California Flood: ಕ್ಯಾಲಿಫೋರ್ನಿಯಾದಲ್ಲಿ ಭಾರೀ ಪ್ರವಾಹ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕಳೆದ 2 ವಾರಗಳಲ್ಲಿ ಚಂಡಮಾರುತಕ್ಕೆ ಕ್ಯಾಲಿಫೋರ್ನಿಯಾದಲ್ಲಿ ಕನಿಷ್ಠ 19 ಸಾವುಗಳು ಸಂಭವಿಸಿದೆ. ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

California Flood: ಕ್ಯಾಲಿಫೋರ್ನಿಯಾದಲ್ಲಿ ಭಾರೀ ಪ್ರವಾಹ; ಸಾವಿನ ಸಂಖ್ಯೆ 19ಕ್ಕೆ ಏರಿಕೆ
ಕ್ಯಾಲಿಫೋರ್ನಿಯಾದಲ್ಲಿ ಪ್ರವಾಹ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 17, 2023 | 9:31 AM

ನವದೆಹಲಿ: ಕ್ಯಾಲಿಫೋರ್ನಿಯಾದಲ್ಲಿ (California Flood) ಭಾರೀ ಪ್ರವಾಹದಿಂದ 19 ಜನ ಮೃತಪಟ್ಟಿದ್ದಾರೆ. ಇಲ್ಲಿ ಮತ್ತೊಮ್ಮೆ ಭಾರೀ ಮಳೆ, ಗಾಳಿ ಮತ್ತು ಹಿಮ ಆವರಿಸಿದೆ. ಇದರಿಂದಾಗಿ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಮತ್ತು ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸಿಯೆರಾ ನೆವಾಡಾದಾದ್ಯಂತ ಭಾರೀ ಹಿಮಪಾತ ಉಂಟಾಗಿದೆ. ಇಂಟರ್‌ಸ್ಟೇಟ್ 80, ಸ್ಯಾನ್ ಫ್ರಾನ್ಸಿಸ್ಕೊ ​​ಕೊಲ್ಲಿ ಪ್ರದೇಶದಿಂದ ಲೇಕ್ ತಾಹೋ ಸ್ಕೀ ರೆಸಾರ್ಟ್‌ಗಳವರೆಗಿನ ಪ್ರಮುಖ ಹೆದ್ದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ 2 ವಾರಗಳಲ್ಲಿ ಚಂಡಮಾರುತಕ್ಕೆ ಕ್ಯಾಲಿಫೋರ್ನಿಯಾದಲ್ಲಿ ಕನಿಷ್ಠ 19 ಸಾವುಗಳು ಸಂಭವಿಸಿದೆ. ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮರಗಳು ಕೂಡ ನೀರಿನಲ್ಲಿ ಮುಳುಗಿ ಹೋಗಿವೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ ಸೆಂಟ್ರಲ್ ಸಿಯೆರಾ ಸ್ನೋ ಲ್ಯಾಬ್ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದು, ಶುಕ್ರವಾರದಿಂದ 49.6 ಇಂಚುಗಳು ಹಿಮಪಾತವಾಗಿದೆ.

ಇದನ್ನೂ ಓದಿ: South Africa Church: ದಕ್ಷಿಣ ಆಫ್ರಿಕಾದ ಚರ್ಚ್​ ಪ್ರಾರ್ಥನೆ ವೇಳೆ ಪ್ರವಾಹ; 9 ಜನ ಸಾವು, 8 ಮಂದಿ ನಾಪತ್ತೆ

ಹೆಚ್ಚಿನ ತಾಹೋ ಪ್ರದೇಶವನ್ನು ಒಳಗೊಂಡಂತೆ ಕೇಂದ್ರ ಸಿಯೆರಾಕ್ಕೆ ಹಿಮಪಾತದ ಎಚ್ಚರಿಕೆಯನ್ನು ನೀಡಲಾಯಿತು. ಡಿಸೆಂಬರ್ ಅಂತ್ಯದಿಂದ ಕ್ಯಾಲಿಫೋರ್ನಿಯಾದಲ್ಲಿ ಬಿರುಗಾಳಿಗಳ ಸುರಿಮಳೆ ಮತ್ತು ಹಿಮಪಾತವಾಗಿದೆ. ಉತ್ತರ ಕ್ಯಾಲಿಫೋರ್ನಿಯಾದ ಕೆಲವು ಭಾಗಗಳು ವಾರದ ಮಧ್ಯದಲ್ಲಿ ಹೆಚ್ಚಿನ ಮಳೆ ಉಂಟಾಗಲಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಸೋಮವಾರ ಬಿಸಿಲು ಉಂಟಾಗಿದೆ.

ಬರ್ಕ್ಲಿಯ ಕೊಲ್ಲಿಯಾದ್ಯಂತ ಸೋಮವಾರ ಗುಡ್ಡ ಕುಸಿದು, 10 ಮನೆಗಳಿಗೆ ಹಾನಿಯಾಗಿದೆ. ಆದರೆ, ಯಾವುದೇ ಗಾಯಗಳ ವರದಿಯಾಗಿಲ್ಲ. ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಕ್ಯಾಲಿಫೋರ್ನಿಯಾದಲ್ಲಿ ಒಂದು ದೊಡ್ಡ ದುರಂತ ಉಂಟಾಗಿದೆ ಎಂದು ಘೋಷಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್