ಕೆನಡಾದ ದೇವಸ್ಥಾನದಲ್ಲಿ ಖಲಿಸ್ತಾನಿ ಬೆಂಬಲಿಗರು ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ಹಿಂಸಾಚಾರವನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಹಿಂದೂ ದೇವಾಲಯವೊಂದು ಖಲಿಸ್ತಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ ಪೂಜೆಗೆ ಬಂದಿದ್ದ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ವಿಡಿಯೋದಲ್ಲಿ ಕೆಲವರು ಹಿಂದೂ ಸಭಾ ಮಂದಿರದ ಹೊರಗೆ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಕೆನಡಾದಲ್ಲಿ ಖಲಿಸ್ತಾನಿಗಳು ಹಿಂದೂಗಳು ಮತ್ತು ಅವರ ದೇವಾಲಯಗಳನ್ನು ಗುರಿಯಾಗಿಸಿಕೊಂಡ ಘಟನೆ ಇದೇ ಮೊದಲಲ್ಲ. ಜುಲೈನಲ್ಲಿ, ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಯಿತು ಮತ್ತು ಅದರ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳು ಮತ್ತು ಚಿತ್ರಗಳನ್ನು ಬರೆಯಲಾಯಿತು.
ಮತ್ತಷ್ಟು ಓದಿ: Canada Hindu Temple Defaced: ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲೆ ಭಾರತ ವಿರೋಧಿ ಘೋಷಣೆ ಕೆತ್ತಿ ವಿರೂಪಗೊಳಿಸಿದ ಮತಾಂಧರು
ಬ್ರಾಂಪ್ಟನ್ನಲ್ಲಿರುವ ಹಿಂದೂ ಸಭಾ ಮಂದಿರದ ಸಹಯೋಗದಲ್ಲಿ ನಡೆದ ಶಿಬಿರದ ಹೊರಗೆ ನಡೆದ ಘಟನೆಯನ್ನು ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ಖಂಡಿಸಿದೆ. ಮಕ್ಕಳು, ಮಹಿಳೆಯರು ಮತ್ತು ಪುರುಷರ ಮೇಲೆ ದಾಳಿ ಮಾಡಲಾಗುತ್ತಿದೆ. ಇದೆಲ್ಲವೂ ಖಲಿಸ್ತಾನಿ ರಾಜಕಾರಣಿಗಳ ಸಹಾನುಭೂತಿಯ ಬೆಂಬಲದಲ್ಲಿ ನಡೆಯುತ್ತಿದೆ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ಈ ಘಟನೆಯು ಕೆನಡಾದಲ್ಲಿ ಮತ್ತು ಹೊರಗೆ ವ್ಯಾಪಕ ಟೀಕೆಗೆ ಕಾರಣವಾಯಿತು.
PRESS RELEASE
“Violent disruption outside consular camp in Brampton, Ontario (Nov 3)”@MEAIndia @IndianDiplomacy @diaspora_india @cgivancouver @IndiainToronto pic.twitter.com/V7QNMmA4eR
— India in Canada (@HCI_Ottawa) November 4, 2024
ಜುಲೈ 23, 2024 ರ ಬೆಳಗ್ಗೆ, ಎಡ್ಮಂಟನ್‌ನಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ದೇವಸ್ಥಾನದ ಹೊರಭಾಗದಲ್ಲಿ ಹಿಂದೂ ವಿರೋಧಿ ಚಿತ್ರಗಳು ಮತ್ತು ಘೋಷಣೆಗಳನ್ನು ಬರೆದಿರುವುದು ಕಂಡುಬಂದಿದೆ. ದೇವಾಲಯದ ಗೋಡೆಗಳ ಮೇಲೆ ಹಿಂದೂ ಭಯೋತ್ಪಾದಕರು ಎಂದು ಬರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ-ಕೆನಡಾ ಸಂಸದ ಚಂದ್ರ ಆರ್ಯ ಅವರನ್ನು ಗುರಿಯಾಗಿಸಲಾಗಿತ್ತು.
A red line has been crossed by Canadian Khalistani extremists today.
The attack by Khalistanis on the Hindu-Canadian devotees inside the premises of the Hindu Sabha temple in Brampton shows how deep and brazen has Khalistani violent extremism has become in Canada.
I begin to feel… pic.twitter.com/vPDdk9oble— Chandra Arya (@AryaCanada) November 3, 2024
ಸೆಪ್ಟೆಂಬರ್ 2022 ರಿಂದ ಇದು ನಾಲ್ಕನೇ ಬಾರಿ ಕೆನಡಾದಲ್ಲಿ BAPS ದೇವಾಲಯವನ್ನು ಗುರಿಯಾಗಿಸಿಕೊಂಡಿದೆ. 2022ರಿಂದೀಚೆಗೆ ಕೆನಡಾದಲ್ಲಿರುವ 20ಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿರುವ ಘಟನೆಗಳು ವರದಿಯಾಗಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:06 am, Mon, 4 November 24