ಭಾರತದ ಎಚ್ಚರಿಕೆ ಬೆನ್ನಲ್ಲೇ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡ ಕೆನಡಾ

India- Canada Row: ಕೆನಡಾ ಮುಂಬೈ, ಬೆಂಗಳೂರು ಮತ್ತು ಚಂಡೀಗಢದಲ್ಲಿರುವ ತನ್ನ ಕಾನ್ಸುಲೇಟ್‌ಗಳಲ್ಲಿ ಎಲ್ಲಾ ವೈಯಕ್ತಿಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕಾನ್ಸುಲರ್ ನೆರವು ಅಗತ್ಯವಿರುವವರು ನವದೆಹಲಿಯಲ್ಲಿರುವ ರಾಯಭಾರ ಕಚೇರಿಗೆ ಭೇಟಿ ನೀಡುವಂತೆ ಅಥವಾ ಫೋನ್ ಅಥವಾ ಇಮೇಲ್ ಮೂಲಕ ಸಂಪರ್ಕಿಸಲು ಒತ್ತಾಯಿಸಲಾಗಿದೆ.

ಭಾರತದ ಎಚ್ಚರಿಕೆ ಬೆನ್ನಲ್ಲೇ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡ ಕೆನಡಾ
ಕೆನಡಾ- ಭಾರತ
Follow us
ರಶ್ಮಿ ಕಲ್ಲಕಟ್ಟ
|

Updated on: Oct 20, 2023 | 12:46 PM

ದೆಹಲಿ ಅಕ್ಟೋಬರ್ 20: ಖಲಿಸ್ತಾನಿ ಭಯೋತ್ಪಾದಕನ (Khalistani terrorist) ಹತ್ಯೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದ ನಡುವೆಯೇ ಭಾರತದ ಎಚ್ಚರಿಕೆ ನಂತರ ಕೆನಡಾ (Canada) ಇಂದು (ಶುಕ್ರವಾರ) 41 ರಾಜತಾಂತ್ರಿಕರನ್ನು ಭಾರತದಿಂದ ಹಿಂತೆಗೆದುಕೊಂಡಿದೆ. ವಿನಾಯಿತಿ ಕಳೆದುಕೊಳ್ಳುವುದು ಅಧಿಕಾರಿಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಕೆನಡಾ ಹೇಳಿದೆ. ಕೆನಡಾದ ಹತ್ತಾರು ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ನಡೆಯುತ್ತಿರುವ ಗದ್ದಲದ ನಡುವೆ ಭಾರತವನ್ನು ತೊರೆದಿದ್ದಾರೆ.  ಏಕೆಂದರೆ ಭಾರತವು ಅವರ ರಾಜತಾಂತ್ರಿಕ ವಿನಾಯಿತಿಯನ್ನು  ಹಿಂತೆಗೆದುಕೊಳ್ಳಲು ಯೋಜಿಸಿದೆ ಎಂದು ಕೆನಡಾದ ವಿದೇಶಾಂಗ ಸಚಿವ ಮೆಲಾನಿ ಜೋಲಿ (Melanie Joly) ಹೇಳಿದ್ದಾರೆ. ಭಾರತದಲ್ಲಿ ಕೆನಡಾದ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್‌ಗಳಿಗೆ ಕೇವಲ 21 ಅಧಿಕಾರಿಗಳನ್ನು ಮಾತ್ರ ಇದ್ದಾರೆ ಎಂದು ಜೋಲಿ ಹೇಳಿದ್ದಾರೆ.

ಕಡಿಮೆ ರಾಜತಾಂತ್ರಿಕ ಸಿಬ್ಬಂದಿಯೊಂದಿಗೆ, ಭಾರತದಲ್ಲಿ ಕೆನಡಾದ ಕಚೇರಿಗಳಿಂದ ಕಡಿಮೆ ಸೇವೆ ಇರುತ್ತದೆ ಹಾಗಾಗಿ ವೀಸಾ ಮತ್ತು ವಲಸೆಗಾಗಿರುವ ಪ್ರಕ್ರಿಯೆ ಸಮಯ ಹಿಡಿಯುತ್ತದೆ. ವಲಸೆ ಮತ್ತು ವೀಸಾ ಪ್ರಕ್ರಿಯೆ “ತೀವ್ರವಾಗಿ ಮೊಟಕುಗೊಳಿಸಲಾಗುವುದು” ಎಂದು ಕೆನಡಾದ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತಕ್ಕೆ ಪ್ರಯಾಣಿಸುವ ನಾಗರಿಕರಿಗೆ ಕೆನಡಾ ಸಲಹೆಯನ್ನು ನೀಡಿದ್ದು ಎಚ್ಚರಿಕೆ ವಹಿಸುವಂತೆ ಒತ್ತಾಯಿಸಿದೆ. ದೇಶದಾದ್ಯಂತ ಭಯೋತ್ಪಾದಕ ದಾಳಿಯ ಬೆದರಿಕೆಯಿಂದಾಗಿ ಭಾರತದಲ್ಲಿ ಹೆಚ್ಚಿನ ಮಟ್ಟದ ಎಚ್ಚರಿಕೆಯನ್ನು ವಹಿಸಿ ಎಂದು ಕೆನಡಾ ಹೇಳಿದೆ.

ಕೆನಡಾ ಮುಂಬೈ, ಬೆಂಗಳೂರು ಮತ್ತು ಚಂಡೀಗಢದಲ್ಲಿರುವ ತನ್ನ ಕಾನ್ಸುಲೇಟ್‌ಗಳಲ್ಲಿ ಎಲ್ಲಾ ವೈಯಕ್ತಿಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕಾನ್ಸುಲರ್ ನೆರವು ಅಗತ್ಯವಿರುವವರು ನವದೆಹಲಿಯಲ್ಲಿರುವ ರಾಯಭಾರ ಕಚೇರಿಗೆ ಭೇಟಿ ನೀಡುವಂತೆ ಅಥವಾ ಫೋನ್ ಅಥವಾ ಇಮೇಲ್ ಮೂಲಕ ಸಂಪರ್ಕಿಸಲು ಒತ್ತಾಯಿಸಲಾಗಿದೆ.

ಕಳೆದ ವರ್ಷ ಕೆನಡಾದಲ್ಲಿ ಖಾಯಂ ನಿವಾಸಿಗಳು, ತಾತ್ಕಾಲಿಕ ವಿದೇಶಿ ಕೆಲಸಗಾರರು ಮತ್ತು ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಉನ್ನತ ಮೂಲ ಭಾರತವಾಗಿತ್ತು. ಕೆನಡಾದ ವಲಸೆ ಸಚಿವ ಮಾರ್ಕ್ ಮಿಲ್ಲರ್ ಅವರು ಭಾರತೀಯ ವಲಸಿಗರನ್ನು ಸ್ವಾಗತಿಸುವುದನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ವೀಸಾ ಪ್ರಕ್ರಿಯೆಯು ಕನಿಷ್ಠ ಅಲ್ಪಾವಧಿಯಿಂದ ಮಧ್ಯಮ ಅವಧಿಯವರೆಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

ಸಿಬ್ಬಂದಿ ಕಡಿತವು ಡಿಸೆಂಬರ್ ಅಂತ್ಯದ ವೇಳೆಗೆ 17,500 ಅಪ್ಲಿಕೇಶನ್ ಬಾಕಿ ಉಳಿದಿದೆ, ಆದರೂ ಪ್ರಕ್ರಿಯೆಯು 2024 ರ ಆರಂಭದಲ್ಲಿ ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ಕೆನಡಾ ಅಧಿಕಾರಿಯನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಇದನ್ನೂ ಓದಿ:  ಭಾರತದಲ್ಲಿ ಬೆದರಿಕೆ ಅಥವಾ ಕಿರುಕುಳದ ಸಾಧ್ಯತೆಯ ಬಗ್ಗೆ ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿದ ಕೆನಡಾ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ಉಂಟಾಗಿದೆ. 2020 ರಲ್ಲಿ ಭಾರತವು ಭಯೋತ್ಪಾದಕ ಎಂದು ಹೆಸರಿಸಲ್ಪಟ್ಟ ನಿಜ್ಜಾರ್ ನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದಲ್ಲಿ ಮುಸುಕುಧಾರಿ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಕೆನಡಾದ ಭದ್ರತಾ ಏಜೆನ್ಸಿಗಳು ಭಾರತ ಸರ್ಕಾರದ ಏಜೆಂಟ್‌ಗಳು ಮತ್ತು ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜಾರ್ ಅವರ ಹತ್ಯೆಯ ನಡುವಿನ ಸಂಭಾವ್ಯ ಸಂಪರ್ಕದ ವಿಶ್ವಾಸಾರ್ಹ ಆರೋಪಗಳನ್ನು ಸಕ್ರಿಯವಾಗಿ ಅನುಸರಿಸುತ್ತಿವೆ. ಕೆನಡಾದ ನೆಲದಲ್ಲಿ ಕೆನಡಾದ ಪ್ರಜೆಯ ಹತ್ಯೆಯಲ್ಲಿ ವಿದೇಶಿ ಸರ್ಕಾರದ ಯಾವುದೇ ಒಳಗೊಳ್ಳುವಿಕೆ ನಮ್ಮ ಸಾರ್ವಭೌಮತ್ವದ ಸ್ವೀಕಾರಾರ್ಹವಲ್ಲದ ಉಲ್ಲಂಘನೆಯಾಗಿದೆ ಎಂದು ಟ್ರುಡೊ ಹೇಳಿದರು.

ಟ್ರುಡೊ ಅವರ, ಆರೋಪಗಳನ್ನು ಭಾರತ “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಕರೆದಿದೆ. ಇದರ ನಂತರ ಎರಡೂ ಕಡೆಯವರು ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ್ದು ಮತ್ತು ಪ್ರಯಾಣ ಸಲಹೆಗಳನ್ನು ನೀಡಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ