AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ

ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ಕೆಟ್ಟದಾಗಿದೆ. ಈ ಮಧ್ಯೆ, ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ
ಖಲಿಸ್ತಾನಿ ಉಗ್ರರುImage Credit source: Hindustan Times
ನಯನಾ ರಾಜೀವ್
|

Updated on:Nov 04, 2024 | 9:28 AM

Share

ಕೆನಡಾದ ದೇವಸ್ಥಾನದಲ್ಲಿ ಖಲಿಸ್ತಾನಿ ಬೆಂಬಲಿಗರು ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ಹಿಂಸಾಚಾರವನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಹಿಂದೂ ದೇವಾಲಯವೊಂದು ಖಲಿಸ್ತಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ ಪೂಜೆಗೆ ಬಂದಿದ್ದ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ವಿಡಿಯೋದಲ್ಲಿ ಕೆಲವರು ಹಿಂದೂ ಸಭಾ ಮಂದಿರದ ಹೊರಗೆ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಕೆನಡಾದಲ್ಲಿ ಖಲಿಸ್ತಾನಿಗಳು ಹಿಂದೂಗಳು ಮತ್ತು ಅವರ ದೇವಾಲಯಗಳನ್ನು ಗುರಿಯಾಗಿಸಿಕೊಂಡ ಘಟನೆ ಇದೇ ಮೊದಲಲ್ಲ. ಜುಲೈನಲ್ಲಿ, ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಯಿತು ಮತ್ತು ಅದರ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳು ಮತ್ತು ಚಿತ್ರಗಳನ್ನು ಬರೆಯಲಾಯಿತು.

ಮತ್ತಷ್ಟು ಓದಿ: Canada Hindu Temple Defaced: ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲೆ ಭಾರತ ವಿರೋಧಿ ಘೋಷಣೆ ಕೆತ್ತಿ ವಿರೂಪಗೊಳಿಸಿದ ಮತಾಂಧರು

ಬ್ರಾಂಪ್ಟನ್​ನಲ್ಲಿರುವ ಹಿಂದೂ ಸಭಾ ಮಂದಿರದ ಸಹಯೋಗದಲ್ಲಿ ನಡೆದ ಶಿಬಿರದ ಹೊರಗೆ ನಡೆದ ಘಟನೆಯನ್ನು ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ಖಂಡಿಸಿದೆ. ಮಕ್ಕಳು, ಮಹಿಳೆಯರು ಮತ್ತು ಪುರುಷರ ಮೇಲೆ ದಾಳಿ ಮಾಡಲಾಗುತ್ತಿದೆ. ಇದೆಲ್ಲವೂ ಖಲಿಸ್ತಾನಿ ರಾಜಕಾರಣಿಗಳ ಸಹಾನುಭೂತಿಯ ಬೆಂಬಲದಲ್ಲಿ ನಡೆಯುತ್ತಿದೆ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ಈ ಘಟನೆಯು ಕೆನಡಾದಲ್ಲಿ ಮತ್ತು ಹೊರಗೆ ವ್ಯಾಪಕ ಟೀಕೆಗೆ ಕಾರಣವಾಯಿತು.

ಜುಲೈ 23, 2024 ರ ಬೆಳಗ್ಗೆ, ಎಡ್ಮಂಟನ್‌ನಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ದೇವಸ್ಥಾನದ ಹೊರಭಾಗದಲ್ಲಿ ಹಿಂದೂ ವಿರೋಧಿ ಚಿತ್ರಗಳು ಮತ್ತು ಘೋಷಣೆಗಳನ್ನು ಬರೆದಿರುವುದು ಕಂಡುಬಂದಿದೆ. ದೇವಾಲಯದ ಗೋಡೆಗಳ ಮೇಲೆ ಹಿಂದೂ ಭಯೋತ್ಪಾದಕರು ಎಂದು ಬರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ-ಕೆನಡಾ ಸಂಸದ ಚಂದ್ರ ಆರ್ಯ ಅವರನ್ನು ಗುರಿಯಾಗಿಸಲಾಗಿತ್ತು.

ಸೆಪ್ಟೆಂಬರ್ 2022 ರಿಂದ ಇದು ನಾಲ್ಕನೇ ಬಾರಿ ಕೆನಡಾದಲ್ಲಿ BAPS ದೇವಾಲಯವನ್ನು ಗುರಿಯಾಗಿಸಿಕೊಂಡಿದೆ. 2022ರಿಂದೀಚೆಗೆ ಕೆನಡಾದಲ್ಲಿರುವ 20ಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿರುವ ಘಟನೆಗಳು ವರದಿಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Mon, 4 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ