Bus Accident: ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ 32 ಪ್ರಯಾಣಿಕರು ಸಾವು; 20 ಜನರಿಗೆ ಗಾಯ

ಪೆರುವಿನ ರಾಜಧಾನಿ ಲಿಮಾದಿಂದ 60 ಕಿ.ಮೀ ದೂರದಲ್ಲಿರುವ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಅಪಘಾತಕ್ಕೀಡಾದ ಬಸ್​ನಲ್ಲಿ ಒಟ್ಟು 63 ಪ್ರಯಾಣಿಕರು ಇದ್ದರು.

Bus Accident: ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ 32 ಪ್ರಯಾಣಿಕರು ಸಾವು; 20 ಜನರಿಗೆ ಗಾಯ
ಪೆರುವಿನಲ್ಲಿ ನಡೆದ ಬಸ್ ಅಪಘಾತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 01, 2021 | 7:02 PM

ಪೆರು: ಪೆರುವಿನಲ್ಲಿ ಬಸ್​ ಕಂದಕಕ್ಕೆ ಉರುಳಿದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಸಾವನ್ನಪ್ಪಿರುವ ಭೀಕರ ಘಟನೆ ನಿನ್ನೆ ನಡೆದಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆರುವಿನ ರಾಜಧಾನಿ ಲಿಮಾದಿಂದ 60 ಕಿ.ಮೀ ದೂರದಲ್ಲಿರುವ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಅಪಘಾತಕ್ಕೀಡಾದ ಬಸ್​ನಲ್ಲಿ ಒಟ್ಟು 63 ಪ್ರಯಾಣಿಕರು ಇದ್ದರು. ಅವರಲ್ಲಿ 6 ವರ್ಷದ ಬಾಲಕ ಮತ್ತು 3 ವರ್ಷದ ಬಾಲಕಿ ಸೇರಿದಂತೆ 32 ಜನರು ಸಾವನ್ನಪ್ಪಿದ್ದಾರೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ಈ ಅಪಘಾತ ಬೆಳಗಿನ ಜಾವ ನಡೆದಿದ್ದು, ಈ ವೇಳೆ ಬಹುತೇಕ ಪ್ರಯಾಣಿಕರು ನಿದ್ರೆಯ ಮಂಪರಿನಲ್ಲಿದ್ದರು. ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೂ ಘಟನೆಯ ಹಿಂದಿನ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಕಲ್ಲಿಗೆ ಢಿಕ್ಕಿ ಹೊಡೆದಿದ್ದರಿಂದ ಬಸ್​ 650 ಅಡಿ ಆಳದ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ.

ಎರಡು ದಿನಗಳ ಹಿಂದಷ್ಟೇ ಪೆರುವಿನಲ್ಲಿ ಅಮೆಜಾನ್ ನದಿಯಲ್ಲಿ ಎರಡು ದೋಣಿಗಳು ಡಿಕ್ಕಿ ಹೊಡೆದು 22 ಮಂದಿ ಮೃತ ಪಟ್ಟಿದ್ದರು. ಎರಡು ದಿನಗಳ ಹಿಂದೆ ಪೆರುವಿನ ಆಗ್ನೇಯ ಪ್ರದೇಶದಲ್ಲಿ ಬಸ್ ಪ್ರಪಾತಕ್ಕೆ ಉರುಳಿ 17 ಮಂದಿ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.

ಇದನ್ನೂ ಓದಿ: Crime News: ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಮಾಲೀಕನಿಗೆ ಗುಂಡಿಕ್ಕಿ ಕೊಂದ ಸ್ವಿಗ್ಗಿ ಡೆಲಿವರಿ ಬಾಯ್!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Bus Accident: 32 Passengers Killed 20 Injured As Bus Falls Off Cliff In Peru)

Published On - 7:02 pm, Wed, 1 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ