ಬೀಜಿಂಗ್: ಚೀನಾಗೆ ಬರುವ ಪ್ರವಾಸಿಗರಿಂದ ಚೀನಾದಲ್ಲಿ ಇದ್ದಕ್ಕಿದ್ದಂತೆ ಕೊವಿಡ್ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಬೇರೆ ದೇಶಗಳಿಗೆ ಚೀನಾದಿಂದ ಹೋಗುವ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಚೀನಾದಲ್ಲಿ ಶಾಲೆಗಳನ್ನು ಮುಚ್ಚಲಾಗಿದ್ದು, ಕೊರೊನಾ ಸೋಂಕು ತಡೆಯಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ.
ವಿಶ್ವದಾದ್ಯಂತ ಕೊರೊನಾ ಲಸಿಕೆಗಳನ್ನು ನೀಡುತ್ತಿರುವುದರಿಂದ ಕೊವಿಡ್ ಕೇಸುಗಳು ಕಡಿಮೆಯಾಗುತ್ತಿವೆ. ಆದರೆ, ಚೀನಾದಲ್ಲಿ ಮಾತ್ರ ಪರಿಸ್ಥಿತಿ ಬಿಗಡಾಯಿಸುತ್ತಲೇ ಇದೆ. ಪ್ರಪಂಚದಲ್ಲಿ ಕೊರೊನಾ ಲಾಕ್‌ಡೌನ್ ನಿಯಮಗಳು ಸಡಿಲವಾಗುತ್ತಿದ್ದರೂ ಚೀನಾದಲ್ಲಿ ಮಾತ್ರ ಇನ್ನೂ ಕೊರೊನಾ ಕೇಸುಗಳು ಕಡಿಮೆಯಾಗಿಲ್ಲ. ಚೀನಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಲು ಅಲ್ಲಿಗೆ ಬಂದಿದ್ದ ಪ್ರವಾಸಿಗರ ಗುಂಪಿನಲ್ಲಿದ್ದ ವೃದ್ಧ ದಂಪತಿ ಕಾರಣ ಎಂದು ಹೇಳಲಾಗುತ್ತಿದೆ. ಅವರು ಸಾಕಷ್ಟು ಕಡೆ ಓಡಾಡಿದ್ದು, ಅವರಿಂದಲೇ ಕೊರೊನಾ ಕೇಸುಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ.
ಹೀಗಾಗಿ, ಚೀನಾದಲ್ಲಿ ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳಿಗೆ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಲ ಪ್ರದೇಶಗಳಲ್ಲಿ ಲಾಕ್‌ಡೌನ್ ಕೂಡ ವಿಧಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ ತೀರಾ ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರುವಂತೆ ಜನರಿಗೆ ತಿಳಿಸಲಾಗಿದೆ. ಕೊರೊನಾ ಸೋಕು ಹೆಚ್ಚಾಗಿರುವುದರಿಂದ ಚೀನಾದ ಕ್ಸಿಯಾನ್, ಗನ್ಸು, ಲಾನ್ಸೋಗೆ ವಿಮಾನಸೇವೆ ಸ್ಥಗಿತಗೊಳಿಸಲಾಗಿದೆ.
ಕ್ಸಿಯಾನ್ ಮತ್ತು ಲಾನ್ಸೂದಲ್ಲಿನ ಎರಡು ಮುಖ್ಯ ವಿಮಾನ ನಿಲ್ದಾಣಗಳಿಗೆ ಸುಮಾರು ಶೇ. 60ರಷ್ಟು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಮಂಗೋಲಿಯಾದ ಎರೆನ್‌ಹೋಟ್ ನಗರದ ಒಳಗೆ ಮತ್ತು ಹೊರಗೆ ಜನರ ಪ್ರಯಾಣವನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: China GDP: ರಿಯಾಲ್ಟಿ, ವಿದ್ಯುತ್ ಬಿಕ್ಕಟ್ಟಿನ ಮಧ್ಯೆ ಕುಸಿದ ಚೀನಾ ಬೆಳವಣಿಗೆ ದರ; ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 4.9ಕ್ಕೆ
Coronavirus cases in India: ದೇಶದಲ್ಲಿ 18,454 ಹೊಸ ಕೊವಿಡ್ ಪ್ರಕರಣ ಪತ್ತೆ, 160 ಮಂದಿ ಸಾವು