AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮುಂಬೈ ದಾಳಿ ಸಂಚುಕೋರ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆ

ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕೂಡ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿತ್ತು.

26/11ರ ಮುಂಬೈ ದಾಳಿ ಸಂಚುಕೋರ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆ
ಸಾಜಿದ್​ ಮಿರ್Image Credit source: ANI
Ganapathi Sharma
|

Updated on: Jun 20, 2023 | 9:19 PM

Share

ನವದೆಹಲಿ: 26/11ರ ಮುಂಬೈ ದಾಳಿಯ (26/11 Attack) ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್​ ಮಿರ್​​ನನ್ನು (Sajid Mir) ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ (China) ತಡೆಯೊಡ್ಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್​​ ಖೈದಾ ಸ್ಯಾಂಕ್ಷನ್ಸ್ ಕಮಿಟಿ’ಯ ಅಡಿಯಲ್ಲಿ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಬಗ್ಗೆ ಅಮೆರಿಕ ಪ್ರಸ್ತಾವ ಸಲ್ಲಿಸಿತ್ತು.

ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕೂಡ ಸಾಜಿದ್​ ಮಿರ್​​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿತ್ತು.

ಮಿರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ. 26/11 ಮುಂಬೈ ದಾಳಿಯಲ್ಲಿ ಶಾಮೀಲಾದ ವಿಚಾರವಾಗಿ ಅಮೆರಿಕವು ಆತನ ಮೇಲೆ 5 ದಶಲಕ್ಷ ಡಾಲರ್ ಇನಾಮು ಘೋಷಿಸಿದೆ.

ಜೂನ್‌ನಲ್ಲಿ, ಪಾಕಿಸ್ತಾನದ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಮೀರ್‌ಗೆ 15 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಮಿರ್ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದರೆ ಪಾಶ್ಚಿಮಾತ್ಯ ದೇಶಗಳು ಪಾಕಿಸ್ತಾನದ ವಾದವನ್ನು ಒಪ್ಪಿರಲಿಲ್ಲ. ಮಿರ್ ಸಾವಿಗೆ ಸಂಬಂಧಿಸಿದ ಸಾಕ್ಷ್ಯಕ್ಕಾಗಿ ಒತ್ತಾಯಿಸಿದ್ದವು. ನಂತರ ಪಾಕಿಸ್ತಾನ ವರಸೆ ಬದಲಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ