Sudha murthy: ಅತ್ತೆಗೆ ಪದ್ಮಭೂಷಣ ಪ್ರಶಸ್ತಿ, ಸಂತಸ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್

ಬ್ರಿಟನ್​ ಪ್ರಧಾನಿ ಹಾಗೂ ಸುಧಾ ಮೂರ್ತಿಯ ಅವರ ಮಗಳ ಗಂಡ ರಿಷಿ ಸುನಕ್( ಅಳಿಯ) ತಮ್ಮ ಅತ್ತೆಯರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಹರ್ಷ ವ್ಯಕ್ತಪಡಿಸಿದರು.

Sudha murthy: ಅತ್ತೆಗೆ ಪದ್ಮಭೂಷಣ ಪ್ರಶಸ್ತಿ, ಸಂತಸ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್
ಸುಧಾ ಮೂರ್ತಿ, ರಿಷಿ ಸುನಕ್
Follow us
|

Updated on:Apr 07, 2023 | 6:33 PM

ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕದ ತಾಯಿ ಎಂದೇ ಪ್ರಸಿದ್ಧಿಯನ್ನು ಪಡೆದ ಸುಧಾಮೂರ್ತಿ (Sudha murthy) ಅವರು ಏ.5ರಂದು ರಾಷ್ಟ್ರಪತಿ ಭವನದಲ್ಲಿ ಸ್ವೀಕರಿಸಿದರು. ಇದೀಗ ಈ ಬಗ್ಗೆ ಬ್ರಿಟನ್​ ಪ್ರಧಾನಿ ಹಾಗೂ ಸುಧಾ ಮೂರ್ತಿಯ ಅವರ ಮಗಳ ಗಂಡ ರಿಷಿ ಸುನಕ್( ಅಳಿಯ) ತಮ್ಮ ಅತ್ತೆಯರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಹರ್ಷ ವ್ಯಕ್ತಪಡಿಸಿದರು. ಬ್ರಿಟನ್ ಪ್ರಧಾನಿ ಅವರ ಪತ್ನಿ ಅಕ್ಷತಾ ಮೂರ್ತಿ ಅವರ ಇನ್‌ಸ್ಟಾಗ್ರಾಮ್​​ನಲ್ಲಿ ಈ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಿಷಿ ಸುನಕ್ ಹೆಮ್ಮೆಯ ದಿನ ಎಂದು ಹೇಳಿದರು. 72 ವರ್ಷದ ಸುಧಾ ಮೂರ್ತಿ ಅವರು ಸಮಾಜ ಸೇವೆಗೆ ನೀಡಿದ ಕೊಡುಗೆಗಾಗಿ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿತ್ತು. ಕರ್ನಾಟಕದ ಜನಪ್ರಿಯ ಲೇಖಕಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪತಿ, ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಕೂಡ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಭವನದ ಭವ್ಯ ದರ್ಬಾರ್ ಹಾಲ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಮುಂದಿನ ಸಾಲಿನಲ್ಲಿ ಸುಧಾಮೂರ್ತಿ ಅವರ ಪುತ್ರಿ ಅಕ್ಷತಾ ಇತರ ಗಣ್ಯರೊಂದಿಗೆ ಕುಳಿತಿದ್ದರು. ನಿನ್ನೆ ನನ್ನ ತಾಯಿಯವರು ಸಾಮಾಜಿಕ ಕಾರ್ಯದಲ್ಲಿ ಅವರ ಕೊಡುಗೆಗಳನ್ನು ಗುರುತಿಸಿ, ನವದೆಹಲಿಯಲ್ಲಿ ನಡೆದ ಪದ್ಮ ಪ್ರಶಸ್ತಿ 2023 ಸಮಾರಂಭದಲ್ಲಿ (ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು) ಭಾರತದ ರಾಷ್ಟ್ರಪತಿಗಳಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನಾನು ಹೆಮ್ಮೆಯಿಂದ ನೋಡಿದೆ ಎಂದು ಅಕ್ಷತಾ ಅವರ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Sudha Murthy: ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರ ವೀಕ್ಷಿಸಿ ಸುಧಾ ಮೂರ್ತಿ ಹೇಳಿದ್ದೇನು? ಇಲ್ಲಿದೆ ನೋಡಿ

ನನ್ನ ಅಮ್ಮ ಈ ಸಮಾಜಕ್ಕೆ ಮಾಡಿ ಕೆಲಸಕ್ಕೆ ಇದು ದೊಡ್ಡ ಗೌರವ, ಅವರು ಮಾಡಿದ ಕೆಲಸದ ಬಗ್ಗೆ ಅವರಿಗೆ ಇಂದು ತೃಪ್ತಿ ತಂದಿರಬಹುದು. ನಮಗೆಲ್ಲ ಅವರು ದೊಡ್ಡ ಸ್ಫೂರ್ತಿ. 25 ವರ್ಷಗಳ ಕಾಲ ಪರೋಪಕಾರಿ ಸಂಸ್ಥೆಯನ್ನು ಸ್ಥಾಪಿಸಿ ಅನೇಕ ಬಡಕುಟುಂಬಗಳಿಗೆ ಸೇವೆ ನೀಡಿದ್ದಾರೆ. ಹಲವಾರು ಸಾಕ್ಷರತಾ ಕೆಲಸಗಳಿಗೆ ಧನಸಹಾಯ, ನೈಸರ್ಗಿಕ ವಿಕೋಪಗಳಿಂದ ಜೀವನ ಕಳೆದುಕೊಂಡ ಜನರಿಗೆ ಅಗತ್ಯ ಸಹಾಯ, ದೇಶದ ಅನೇಕ ಕಡೆಗಳಲ್ಲಿ ಸುತ್ತಿ, ಬೇರೆ ಬೇರೆ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ ಎನ್ನುವುದೇ ದೊಡ್ಡ ಹೆಮ್ಮೆ ಎಂದು ಹೇಳಿದ್ದಾರೆ. ತನ್ನ ತಾಯಿ ಹೆಸರು ಗಳಿಸಲು ಬದುಕುವುದಿಲ್ಲ, ನನ್ನ ಪೋಷಕರು ನನ್ನ ಸಹೋದರ, ನನ್ನಲ್ಲಿ ತುಂಬಿದ ಮೌಲ್ಯಗಳು, ಕಠಿಣ ಪರಿಶ್ರಮ, ನಮ್ರತೆ, ನಿಸ್ವಾರ್ಥತೆ ಅದು ಯಾವತ್ತೂ ನನ್ನ ಎಲ್ಲ ಕೆಲಸದಲ್ಲೂ ಇರುತ್ತದೆ ಎಂದು ಹೇಳಿದರು.

Published On - 6:28 pm, Fri, 7 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ