AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Capital Riot Case: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಶಿಫಾರಸು

ಕಳೆದ ವರ್ಷ ಯುಎಸ್ ಕ್ಯಾಪಿಟಲ್ ಮೇಲಿನ ದಾಳಿಯ ತನಿಖೆ ನಡೆಸಿದ ಕಾಂಗ್ರೆಸ್ ಸಮಿತಿಯು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಶಿಫಾರಸು ಮಾಡಿದೆ.

Capital Riot Case: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಶಿಫಾರಸು
Donald Trump
TV9 Web
| Edited By: |

Updated on: Dec 20, 2022 | 7:20 AM

Share

ಕಳೆದ ವರ್ಷ ಯುಎಸ್ ಕ್ಯಾಪಿಟಲ್ ಮೇಲಿನ ದಾಳಿಯ ತನಿಖೆ ನಡೆಸಿದ ಕಾಂಗ್ರೆಸ್ ಸಮಿತಿಯು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಶಿಫಾರಸು ಮಾಡಿದೆ.ಇದರಿಂದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2024ರ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಗೆ ಹಿನ್ನಡೆಯಾಗಬಹುದು. ಕಳೆದ ವರ್ಷ ಯುಎಸ್ ಕ್ಯಾಪಿಟಲ್ ಮೇಲಿನ ದಾಳಿಯ ತನಿಖೆ ನಡೆಸಿದ ಕಾಂಗ್ರೆಸ್ ಸಮಿತಿಯು ತನ್ನ ವರದಿಯನ್ನು ನೀಡಿದೆ.

ಈ ವರದಿಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಮಿತಿ ಶಿಫಾರಸು ಮಾಡಿದೆ.ದಂಗೆಯನ್ನು ಪ್ರಚೋದಿಸುವ, ಅಧಿಕೃತ ಪ್ರಕ್ರಿಯೆಗೆ ಅಡ್ಡಿಪಡಿಸುವ, ಯುಎಸ್ ಸರ್ಕಾರವನ್ನು ವಂಚಿಸುವ ಪಿತೂರಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುವುದಕ್ಕಾಗಿ ಟ್ರಂಪ್ ವಿರುದ್ಧ ಇಂತಹ ಕ್ರಮವನ್ನು ತೆಗೆದುಕೊಳ್ಳುವಂತೆ ಹೌಸ್ ಪ್ಯಾನೆಲ್ ಸರ್ವಾನುಮತದಿಂದ ನ್ಯಾಯಾಂಗ ಇಲಾಖೆಯನ್ನು ಒತ್ತಾಯಿಸಿತು.

ಉದ್ದೇಶಪೂರ್ವಕವಾಗಿ ಆ ಘಟನೆ ನಡೆಸಲಾಗಿದೆ ತನಿಖೆಯ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಮ್ಮ ಸಂವಿಧಾನದ ಅಡಿಯಲ್ಲಿ ಶಾಂತಿಯುತ ಅಧಿಕಾರದ ಪರಿವರ್ತನೆಯನ್ನು ಅಡ್ಡಿಪಡಿಸುವ ಉದ್ದೇಶದಿಂದ ಈ ಘಟನೆಯನ್ನು ಆಯೋಜಿಸಿದ್ದಾರೆ ಎಂಬುದಕ್ಕೆ ಸಮಿತಿಯು ಮಹತ್ವದ ಪುರಾವೆಗಳನ್ನು ಕಂಡುಕೊಂಡಿದೆ ಎಂದು ಜೆಮೀ ರಾಸ್ಕಿನ್ ಹೇಳಿದರು.

ಮತ್ತಷ್ಟು ಓದಿ: Donald Trump: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ; ಡೊನಾಲ್ಡ್​ ಟ್ರಂಪ್ ಘೋಷಣೆ

6 ಜನವರಿ 2021 ರಂದು ಕ್ಯಾಪಿಟಲ್ ಹಿಲ್‌ನಲ್ಲಿ ಹಿಂಸಾಚಾರ ನಡೆದಿತ್ತು

ಜನವರಿ 6, 2021 ರಂದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಚುನಾವಣೆಯಲ್ಲಿ ಸೋಲಿನ ನಂತರ ಯುಎಸ್ ಸಂಸತ್ತಿನ ಕ್ಯಾಪಿಟಲ್ ಹಿಲ್ ಮೇಲೆ ದಾಳಿ ನಡೆಸಿದ್ದರು. ​

ನವೆಂಬರ್​ನಲ್ಲಿ ನಡೆದ ಮತದಾನದಲ್ಲಿ ಬೈಡನ್ ಅವರ ವಿಜಯವನ್ನು ಕಾಂಗ್ರೆಸ್ ಪ್ರಾಮಾಣಿಕರಿಸುತ್ತಿದ್ದಂತೆ ಚುನಾವಣಾ ಫಲಿತಾಂಶಗಳ ವಿರುದ್ಧ ಹೋರಾಡಲು ಟ್ರಂಪ್ ತಮ್ಮ ಬೆಂಬಲಿಗರಿಗೆ ಪ್ರಚೋದನೆ ನೀಡಿದ್ದರು. ಈ ಕಾರಣಕ್ಕಾಗಿ ಕ್ಯಾಪಿಟಲ್​ನಲ್ಲಿ ಹಿಂದೆಂದೂ ಆಗದ ಘಟನೆಗಳು ಜರುಗಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ