ಅಮೆರಿಕ: ಚಿಕಾಗೋದ 2 ಮನೆಗಳಲ್ಲಿ ಗುಂಡಿನ ದಾಳಿ, 8 ಮಂದಿ ಸಾವು
ಅಮೆರಿಕದ ಚಿಕಾಗೋದ ಎರಡು ಮನೆಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಇಲಿನಾಯ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕದ ಚಿಕಾಗೋದ ಎರಡು ಮನೆಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿ(Shootout)ಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಇಲಿನಾಯ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೂಟರ್‌ಗೆ ಮೃತರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಎಫ್‌ಬಿಐ ಕಾರ್ಯಪಡೆಯ ನೆರವಿನೊಂದಿಗೆ ಆರೋಪಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಆತನ ಮನೆಯಿಂದ ವ್ಯಕ್ತಿಯ ಶವ ಪತ್ತೆಯಾಗಿದೆ.
ಉಳಿದ ಏಳು ಮಂದಿಯ ಶವಗಳು ಸೋಮವಾರ ಪತ್ತೆಯಾಗಿವೆ. ಸೋಮವಾರ ಎರಡು ಮನೆಗಳಲ್ಲಿ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ನಾನು 29 ವರ್ಷಗಳಿಂದ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ, ಆದರೆ ಇಂತಹ ಅಪರಾಧವನ್ನು ನೋಡಿರಲಿಲ್ಲ ಎಂದಿದ್ದಾರೆ. ಜನರು ಯಾವ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ, ಮರಣೋತ್ತರ ಪರೀಕ್ಷೆಗಳು ಬಾಕಿ ಇವೆ ಎಂದು ಹೇಳಿದರು.
ಮತ್ತಷ್ಟು ಓದಿ: ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಮನೆಗಳಲ್ಲಿ ಸೋಮವಾರ ಕಂಡುಬಂದಿರುವ ಶವಗಳು ಒಂದೇ ಕುಟುಂಬದವರದ್ದು ಎನ್ನಲಾಗಿದೆ. ಜೋಲಿಯೆಟ್ ಪೋಲೀಸ್ ಸೋಮವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹಲವುಜನರು ಸತ್ತಿರುವ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ವ್ಯಕ್ತಿಯ ಫೋಟೋ ಮತ್ತು ವಾಹನದ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ ಎಂದು ಹೇಳಿದರು. ಅಧಿಕಾರಿಗಳು ವಾಹನವನ್ನು ಕೆಂಪು ಟೊಯೊಟಾ ಎಂದು ಗುರುತಿಸಿದ್ದಾರೆ. ವಿಲ್ ಕೌಂಟಿ ಶೆರಿಫ್ ಕಚೇರಿಯು ಫೇಸ್‌ಬುಕ್ ಮೂಲಕ ಒಂದು ಕಾರಿನ ಚಿತ್ರವನ್ನು ಹಂಚಿಕೊಂಡಿದೆ.
ಕೆಲವು ತಿಂಗಳ ಹಿಂದೆ ನಡೆದಿತ್ತು ಗುಂಡಿನ ದಾಳಿ ಕಳೆದ ಅಕ್ಟೋಬರ್ನಲ್ಲಿ ಅಮೆರಿಕದಲ್ಲಿ ಗುಂಡಿನ ದಾಳಿ ನಡೆದಿದ್ದು, 22ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಪ್ರವೇಶಿಸುತ್ತಿರುವುದು ಕಂಡುಬಂದಿತ್ತು, ಬಳಿಕ ಆತ ತಲೆಮರೆಸಿಕೊಂಡಿದ್ದ. ಫೋಟೊದಲ್ಲಿ ಉದ್ದನೆಯ ತೋಳಿನ ಅಂಗಿ ಮತ್ತು ಜೀನ್ಸ್ ಧರಿಸಿರುವ ಗಡ್ಡಧಾರಿಯೊಬ್ಬ ಫೈರಿಂಗ್ ರೈಫಲ್ ಹಿಡಿದು ಗುಂಡು ಹಾರಿಸುತ್ತಿರುವುದು ಕಂಡುಬಂದಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:51 am, Tue, 23 January 24