬ್ರಿಕ್ಸ್ ಶೃಂಗಸಭೆಯ ಮುಕ್ತಾಯದ ಸರ್ವಸದಸ್ಯರ ಅಧಿವೇಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ರಷ್ಯಾದ ಕಜಾನ್‌ನಲ್ಲಿ ಶೃಂಗಸಭೆ ನಡೆಯಿತು.
ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಹಾಯ; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು
ಯುವಜನರಲ್ಲಿ ಆಮೂಲಾಗ್ರೀಕರಣವನ್ನು ತಡೆಯಲು ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ದೇಶಗಳಿಗೆ ಒತ್ತು ನೀಡಿದ್ದಾರೆ. “ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದನೆ ಕುರಿತ ಸಮಗ್ರ ಸಮಾವೇಶದ ಬಾಕಿ ಉಳಿದಿರುವ ವಿಷಯದ ಬಗ್ಗೆ ನಾವು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಮೋದಿ ಹೇಳಿದ್ದಾರೆ.
My remarks during the BRICS Summit in Kazan, Russia. https://t.co/TvPNL0HHd0
— Narendra Modi (@narendramodi) October 23, 2024
30ಕ್ಕೂ ಹೆಚ್ಚು ರಾಷ್ಟ್ರಗಳು ಬ್ರಿಕ್ಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ದಕ್ಷತೆಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಗುಂಪು ತನ್ನ ವಿಸ್ತರಣೆಯನ್ನು ಸಭೆಯಲ್ಲಿ ಚರ್ಚಿಸುತ್ತದೆ ಎಂದು ಪುಟಿನ್ ಹೇಳಿದ್ದಾರೆ.
ಇದನ್ನೂ ಓದಿ: BRICS Summit: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆಯೇ ವಿನಃ ಯುದ್ಧವಲ್ಲ. ಭಾರತವು ಬ್ರಿಕ್ಸ್ ಪಾಲುದಾರ ರಾಷ್ಟ್ರವಾಗಿ ಹೊಸ ದೇಶಗಳನ್ನು ಸ್ವಾಗತಿಸಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಸರ್ವಾನುಮತದಿಂದ ತೆಗೆದುಕೊಳ್ಳಬೇಕು ಮತ್ತು ಬ್ರಿಕ್ಸ್‌ನ ಸಂಸ್ಥಾಪಕ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಬೇಕು. ಜೋಹಾನ್ಸ್‌ಬರ್ಗ್ ಶೃಂಗಸಭೆಯಲ್ಲಿ ನಾವು ಅಳವಡಿಸಿಕೊಂಡ ಮಾರ್ಗದರ್ಶಿ ತತ್ವಗಳು, ಮಾನದಂಡಗಳು, ಕಾರ್ಯವಿಧಾನಗಳನ್ನು ಎಲ್ಲಾ ಸದಸ್ಯ ಮತ್ತು ಪಾಲುದಾರ ರಾಷ್ಟ್ರಗಳು ಅನುಸರಿಸಬೇಕು ಎಂದು ಮೋದಿ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:22 pm, Wed, 23 October 24