Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರಿಸ್ಥಿತಿಯಿಂದ ಭಾರತ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಭಾರತದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ

ಕೊರೊನಾ ಪರಿಸ್ಥಿತಿಯಿಂದ ಭಾರತ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಬೋರಿಸ್ ಜಾನ್ಸನ್​ ಮತ್ತು ನರೇಂದ್ರ ಮೋದಿ (ಪ್ರಾತಿನಿಧಿಕ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 19, 2021 | 3:19 PM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಭೇಟಿ ರದ್ದುಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಂದಿನ ತಿಂಗಳು ದ್ವಿಪಕ್ಷೀಯ ಮಾತುಕತೆ ನಡೆಸುವ ಬಗ್ಗೆ ಸಮಯ ನಿಗದಿಯಾಗಿತ್ತು. ಆದರೆ ಇದೀಗ ಬೋರಿಸ್ ಜಾನ್ಸನ್ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

ಭೇಟಿಯ ಬಗ್ಗೆ ಎರಡೂ ದೇಶಗಳು ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ಹೊರಡಿಸಿರಲಿಲ್ಲ. ಆದರೆ ಎರಡೂ ದೇಶಗಳ ವಿದೇಶಾಂಗ ವ್ಯವಹಾರಗಳ ಇಲಾಖೆ ಮತ್ತು ಪ್ರಧಾನಿ ಕಾರ್ಯಾಲಯಗಳ ಮಟ್ಟದಲ್ಲಿ ಈ ಭೇಟಿ ಅಂತಿಮಗೊಂಡಿತ್ತು. ಏಪ್ರಿಲ್ 26ರಿಂದ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ಆರಂಭವಾಗಬೇಕಿತ್ತು. ಭಾರತ ಭೇಟಿಯ ವೇಳೆ ಬ್ರಿಟನ್ ಪ್ರಧಾನಿಯು ಮುಂಬೈ ಮತ್ತು ಪುಣೆ ನಗರಗಳಿಗೂ ಭೇಟಿ ನೀಡುವ ಕಾರ್ಯಕ್ರಮಗಳು ನಿಗದಿಯಾಗಿತ್ತು.

ಭಾರತದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ತಿಂಗಳ ಕೊನೆಯಲ್ಲಿ ಎರಡೂ ದೇಶಗಳ ಮುಖ್ಯಸ್ಥರು ಪರಸ್ಪರ ಮಾತುಕತೆ ನಡೆಸಲಿದ್ದಾರೆ. ಈ ವರ್ಷದ ಕೊನೆಯಲ್ಲಿ ಮುಖಾಮುಖಿ ಭೇಟಿಯಾಗಲಿದ್ದಾರೆ ಎಂದು ಭಾರತ ಮತ್ತು ಬ್ರಿಟನ್ ದೇಶಗಳು ಪ್ರತ್ಯೇಕ ಹೇಳಿಕೆಗಳಲ್ಲಿ ಸ್ಪಷ್ಟಪಡಿಸಿವೆ.

‘ಪ್ರಸ್ತುತ ಕೊರೊನಾ ಪರಿಸ್ಥಿತಿಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಪ್ರವಾಸ ಸಾಧ್ಯವಿಲ್ಲ. ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿ ಈ ತಿಂಗಳ ಕೊನೆಯಲ್ಲಿ ಮಾತುಕತೆ ನಡೆಸಿ ಭಾರತ-ಬ್ರಿಟನ್ ದ್ವಿಪಕ್ಷೀಯ ಸಹಕಾರ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಪರಸ್ಪರ ಭೇಟಿಯಾಗಿ ಚರ್ಚಿಸಲಿದ್ದಾರೆ’ ಎಂದು ಬ್ರಿಟನ್ ಸರ್ಕಾರದ ಹೇಳಿಕೆ ತಿಳಿಸಿದೆ.

ಈ ವರ್ಷದ ಗಣರಾಜ್ಯೋತ್ಸವ ಸಮಾರಂಭಕ್ಕೂ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಯಾಗಿ ಆಗಬೇಕಿಸಬೇಕಿತ್ತು. ಆದರೆ ಕೊರೊನಾ ವೈರಸ್​ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸಿದ್ದ ಕಾರಣ ಅವರ ಭಾರತ ಭೇಟಿ ಕೊನೆ ಗಳಿಗೆಯಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್​ರ 70 ವರ್ಷಗಳ ಸಂಗಾತಿ ಎಡಿನ್​ಬರ್ಗ್ ಅರಸ ಪ್ರಿನ್ಸ್ ಫಿಲಿಪ್ ಇನ್ನಿಲ್ಲ

(UK PM Boris Johnson cancels India visit due to current Covid-19 situation)

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ