ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇದೆ.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 21, 2020 | 11:42 AM

ಬ್ರಿಟನ್​ ದೇಶದಲ್ಲಿ ಕೊವಿಡ್ 2ನೇ ಅಲೆ ಆತಂಕ ಹೆಚ್ಚುತ್ತಿದೆ. ಕೊರೊನಾ ವೈರಾಣು ಸ್ವರೂಪ ಬದಲಾಗಿದ್ದು ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಬ್ರಿಟನ್​ ಸರ್ಕಾರ ಎಚ್ಚರಿಕೆ ನೀಡಿದೆ. ಕೊವಿಡ್​ 2ನೇ ಅಲೆಯ ಹೊಡೆತದಿಂದ ಜನರನ್ನು ರಕ್ಷಿಸುವ ಸಲುವಾಗಿ ಮನೆಯಿಂದ ಯಾರೂ ಹೊರಬಾರದಂತೆ ಲಾಕ್​ಡೌನ್​ ನಿಯಮ ರೂಪಿಸಲಾಗಿದೆ. ಈ ಬೆನ್ನಲ್ಲೇ ಯುರೋಪಿಯನ್​ ರಾಷ್ಟ್ರಗಳು ಎಚ್ಚೆತ್ತುಕೊಂಡಿದ್ದು, ಹಲವು ರಾಷ್ಟ್ರಗಳು ಬ್ರಿಟನ್​ನೊಂದಿಗಿನ ವಿಮಾನ ಸಂಪರ್ಕ ಸ್ಥಗಿತಗೊಳಿಸಿವೆ.

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ಈ ಸಲುವಾಗಿ ಕ್ರಿಸ್​ಮಸ್​ ಆಚರಣೆಗೆ ಸಡಿಲಿಸಿದ್ದ ನಿಯಮಗಳನ್ನು ಹಿಂಪಡೆಯುತ್ತಿದ್ದೇವೆ. 4ನೇ ಹಂತದ ಲಾಕ್​ಡೌನ್​ ಹೇರಿರುವುದರಿಂದ ಯಾರೂ ಮನೆಯಿಂದ ಆಚೆ ಬರಬೇಡಿ ಎಂದು ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​ ಘೋಷಣೆ ಮಾಡಿದ್ದಾರೆ.

ಸದ್ಯಕ್ಕೆ ಕೊರೊನಾ ವೈರಸ್​ ಹೊಸ ಸ್ವರೂಪ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಅಥವಾ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲು ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ. ಈಗಷ್ಟೇ ಬಂದಿರುವ ಲಸಿಕೆಗಳು ಇವುಗಳ ಮೇಲೆ ಪ್ರಭಾವ ಬೀರುತ್ತವೋ, ಇಲ್ಲವೋ ಎಂದು ಹೇಳುವುದೂ ಸಾಧ್ಯವಿಲ್ಲ ಎಂದು ಇಂಗ್ಲೆಂಡ್​ ದೇಶದ ಮುಖ್ಯ ಆರೋಗ್ಯಾಧಿಕಾರಿ ಪ್ರೊ.ಕ್ರಿಸ್​ ವಿಟ್ಟಿ ತಿಳಿಸಿದ್ದಾರೆ.

ಆದರೆ, ಇದು ಹಬ್ಬುತ್ತಿರುವ ವೇಗವನ್ನು ನೋಡಿದರೆ ತೀವ್ರ ಎಚ್ಚರಿಕೆ ಅತ್ಯಗತ್ಯ. ಆದ್ದರಿಂದ ಪ್ರಸ್ತುತ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸುತ್ತಿದ್ದೇವೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ