AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು
ವಿಮಾನ ಪತನImage Credit source: ZeeNews
ನಯನಾ ರಾಜೀವ್
|

Updated on:Jul 09, 2023 | 8:23 AM

Share

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್​ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ​​​​ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Plane Crash: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್ ಆಪ್ ಆದ ಕೂಡಲೇ ವಿಮಾನ ಪತನ, ಓರ್ವ ಸಾವು, ಮೂವರಿಗೆ ಗಾಯ

ವರದಿಯ ಪ್ರಕಾರ, ಸೆಸ್ನಾ C550 ವಿಮಾನವು ಲಾಸ್ ವೇಗಾಸ್‌ನಿಂದ ಕ್ಯಾಲಿಫೋರ್ನಿಯಾಗೆ ಹೋಗುತ್ತಿತ್ತು. ವಿಮಾನವು ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 3.15 ಕ್ಕೆ ಟೇಕಾಫ್ ಆಗಿದ್ದು, ಕ್ಯಾಲಿಫೋರ್ನಿಯಾದ ಮುರ್ರಿಯೆಟಾ ನಗರದ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

ಇದಕ್ಕೂ ಮುನ್ನ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ಮಂಗಳವಾರ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪತನಗೊಂಡು ಓರ್ವ ಪ್ರಯಾಣಿಕ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Sun, 9 July 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ