AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
Follow us
ನಯನಾ ರಾಜೀವ್
|

Updated on: Feb 23, 2023 | 8:38 AM

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ