60ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ವ್ಯಕ್ತಿಗೆ 249 ವರ್ಷಗಳ ಜೈಲು ಶಿಕ್ಷೆ

|

Updated on: Jul 15, 2024 | 2:52 PM

ನಾಯಿಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿ ಆಡಮ್​ಗೆ ನ್ಯಾಯಾಲಯವು 249 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಈ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ ಆಡಮ್ ಬ್ರಿಟನ್ ಎಂಬಾತ ಹತ್ತಾರು ನಾಯಿಗಳ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಪ್ರಾಣಿಶಾಸ್ತ್ರಜ್ಞ ಎಂಬುದು ತಿಳಿದುಬಂದಿದೆ. ಆದರೆ ಆತ ಪ್ರಾಣಿಗಿಂತಲೂ ಕ್ರೂರವಾಗಿ ನಡೆದುಕೊಂಡಿದ್ದಾನೆ.

60ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ವ್ಯಕ್ತಿಗೆ 249 ವರ್ಷಗಳ ಜೈಲು ಶಿಕ್ಷೆ
ಆಡಮ್ ಬ್ರಿಟನ್
Follow us on

ನಾಯಿಗಳ ಮೇಲೆ ಅತ್ಯಾಚಾರವೆಸಗಿ ಅವುಗಳನ್ನು ಕೊಲ್ಲುತ್ತಿದ್ದ ವ್ಯಕ್ತಿಗೆ ನ್ಯಾಯಾಲಯವು 249 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನಿಂದಾಗಿ ಆತ ಬದುಕಿರುವವರೆಗೂ ಜೈಲಿನಲ್ಲೇ ಕೊಳೆಯಬೇಕಾಗುತ್ತದೆ. ಈ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ ಆಡಮ್ ಬ್ರಿಟನ್ ಎಂಬಾತ ಹತ್ತಾರು ನಾಯಿಗಳ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಪ್ರಾಣಿಶಾಸ್ತ್ರಜ್ಞ ಎಂಬುದು ವಿಪರ್ಯಾಸ. ಆದರೆ ಆತ ಪ್ರಾಣಿಗಿಂತಲೂ ಕ್ರೂರವಾಗಿ ನಡೆದುಕೊಂಡಿದ್ದಾನೆ.

ಆತ 60ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ, ಆಸ್ಟ್ರೇಲಿಯಾದ ಡಾರ್ವಿನ್​ನಲ್ಲಿರುವ ಮನೆಯಲ್ಲಿ ಈ ಕೃತ್ಯವೆಸಗಿದ್ದಾನೆ. ಆಡಮ್ ವಿರುದ್ಧ ನಡೆಯುತ್ತಿರುವ ಪ್ರಕರಣದ ಅಂತಿಮ ವಿಚಾರಣೆಯು ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಅಂದು ಶಿಕ್ಷೆ ಅಧಿಕೃತವಾಗಿ ಪ್ರಕಟವಾಗಲಿದೆ.

ಆಡಮ್ ಅವರ ವಕೀಲರು ನ್ಯೂಯಾರ್ಕ್ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೈಕೆಲ್ ಗ್ರಾಂಟ್ ಅವರಿಗೆ ವರದಿಯನ್ನು ಸಲ್ಲಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಪ್ರಾಣಿ ಪ್ರೇಮಿಗಳು ನ್ಯಾಯಾಲಯದಲ್ಲಿ ಗದ್ದಲವನ್ನು ಸೃಷ್ಟಿಸಿದಾಗ, ಅವರನ್ನು ನ್ಯಾಯಾಲಯದಿಂದ ಹೊರಹಾಕಲಾಯಿತು. ಆಡಮ್‌ಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.

ಮತ್ತಷ್ಟು ಓದಿ:ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಆಡಮ್ ತಾನು ನಾಯಿಗಳ ಮೇಲೆ ಅತ್ಯಾಚಾರ ಮಾಡಿರುವುದು ಹೌದು ಎಂದು ಒಪ್ಪಿಕೊಂಡಿದ್ದಾನೆ. ಆದರೆ ಇದೀಗ ಆತನ ಪರ ವಕೀಲರು ವರದಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಆತ ಮಾನಸಿಕವಾಗಿ ಸದೃಢನಾಗಿಲ್ಲ ಎಂದು ತಿಳಿಸಿದ್ದಾರೆ. ಆಡಮ್ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ, ಬಾಲ್ಯದಿಂದಲೂ ಅವರಿಗೆ ಪ್ಯಾರಾಫಿಲಿಯಾ ಎಂಬ ರೋಗವಿದೆ. ಈ ರೋಗದಿಂದ ಹೆಚ್ಚು ವರ್ಷಗಳ ಕಾಲ ಬದುಕಲು ಸಾಧ್ಯವಿಲ್ಲ ಹೀಗಾಗಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ವಕೀಲರು ಮನವಿ ಮಾಡಿದ್ದಾರೆ.

ಆಡಮ್ 1971 ರಲ್ಲಿ ಆಸ್ಟ್ರೇಲಿಯಾದಲ್ಲಿ ಜನಿಸಿದರು, ಲೀಡ್ಸ್ ವಿಶ್ವವಿದ್ಯಾಲಯದಿಂದ ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆದರು, ಬ್ರಿಸ್ಟಲ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಮಾಡಿದರು. ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಸಂಶೋಧಕರಾಗಿ ಕೆಲಸ ಮಾಡಿದರು. ಅವರು ಪ್ರಾಣಿ ಹಿಂಸೆ ಹಾಗೂ ಮಕ್ಕಳ ನಿಂದನೆಯ 25ಕ್ಕೂ ಹೆಚ್ಚು ಆರೋಪಗಳನ್ನು ಎದುರಿಸುತ್ತಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ