ಭಯೋತ್ಪಾದಕರಿಗೆ ಕೆನಡಾ ಸ್ವರ್ಗ: ನಿಜ್ಜರ್ ಹತ್ಯೆ ಕುರಿತು ಭಾರತದ ಬಗ್ಗೆ ಕೆನಡಾ ಆರೋಪಕ್ಕೆ ಶ್ರೀಲಂಕಾ ಸಚಿವರ ವಿರೋಧ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ, ಶ್ರೀಲಂಕಾ ಭಾರತದ ಬೆಂಬಲಕ್ಕೆ ನಿಂತಿದೆ ಮತ್ತು ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ ಎಂದು ಹೇಳಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವರ ಬಳಿಕ ಇದೀಗ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಾಬ್ರಿ ಕೂಡ ಭಾರತವನ್ನು ಬೆಂಬಲಿಸಿ ಕೆನಡಾ ವಿರುದ್ಧ ಮಾತನಾಡಿದ್ದಾರೆ.

ಶ್ರೀಲಂಕಾ ವಿದೇಶಾಂಗ ಸಚಿವ ಅಲಿ
Follow us
ನಯನಾ ರಾಜೀವ್
|

Updated on: Sep 26, 2023 | 9:31 AM

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ, ಶ್ರೀಲಂಕಾ ಭಾರತದ ಬೆಂಬಲಕ್ಕೆ ನಿಂತಿದೆ ಮತ್ತು ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ ಎಂದು ಹೇಳಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವರ ಬಳಿಕ ಇದೀಗ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಾಬ್ರಿ ಕೂಡ ಭಾರತವನ್ನು ಬೆಂಬಲಿಸಿ ಕೆನಡಾ ವಿರುದ್ಧ ಮಾತನಾಡಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪಗಳನ್ನು ಅತಿರೇಕದ ಮತ್ತು ಪುರಾವೆಯಿಲ್ಲದ ಆರೋಪ ಎಂದು ಕರೆದ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ, ಟ್ರುಡೊ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು.

ಅವರು ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ನಾಜಿಗಳೊಂದಿಗೆ ಸಂಬಂಧ ಹೊಂದಿದ್ದವರಿಗೆ ಅದ್ದೂರಿ ಸ್ವಾಗತವನ್ನು ನೀಡಿದ್ದರು. ಶ್ರೀಲಂಕಾದಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಭಾರತದ ನೆರವಿನ ಕುರಿತು ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಾತನಾಡಿ, ಪರಿಸ್ಥಿತಿ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ, ಹಣದುಬ್ಬರ ಕಡಿಮೆಯಾಗಿದೆ, ರೂಪಾಯಿ ಸ್ಥಿರವಾಗಿದೆ, ಪ್ರವಾಸೋದ್ಯಮ ಹೆಚ್ಚಾಗಿದೆ. 3.9 ಶತಕೋಟಿ ಮೌಲ್ಯದ ವಿವಿಧ ರೀತಿಯ ಸಹಾಯವನ್ನು ನಮಗೆ ಒದಗಿಸಿದ್ದು ಭಾರತ. ನಾವು ಕೃತಜ್ಞರಾಗಿರುತ್ತೇವೆ ಎಂದರು.

ಈ ವರ್ಷದ ಅಕ್ಟೋಬರ್‌ನಲ್ಲಿ ಚೀನಾದ ಸಂಶೋಧನಾ ನೌಕೆ ಶ್ರೀಲಂಕಾದಲ್ಲಿ ಬಂದಿಳಿದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆನಡಾ ಆರೋಪದ ಕುರಿತು ಬಾಂಗ್ಲಾದೇಶದ ವಿದೇಶಾಂಗ ಸಚಿವ ಮಾತನಾಡಿ, ಕೆಲವು ವಿಚಾರದಲ್ಲಿ ಭಾರತದ ಬಗ್ಗೆ ನಮಗೆ ಹೆಮ್ಮೆ ಇದೆ, ಹೆಚ್ಚಾಗಿ ತಿಳಿದಿಲ್ಲವಾದರೂ ಭಾರತ ಕೆಟ್ಟ ಕೆಲಸ ಮಾಡುವುದಿಲ್ಲ ಎನ್ನುವ ನಂಬಿಕೆ ಇದೆ .ಭಾರತವು ಮೌಲ್ಯಗಳು ಮತ್ತು ತತ್ವಗಳನ್ನು ಆಧರಿಸಿದೆ ಎಂದಿದ್ದಾರೆ.

ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ ಹತ್ಯೆ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತ ನಿಮ್ಮ ಬಳಿ ಸಾಕ್ಷ್ಯಗಳಿದ್ದರೆ ನೀಡಿ, ಸುಮ್ಮನೆ ಮನಸ್ಸಿಗೆ ಬಂದಂತೆ ಆರೋಪ ಮಾಡಬೇಡಿ ಎಂದು ಎಚ್ಚರಿಕೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ