ಚೀನಾ: ಶಸ್ತ್ರ ಚಿಕಿತ್ಸೆ ವೇಳೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರೊಬ್ಬರು ರೋಗಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದ್ದು, ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ, 82 ವರ್ಷದ ಮಹಿಳೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ಈ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿ ಅವರದ್ದೇ ಸ್ಥಳೀಯ ಭಾಷೆಯಲ್ಲಿ ಮಾತನಾಡುತ್ತಿದ್ದರು, ಅದು ವೈದ್ಯರಿಗೆ ಅರ್ಥವಾಗುತ್ತಿರಲಿಲ್ಲ, ಕೋಪಗೊಂಡು ರೋಗಿಯ ತಲೆಗೆ ಮೂರು ಬಾರಿ ವೈದ್ಯ ಹೊಡೆದಿದ್ದಾರೆ.

ವೈದ್ಯರು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Dec 27, 2023 | 11:57 AM

ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರೊಬ್ಬರು ರೋಗಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದ್ದು, ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ, 82 ವರ್ಷದ ಮಹಿಳೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ಈ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿ ಅವರದ್ದೇ ಸ್ಥಳೀಯ ಭಾಷೆಯಲ್ಲಿ ಮಾತನಾಡುತ್ತಿದ್ದರು, ಅದು ವೈದ್ಯರಿಗೆ ಅರ್ಥವಾಗುತ್ತಿರಲಿಲ್ಲ, ಕೋಪಗೊಂಡು ರೋಗಿಯ ತಲೆಗೆ ಮೂರು ಬಾರಿ ವೈದ್ಯ ಹೊಡೆದಿದ್ದಾರೆ.

ಆಘಾತಕಾರಿ ಘಟನೆಯು 2019 ರಲ್ಲಿ ಚೀನಾದ ಗೈಗಾಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಬಿಬಿಸಿ ವರದಿ ಮಾಡಿದೆ. ಸಂಪೂರ್ಣ ಘಟನೆಯನ್ನು ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಲಾಗಿದೆ.

ವುಹಾನ್​ನಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂದು ಆರಂಭದಲ್ಲೇ ಎಚ್ಚರಿಕೆ ನೀಡಿದ್ದ ವೈದ್ಯರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಶಸ್ತ್ರಚಿಕಿತ್ಸೆ ವೇಳೆ ರೋಗಿಗೆ ಅರವಳಿಕೆ ನೀಡಲಾಗಿತ್ತು. ಆ ಸಮಯದಲ್ಲಿ ಏನೇ ಹೇಳಿದರೂ ರೋಗಿಗೆ ಅರ್ಥವಾಗುತ್ತಿರಲಿಲ್ಲ, ಕಣ್ಣುಗಳನ್ನು ಆ ಕಡೆ ಈ ಕಡೆ ಚಲಿಸುತ್ತಿದ್ದರು, ಎಷ್ಟೇ ಹೇಳಿದರು ಪ್ರಯೋಜನವಾಗಲಿಲ್ಲ. ವೈದ್ಯರ ಭಾಷೆಯೂ ರೋಗಿಗೆ ಅರ್ಥವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಸಮಯದಲ್ಲಿ ಅರವಳಿಕೆಯಿಂದಾಗಿ ಮಂಪರಿದ್ದ ಕಾರಣ ರೋಗಿ ತಮ್ಮ ಕಣ್ಣುಗಳನ್ನು ಸ್ಪರ್ಶಿಸಲು ಪ್ರಯತ್ನಿಸುತ್ತಿದ್ದರು. ಸ್ಪರ್ಶಿಸಿದರೆ ಸೋಂಕಿಗೆ ಕಾರಣವಾಗಬಹುದು ಎಂದು ಹೊಡೆದಿದ್ದೇನೆ ಎಂದು ವೈದ್ಯರು ಹೇಳಿದ್ದಾರೆ.

ವೃದ್ಧೆಯೊಬ್ಬರ ಬಳಿ ಅಮಾನವೀಯವಾಗಿ ನಡೆದುಕೊಂಡಿದ್ದಕ್ಕೆ, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಆಸ್ಪತ್ರೆ ಆಡಳಿತ ವೈದ್ಯರನ್ನು ಅಮಾನತುಗೊಳಿಸಿದೆ. ಆಸ್ಪತ್ರೆಯು ಕ್ಷಮೆಯಾಚಿಸಿ 500 ಯುವಾನ್ ಪರಿಹಾರ ನೀಡಿತು. ಆ ಘಟನೆಯಿಂದಾಗಿ ಎಡ ಕಣ್ಣಿನ ದೃಷ್ಟಿಯೇ ಹೋಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ