AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಚುನಾವಣೆಯಲ್ಲಿ ಮಾರ್ಕ್ ಕಾರ್ನಿ ಐತಿಹಾಸಿಕ ಗೆಲುವು; ಭಾರತದ ಪ್ರಧಾನಿ ಮೋದಿ ಅಭಿನಂದನೆ

ಕೆನಡಾ ದೇಶದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಈಗಾಗಲೇ ಊಹಿಸಿದ್ದಂತೆ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಮಾರ್ಕ್ ಕಾರ್ನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನಿಯಮದ ವಿರುದ್ಧ ಸಮರ ಸಾರಿದ್ದರು. ಇದೀಗ ಅವರ ಗೆಲುವು ಅಮೆರಿಕ ಮತ್ತು ಕೆನಡಾ ನಡುವಿನ ಸಂಘರ್ಷ ಮತ್ತು ಪೈಪೋಟಿಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಈ ಬಾರಿಯ ಚುನಾವಣೆಯಲ್ಲಿ ಮಾರ್ಕ್ ಕಾರ್ನಿ ಅವರ ವಿರುದ್ಧ ಖಲಿಸ್ತಾನ್ ಪರ ಹೋರಾಟಗಾರ ಜಗಮೀತ್ ಸಿಂಗ್ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

ಕೆನಡಾ ಚುನಾವಣೆಯಲ್ಲಿ ಮಾರ್ಕ್ ಕಾರ್ನಿ ಐತಿಹಾಸಿಕ ಗೆಲುವು; ಭಾರತದ ಪ್ರಧಾನಿ ಮೋದಿ ಅಭಿನಂದನೆ
Pm Modi Mark Carney
ಸುಷ್ಮಾ ಚಕ್ರೆ
|

Updated on:Apr 29, 2025 | 5:23 PM

Share

ನವದೆಹಲಿ, ಏಪ್ರಿಲ್ 29: ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ (Mark Carney) ನೇತೃತ್ವದ ಲಿಬರಲ್ ಪಕ್ಷವು ಕೆನಡಾ ಚುನಾವಣೆಯಲ್ಲಿ (Canada Elections 2025) ಐತಿಹಾಸಿಕ ಗೆಲುವು ಸಾಧಿಸಿದೆ. ಪಿಯರೆ ಪೊಯ್ಲಿವ್ರೆ ನೇತೃತ್ವದ ಕನ್ಸರ್ವೇಟಿವ್ ಪಕ್ಷವನ್ನು ಸೋಲಿಸಿರುವ ಮಾರ್ಕ್ ಕಾರ್ನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗಳ ವಿರುದ್ಧ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು. 60 ವರ್ಷದ ಕಾರ್ನಿ ಎಂದಿಗೂ ಚುನಾಯಿತ ಹುದ್ದೆಯನ್ನು ಅಲಂಕರಿಸಿಲ್ಲ. ಕಳೆದ ತಿಂಗಳು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ನೀಡಿದ ನಂತರ ಮಾರ್ಕ್ ಕಾರ್ನಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣೆಯಲ್ಲಿಐತಿಹಾಸಿಕ ಗೆಲುವು ಸಾಧಿಸಿದ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ಅಭಿನಂದಿಸಿದ್ದಾರೆ. ಒಟ್ಟಾವಾದ ವ್ಯಾಪಾರ ವೈವಿಧ್ಯೀಕರಣ ಯೋಜನೆಗಳನ್ನು ವೈವಿಧ್ಯಗೊಳಿಸುವ ತನ್ನ ಆಕಾಂಕ್ಷೆಗಳಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪರಿಗಣಿಸಿರುವ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ, ಈ ಚುನಾವಣೆಯಲ್ಲಿ ಗೆದ್ದರೆ ಭಾರತದೊಂದಿಗೆ ಸಂಬಂಧಗಳನ್ನು ಗಟ್ಟಿಗೊಳಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ
Image
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಭಾರತ
Image
ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ, ಶಸ್ತ್ರಾಸ್ತ್ರ ಸರಬರಾಜು ನಿಲ್ಲಿಸಿದ ಟರ್ಕಿ
Image
ಭಾರತದೊಂದಿಗೆ ಯುದ್ಧ ಮಾಡದಿರುವುದೇ ಉತ್ತಮ, ಪಾಕ್ ಪ್ರಧಾನಿಗೆ ನವಾಜ್ ಸಲಹೆ
Image
ಭಾರತದಿಂದ ವಾಯುದಾಳಿಯ ಭಯದಿಂದ ಪಾಕಿಸ್ತಾನದಿಂದ ಸೇನೆ, ಫೈಟರ್ ಜೆಟ್ ನಿಯೋಜನೆ

ಇದನ್ನೂ ಓದಿ: ಕೆನಡಾದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವು; ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬದ ಆಗ್ರಹ

ಮಾರ್ಕ್ ಕಾರ್ನಿ ಅವರಿಗೆ ಎಕ್ಸ್ ಮೂಲಕ ಅಭಿನಂದನೆಗಳನ್ನು ಕೋರಿರುವ ಪ್ರಧಾನಿ ಮೋದಿ, “ಎರಡೂ ರಾಷ್ಟ್ರಗಳ ಜನರಿಗೆ ಹೆಚ್ಚಿನ ಅವಕಾಶಗಳನ್ನು ತೆರೆಯಲು ಎದುರು ನೋಡುತ್ತಿದ್ದೇನೆ. ಭಾರತ ಮತ್ತು ಕೆನಡಾಗಳು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು, ಕಾನೂನಿನ ನಿಯಮಕ್ಕೆ ದೃಢವಾದ ಬದ್ಧತೆ ಮತ್ತು ಜನರಿಂದ ಜನರಿಗೆ ಇರುವ ಸಂಬಂಧಗಳನ್ನು ಹೊಂದಿವೆ. ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ನಮ್ಮ ಜನರಿಗೆ ಹೆಚ್ಚಿನ ಅವಕಾಶಗಳನ್ನು ತೆರೆಯಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಎಕ್ಸ್​ ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ. ಟ್ರುಡೋ ಅಧಿಕಾರಾವಧಿಯಲ್ಲಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದಗೆಟ್ಟಿತ್ತು.

ಇದನ್ನೂ ಓದಿ: ಪಹಲ್ಗಾಮ್ ದಾಳಿ: ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ, ರಾಹುಲ್​

2023ರ ಆರಂಭದಲ್ಲಿ ಖಲಿಸ್ತಾನಿ ಪರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತೀಯ ಏಜೆಂಟರನ್ನು ಸಂಬಂಧಿಸಿರುವುದಾಗಿ ಟ್ರುಡೊ ಹೌಸ್ ಆಫ್ ಕಾಮನ್ಸ್‌ನಲ್ಲಿ ಹೇಳಿಕೆ ನೀಡಿದ್ದರು. ಭಾರತ ಸರ್ಕಾರ ಈ ಹೇಳಿಕೆಯನ್ನು ತಿರಸ್ಕರಿಸಿತ್ತು. ಅಕ್ಟೋಬರ್ 2023ರಲ್ಲಿ ಕೆನಡಾ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಮತ್ತು ಇತರ 5 ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿತು. ಅದಕ್ಕೆ ಪ್ರತಿಕ್ರಿಯೆಯಾಗಿ ಭಾರತ ಕೂಡ 6 ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿತು. ಚುನಾವಣೆಯ ವೇಳೆ ಭಾರತ ಮತ್ತು ಕೆನಡಾ ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ‘ಅತ್ಯಂತ ಮುಖ್ಯ’ ಎಂದು ಬಣ್ಣಿಸುವ ಮೂಲಕ ಮಾರ್ಕ್ ಕಾರ್ನಿ ಭಾರತ-ಕೆನಡಾ ಸಂಬಂಧಗಳ ಪುನರ್‌ಸ್ಥಾಪನೆಯ ಸೂಚನೆ ನೀಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Tue, 29 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ