ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. […]

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: Feb 02, 2020 | 7:35 AM

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ.

ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್:
ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಪ್ರತಿಭಟನೆ ನಿಯಂತ್ರಿಸಲು ಹರಸಾಹಸ:
ಚಿಲಿಯಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಭೀಕರ ರೂಪ ತಾಳಿದೆ. ನಿರುದ್ಯೋಗ, ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಇದೀಗ ಹೋರಾಟಗಾರರು ಹಿಂಸೆಗೆ ಇಳಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us