China: ವರುಣ ಆರ್ಭಟಕ್ಕೆ ತತ್ತರಿಸಿದ ಚೀನಾ, 15 ಸಾವು, 4 ಜನ ನಾಪತ್ತೆ

ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ಬುಧವಾರ ತಿಳಿಸಿದೆ.

China: ವರುಣ ಆರ್ಭಟಕ್ಕೆ ತತ್ತರಿಸಿದ ಚೀನಾ, 15 ಸಾವು, 4 ಜನ ನಾಪತ್ತೆ
ಚೀನಾದಲ್ಲಿ ಭಾರಿ ಮಳೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 05, 2023 | 1:11 PM

ಬೀಜಿಂಗ್: ಭಾರತದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಅಷ್ಟೊಂದು ಹಾನಿ ಉಂಟಾಗಿಲ್ಲ, ಆದರೆ ಹೊರದೇಶಗಳಲ್ಲಿ ಭಾರೀ ಮಳೆಯಿಂದ ದೊಡ್ಡ ಪ್ರಮಾಣದ ನಷ್ಟ ಉಂಟಾಗಿದೆ. ಇದೀಗ ಚೀನಾದಲ್ಲಿ 15 ಜನ ಸಾವನ್ನಪ್ಪಿದ್ದು, ಹಲವು ಜನರು ಕಾಣೆಯಾಗಿದ್ದಾರೆ. ಬಿಪರ್​ಜಾಯ್ ಚಂಡಮಾರುತದಿಂದ ಭಾರತ, ಚೀನಾ, ಪಾಕಿಸ್ತಾನದ ಅನೇಕ ಭಾಗಗಳಿಗೆ ಇದರ ಪರಿಣಾಮ ಎದುರಿಸಿತ್ತು. ಭಾರತದ ಗುಜರಾತ್​​ ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿತ್ತು. ಪಾಕಿಸ್ತಾನದಲ್ಲೂ ಭಾರಿ ಮಳೆಯಾಗಿದೆ. ಇನ್ನೂ ಚೀನಾ ವರುಣ ಆರ್ಭಟಕ್ಕೆ ತತ್ತರಿಸಿದೆ.

ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ಬುಧವಾರ ತಿಳಿಸಿದೆ. ಸೋಮವಾರದಿಂದ ಸುರಿದ ಭಾರಿ ಮಳೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನೈಋತ್ಯ ಚೀನಾದ ಚಾಂಗ್ಕಿಂಗ್ ಪುರಸಭೆಯಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಹೇಳಿದೆ.

ಮಧ್ಯ ಮತ್ತು ನೈಋತ್ಯ ಚೀನಾ ದೊಡ್ಡ ಪ್ರದೇಶಗಳಾಗಿದ್ದು, ಇಲ್ಲಿ ಈಗಾಗಲೇ ಮಳೆಯಿಂದಾಗುವ ವಿಪತ್ತುಗಳ ಬಗ್ಗೆ ಅಧಿಕಾರಿಗಳು ಮಂಗಳವಾರ ಎಚ್ಚರಿಕೆಯನ್ನು ನೀಡಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎಲ್ಲಾ ಹಂತಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳೊಂದಿ ಸಭೆ ನಡೆಸಿದ್ದು, ಈಗಾಗಲೇ ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ:China: ಪರ್ವತ ಕುಸಿದು 14 ಜನರು ಸಾವು, ಐವರು ನಾಪತ್ತೆ

ಪ್ರವಾಹದ ವಿರುದ್ಧ ಹೋರಾಡಲು ಅಧಿಕಾರಿಗಳು ಮುಂದಾಳತ್ವ ವಹಿಸಬೇಕು, ಜನರ ಸುರಕ್ಷತೆ ಮೊದಲ ಆದ್ಯತೆ ಮತ್ತು ಎಲ್ಲಾ ರೀತಿಯ ನಷ್ಟಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಎಂದು ಚೀನಾ ಅಧ್ಯಕ್ಷರು ಹೇಳಿದ್ದಾರೆ ಎಂದು ರಾಜ್ಯದ ಸುದ್ದಿ ಸಂಸ್ಥೆಗಳು ಹೇಳಿದೆ.

ಸಿಚುವಾನ್‌ನಲ್ಲಿ ಈ ತಿಂಗಳು ಭಾರೀ ಮಳೆಯಿಂದ 460,000 ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕ್ಸಿನ್ಹುವಾ ವರದಿ ಮಾಡಿದೆ. ಮಳೆಯ ಪರಿಣಾಮದಿಂದ ಸುಮಾರು 85,000 ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಈ ವಾರ ದೇಶದ ಕೆಲವು ಭಾಗಗಳಲ್ಲಿ ಸಂಭವನೀಯ ಮಣ್ಣಿನ ಕುಸಿತ ಮತ್ತು ಪರ್ವತ ಪ್ರದೇಶಗಳ ಕುಸಿತದಿಂದ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:06 pm, Wed, 5 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ