ಲಂಡನ್: ಕೊರೊನಾ ವೈರಸ್ನಿಂದ ಗುಣಮುಖರಾದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕರ್ತವ್ಯಕ್ಕೆ ಮರಳಿದ್ದಾರೆ. ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ನಿಯಂತ್ರಿಸುವ ಒತ್ತಡ ಸರ್ಕಾರದ ಮೇಲಿದೆ. ಹಾಗಾಗಿ ವೈರಸ್ ಅನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿರುವ ಕಾರಣ ಕೆಲಸಕ್ಕೆ ಹಾಜರಾಗಿದ್ದಾರೆ.
ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು.
ಇಂಗ್ಲೆಂಡ್ನಲ್ಲಿ ಈವರೆಗೆ 1 ಲಕ್ಷ 53 ಸಾವಿರ ಮಂದಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ವೈರಸ್ ತಡೆಗಟ್ಟುವ ಒತ್ತಡ ಸರ್ಕಾರದ ಮೇಲಿದೆ.
Published On - 12:06 pm, Mon, 27 April 20