China Hospital Fire: ಚೀನಾದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, 21 ಮಂದಿ ಸಜೀವ ದಹನ

ಚೀನಾ(China)ದ ರಾಜಧಾನಿ ಬೀಜಿಂಗ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 21 ಮಂದಿ ಸಜೀವ ದಹನವಾಗಿದ್ದಾರೆ.

China Hospital Fire: ಚೀನಾದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, 21 ಮಂದಿ ಸಜೀವ ದಹನ
ಚೀನಾ ಆಸ್ಪತ್ರೆ
Follow us
|

Updated on: Apr 19, 2023 | 7:49 AM

ಚೀನಾ(China)ದ ರಾಜಧಾನಿ ಬೀಜಿಂಗ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 21 ಮಂದಿ ಸಜೀವ ದಹನವಾಗಿದ್ದಾರೆ. ಬೀಜಿಂಗ್​ನ ಚಾಂಗ್​ಫೆಂಗ್​ ಆಸ್ಪತ್ರೆಯ ಪೂರ್ವ ವಿಭಾಗದಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 21 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 71 ರೋಗಿಗಳನ್ನು ರಕ್ಷಣಾ ತಂಡ ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಟ್ಟಿದೆ. ಆದರೆ ಈ ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜನರು ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಜಿಗಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ಓದಿ: Dubai building fire: ದುಬೈನಲ್ಲಿ ಅಗ್ನಿ ದುರಂತ ಸಂಭವಿಸಿದ ಹೊತ್ತಲ್ಲಿ ಭಾರತೀಯ ದಂಪತಿ ಇಫ್ತಾರ್​​ಗಾಗಿ ಸಿದ್ಧತೆ ನಡೆಸುತ್ತಿದ್ದರು

ಹಗ್ಗದಲ್ಲಿ ನೇತುಹಾಕಿಕೊಂಡು ಓಡಿಹೋಗುವುದು. ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಎಸಿ ಮೇಲೆ ಹಲವರು ಕುಳಿತು ಅಥವಾ ನಿಂತಿದ್ದಾರೆ. ವೈರಲ್ ವಿಡಿಯೋದಲ್ಲಿ ಇದನ್ನು ಸ್ಪಷ್ಟವಾಗಿ ಕಾಣಬಹುದು.

ಮಂಗಳವಾರವೇ ಚೀನಾದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಚೀನಾದ ಪೂರ್ವ ಝೆಜಿಯಾಂಗ್ ಪ್ರಾಂತ್ಯದ ಜಿನ್ಹುವಾ ನಗರದ ವುಯಿ ಕೌಂಟಿಯಿಂದ ನಡೆದಿದೆ. ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಯಲ್ಲಿ ಹತ್ತಾರು ಜನರು ಗಾಯಗೊಂಡರು. ಹೇಗೋ ಬೆಂಕಿಯನ್ನು ನಿಯಂತ್ರಿಸಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ