AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, 10 ಮಂದಿಗೆ ಗಾಯ

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಭಾರಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮುಂದುವರಿದಿದೆ. ಕಟ್ಟಡ ಕುಸಿತಕ್ಕೆ ಪಕ್ಕದ ನಿರ್ಮಾಣ ಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, 10 ಮಂದಿಗೆ ಗಾಯ
ಕಟ್ಟಡ ಕುಸಿತ
ನಯನಾ ರಾಜೀವ್
|

Updated on: Nov 12, 2026 | 9:35 AM

Share

ನ್ಯೂಯಾರ್ಕ್​, ನವೆಂಬರ್ 12: ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್‌ನ ಫ್ಲಾಟ್‌ಬುಷ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.

ಬುಧವಾರ ಸಂಜೆ ಸುಮಾರು 4 ಗಂಟೆಗೆ ಕಟ್ಟಡ ಕುಸಿದ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚಲು ಸಿಬ್ಬಂದಿ ಕೈಗಳಿಂದಲೇ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ವಿದ್ಯುತ್ ಗರಗಸಗಳು, ಡ್ರೋನ್‌ಗಳು ಮತ್ತು ಶ್ವಾನದಳದ ನೆರವಿನಿಂದಲೂ ಹುಡುಕಾಟ ನಡೆಸಲಾಗುತ್ತಿದೆ.

10 ಮಂದಿಗೆ ಗಾಯ, ಬದುಕುಳಿದವರಿಗಾಗಿ ಹುಡುಕಾಟ

ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ 10 ಮಂದಿಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಜೆ ಸುಮಾರು 6.30ರ ವೇಳೆಗೆ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಬಳಿಕ ಅವರನ್ನು ಸ್ಟ್ರೆಚರ್ ಮೂಲಕ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಾತ್ರಿ ಕತ್ತಲಾಗುತ್ತಿದ್ದರೂ ರಕ್ಷಣಾ ಕಾರ್ಯಾಚರಣೆ ನಿಲ್ಲಿಸದೆ, ಟಾರ್ಚ್‌ಗಳ ಬೆಳಕಿನಲ್ಲಿ ಸಿಬ್ಬಂದಿ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ.

ಇದನ್ನೂ ಓದಿ:

ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ದಾರುಣ ಸಾವು, ನಾಲ್ವರ ಸ್ಥಿತಿ ಗಂಭೀರ

ಕಟ್ಟಡ ಕುಸಿಯಲು ಕಾರಣವೇನು?

ಕುಸಿದ ಕಟ್ಟಡವು ಮೂರು ಅಂತಸ್ತಿನ ವಸತಿ ಮತ್ತು ವಾಣಿಜ್ಯ ಕಟ್ಟಡವಾಗಿತ್ತು. ಕೆಳಮಹಡಿಯಲ್ಲಿ ಅಂಗಡಿ ಇದ್ದು, ಮೇಲಿನ ಮಹಡಿಗಳಲ್ಲಿ ವಸತಿ ಮನೆಗಳಿದ್ದವು. ಪಕ್ಕದ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಉತ್ಖನನ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮೂರು ಅಂತಸ್ತಿನ ಕಟ್ಟಡವು ಪಕ್ಕದ ನಿರ್ಮಾಣ ಸ್ಥಳದ ಗುಂಡಿಗೆ ಕುಸಿದು ಬಿದ್ದಿದೆ. ಕುಸಿದ ಕಟ್ಟಡದ ಪಕ್ಕದಲ್ಲಿದ್ದ ಮತ್ತೊಂದು ಕಟ್ಟಡದ ಗೋಡೆಯೂ ಹಾನಿಗೊಳಗಾಗಿದೆ. ಅದರ ಗೋಡೆಯ ಒಂದು ಭಾಗ ಕಳಚಿ ಬಿದ್ದಿದ್ದರಿಂದ ಒಳಗಿನ ಕೊಠಡಿಗಳು, ಮಲಗುವ ಕೋಣೆ ಹಾಗೂ ಬಟ್ಟೆಗಳಿಂದ ತುಂಬಿದ್ದ ಕಪಾಟುಗಳು ಹೊರಗೆ ಕಾಣಿಸುತ್ತಿದ್ದವು.

ಆದರೆ ಉತ್ಖನನವೇ ಕಟ್ಟಡ ಕುಸಿಯಲು ಕಾರಣವೇ ಎಂಬುದು ಇನ್ನೂ ಖಚಿತವಾಗಿಲ್ಲ. ನ್ಯೂಯಾರ್ಕ್ ನಗರದ ಕಟ್ಟಡಗಳ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಮೂರು ಅಂತಸ್ತಿನ ಕಟ್ಟಡಕ್ಕೆ ಅನುಮತಿ ದೊರೆತಿತ್ತು; ಒಂಬತ್ತು ಅಂತಸ್ತಿನ ಕಟ್ಟಡದ ಪ್ರಸ್ತಾವನೆಗೆ ಇನ್ನೂ ಅನುಮೋದನೆ ಸಿಕ್ಕಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಯರ್, ಗವರ್ನರ್ ಸಂತಾಪ ಘಟನೆ ಕುರಿತು ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ತಂಡಗಳು ಸಂತ್ರಸ್ತರಿಗೆ ನೆರವಾಗುತ್ತಿದ್ದು, ಜನರು ಅಪಘಾತದ ಸ್ಥಳದಿಂದ ದೂರವಿರಬೇಕು ಎಂದು ಮನವಿ ಮಾಡಿದ್ದಾರೆ. ಫ್ಲಾಟ್‌ಬುಷ್ ಮತ್ತು ಬೆಡ್‌ಫೋರ್ಡ್ ಅವೆನ್ಯೂ ಸುತ್ತಮುತ್ತ ರಸ್ತೆಗಳನ್ನು ಮುಚ್ಚಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಕೂಡ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ