ಭಾರತ ಹಾಗೂ ಕೆನಡಾ ನಡುವಿನ ಸಂಬಂಧದಲ್ಲಿ ಬಿರುಕು ಮೂಡಲಾರಂಭಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ದೂರಿದೆ. ಕೆನಡಾದ ಗುರುದ್ವಾರದ ಪಾರ್ಕಿಂಗ್ ಬಳಿ ಖಲಿಸ್ತಾನಿ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜರ್ನನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಹಿಂದೆ ಭಾರತದ ಸರ್ಕಾರದ ಕೈವಾಡವಿರುವ ಕುರಿತು ದೇಶದ ಭದ್ರತಾ ಏಜೆನ್ಸಿಗಳು ತನಿಖೆ ನಡೆಸುತ್ತಿವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ.
ಜೂನ್ 18ರಂದು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ನಡೆದಿತ್ತು. ಭಾರತದ ಆತಿಥ್ಯದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ನಾನು ಈ ವಿಚಾರವನ್ನು ಪ್ರಧಾನಿ ಮೋದಿ ಗಮನಕ್ಕೆ ತಂದಿದ್ದೇನೆ, ಹತ್ಯೆ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಭಾರತದ ಸರ್ಕಾರ ಕೆನಡಾದ ತನಿಖೆಗೆ ಸಹಕರಿಸಬೇಕು ಎಂದು ಟ್ರುಡೊ ಹೇಳಿದ್ದಾರೆ.
ಮತ್ತಷ್ಟು ಓದಿ: Khalistan Terrorist: ಲಾಹೋರ್ನಲ್ಲಿ ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ನನ್ನು ಗುಂಡಿಕ್ಕಿ ಹತ್ಯೆ
ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತೀಯ ರಾಜತಾಂತ್ರಿಕರನ್ನು ಉಚ್ಚಾಟನೆ ಮಾಡಲಾಗಿದೆ. ಒಂದುವೇಳೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಸಾಬೀತಾದರೆ ಸಾರ್ವಭೌಮತ್ವದ ಉಲ್ಲಂಘನೆಯಾಗುತ್ತದೆ ಎಂದು ಟ್ರುಡೊ ಹೇಳಿದ್ದಾರೆ.
2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ನಂತರ ನಿಜ್ಜರ್‌ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಹತ್ಯೆಗೆ ಸಂಚು ರೂಪಿಸಿದ್ದು ಖಾಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಕೆನಡಾದಲ್ಲಿ ನೆಲೆಸಿದ್ದ ನಿಜ್ಜರ್ ಕೆಟಿಎಫ್ ಮುಖ್ಯಸ್ಥರಾಗಿದ್ದರು.
ಕೆನಡಾದಲ್ಲಿ ಉಗ್ರರು ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಕೆನಡಾ ಪ್ರಧಾನಿ ಟ್ರುಡೊ ಅವರ ಬಳಿ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ಕೆನಡಾ ಮಾಡಿರುವ ಆರೋಪವನ್ನು ಭಾರತ ತಳ್ಳಿ ಹಾಕಿದೆ, ಜಸ್ಟಿನ್ ಟ್ರುಡೊ ಹೇಳಿಕೆ ಆಧಾರ ರಹಿತವಾದದ್ದು ಎಂದು ಹೇಳಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 am, Tue, 19 September 23