AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಶೀಲ್ಡ್​​ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಟಿಟಿಎಸ್​ಗೂ ಕಾರಣವಾಗಬಹುದು

ಬ್ರಿಟಿಷ್ ಫಾರ್ಮಾ ಅಸ್ಟ್ರಾಜೆನೆಕಾ ತನ್ನ ಕೋವಿಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್​ಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೋವಿಶೀಲ್ಡ್​​ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಟಿಟಿಎಸ್​ಗೂ ಕಾರಣವಾಗಬಹುದು
ಲಸಿಕೆ
ನಯನಾ ರಾಜೀವ್
|

Updated on:Apr 30, 2024 | 9:12 AM

Share

ಕೋವಿಶೀಲ್ಡ್(Covishield) ಔಷಧಿಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ(AstraZeneca) ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನ್ನ ಲಸಿಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು, ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ.

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್‌ ಕೋವಿಶೀಲ್ಡ್‌ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಮತ್ತು ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದ್ದ ಕಾರಣ, ಲಂಡನ್‌ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಓದಿ: 4 ವಾರಗಳ ನಂತರ ಕೊವಿಶೀಲ್ಡ್​ 2ನೇ ಡೋಸ್ ಪಡೆಯಲು ಅವಕಾಶ ಕೊಡಿ: ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್​ ಆದೇಶ

ಟಿಟಿಎಸ್ ಸಿಂಡ್ರೋಮ್ ಎಂದರೇನು? ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಪಾರ್ಶ್ವವಾಯು, ಹೃದಯಸ್ತಂಭನ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಇದು ಪ್ಲೇಟ್​ಲೆಟ್​ಗಳಸ ಸಂಖ್ಯೆಯನ್ನೂ ಕೂಡ ಕಡಿಮೆ ಮಾಡುತ್ತದೆ.

ಕಂಪನಿ ಹೇಳಿದ್ದೇನು?: ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ.

ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ. ವಿಶ್ವದಾದ್ಯಂತ 78 ಕೋಟಿ ಜನರಿಗೆ ಕೊರೊನಾ ಸೋಂಕು ತಗುಲಿತ್ತು, 70 ಲಕ್ಷಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ 45 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿ 5 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:12 am, Tue, 30 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ