China Covid Updates: ಚೀನಾದಲ್ಲಿ ಮುಂದಿನ 2-3 ತಿಂಗಳಲ್ಲಿ ಕೊರೊನಾ ಸೋಂಕು ಉತ್ತುಂಗಕ್ಕೆ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು

ಚೀನಾದಲ್ಲಿ ಮುಂದಿನ 2-3 ತಿಂಗಳುಗಳಲ್ಲಿ ಕೊರೊನಾ ಸೋಂಕು ಉತ್ತುಂಗಕ್ಕೆ ತಲುಪಲಿದ್ದು, ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳಲಿದೆ ಎಂದು ಚೀನಾದ ಉನ್ನತ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಹೇಳಿದ್ದಾರೆ.

China Covid Updates: ಚೀನಾದಲ್ಲಿ ಮುಂದಿನ 2-3 ತಿಂಗಳಲ್ಲಿ ಕೊರೊನಾ ಸೋಂಕು ಉತ್ತುಂಗಕ್ಕೆ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು
ಕೋವಿಡ್ ಪರೀಕ್ಷೆ
Follow us
| Updated By: ನಯನಾ ರಾಜೀವ್

Updated on: Jan 13, 2023 | 10:29 AM

ಬೀಜಿಂಗ್: ಚೀನಾದಲ್ಲಿ ಮುಂದಿನ 2-3 ತಿಂಗಳುಗಳಲ್ಲಿ ಕೊರೊನಾ ಸೋಂಕು ಉತ್ತುಂಗಕ್ಕೆ ತಲುಪಲಿದ್ದು, ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳಲಿದೆ ಎಂದು ಚೀನಾದ ಉನ್ನತ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಹೇಳಿದ್ದಾರೆ. ಹೊಸ ವರ್ಷದ ಅಂಗವಾಗಿ ಜನವರಿ 21ರಿಂದ ನೂರಾರು ಮಿಲಿಯನ್ ಮಂದಿ ತಮ್ಮ ಊರುಗಳಿಗೆ ಹಿಂದಿರುಗುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಚೀನಾದಲ್ಲಿ ಕಳೆದ ನವೆಂಬರ್​ನಲ್ಲಿ ನಡೆದ ಪ್ರತಿಭಟನೆಯಿಂದಾಗಿ ಲಾಕ್​ಡೌನ್​ ತೆರವು ಮಾಡಲಾಗಿತ್ತು , ಅಂತಾರಾಷ್ಟ್ರೀಯ ಗಡಿಗಳನ್ನು ಕೂಡ ತೆರೆದಿತ್ತು. ಮೂರನೇ ಒಂದು ಭಾಗದಷ್ಟು ಜನರು ಈಗಾಗಲೇ ಸೋಂಕುಗಳು ಉತ್ತುಂಗಕ್ಕೇರಿರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ.

ಮತ್ತಷ್ಟು ಓದಿ: China Covid Updates: ಮುಂದಿನ 90 ದಿನಗಳಲ್ಲಿ ಚೀನಾದ ಶೇ.60ರಷ್ಟು ಜನತೆ ಕೊರೊನಾ ಸೋಂಕಿಗೆ ಒಳಗಾಗಬಹುದು: ಲಕ್ಷಾಂತರ ಮಂದಿ ಸಾಯಬಹುದು

ನಮ್ಮ ಆದ್ಯತೆಯ ಗಮನವು ದೊಡ್ಡ ನಗರಗಳ ಮೇಲೆ ಕೇಂದ್ರೀಕರಿಸಿದೆ. ಇದು ಗ್ರಾಮೀಣ ಪ್ರದೇಶಗಳ ಮೇಲೆ ಕೇಂದ್ರೀಕರಿಸುವ ಸಮಯವಾಗಿದೆ ಎಂದು ಜೆಂಗ್ ಹೇಳಿದ್ದಾರೆ. ವೈದ್ಯಕೀಯ ಸೌಲಭ್ಯಗಳು ತೀರಾ ಕಳಪೆಯಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ವೃದ್ಧರು, ರೋಗಿಗಳು ಮತ್ತು ಅಂಗವಿಕಲರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಹಿಂದುಳಿದಿದ್ದಾರೆ ಎಂದು ಹೇಳಿದರು. ವಿಶ್ವ ಆರೋಗ್ಯ ಸಂಸ್ಥೆ ಈ ವಾರ ರಜೆಯ ಪ್ರಯಾಣದಿಂದ ಉಂಟಾಗುವ ಅಪಾಯಗಳ ಬಗ್ಗೆ ಎಚ್ಚರಿಸಿದೆ.

ಚೀನಾದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ವೈರಸ್ ಹುಟ್ಟಿದ ದೇಶದಲ್ಲಿ ಸಾಂಕ್ರಾಮಿಕ ರೋಗ ಇದೀಗ ಮತ್ತೊಮ್ಮೆ ತಾಂಡವವಾಡುತ್ತಿದೆ. ಪ್ರತಿನಿತ್ಯ ಲಕ್ಷಾಂತರ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ಅಲ್ಲಿನ ಜನರು ಆತಂಕದಲ್ಲಿದ್ದಾರೆ ಮತ್ತು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿದ್ದಾರೆ.

ಈಗಾಗಲೇ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಈ ವೈರಸ್ ಈಗ ದುಪ್ಪಟ್ಟು ವೇಗದಲ್ಲಿ ಹರಡುತ್ತಿದೆ. ಅದರಲ್ಲೂ ಚೀನಾದಲ್ಲಿರುವ ಹೆನಾನ್ ರಾಜ್ಯ ಸಂಪೂರ್ಣವಾಗಿ ಕೊರೊನಾ ವೈರಸ್ ಕೈಗೆ ಸಿಕ್ಕಿಹಾಕಿಕೊಂಡಿದೆ. ಇಲ್ಲಿನ ಶೇ.90 ರಷ್ಟು ಜನರು ವೈರಸ್ನಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕೊರೊನಾ ನಿರ್ಬಂಧಗಳ ಸಡಿಲಿಕೆ ಮತ್ತು ಲಾಕ್ಡೌನ್ಗಳನ್ನು ತೆಗೆದು ಹಾಕುವುದ್ದರಿಂದ ವೈರಸ್ನ ಹರಡುವಿಕೆ ವ್ಯಾಪಕವಾಗಿ ಹೆಚ್ಚಾಗಿದೆ. ಪ್ರತಿದಿನ ಲಕ್ಷಾಂತರ ಜನರು ವೈರಸ್ಗೆ ತುತ್ತಾಗುತ್ತಿದ್ದಾರೆ. ಅಷ್ಟೇ ಅಲ್ಲ ಇತ್ತೀಚೆಗೆ ಚೀನಾದಲ್ಲಿ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ