AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಹಗ್ಗಜಗ್ಗಾಟ; ಅಮೆರಿಕದ ಆಮದು ಮೇಲಿನ ಸುಂಕವನ್ನು ಶೇ. 84ರಿಂದ ಶೇ. 125ಕ್ಕೆ ಏರಿಸಿದ ಚೀನಾ

ಅಮೆರಿಕಕ್ಕೆ ಮತ್ತೊಮ್ಮೆ ಚೀನಾ ತಿರುಗೇಟು ನೀಡಿದ್ದು, ಡೊನಾಲ್ಡ್ ಟ್ರಂಪ್ ವಿಧಿಸಿರುವ ಶೇ. 145 ಸುಂಕಕ್ಕೆ ಪ್ರತಿಯಾಗಿ ಚೀನಾ ಅಮೆರಿಕದ ಆಮದುಗಳ ಮೇಲಿನ ಸುಂಕವನ್ನು ಶೇ. 125ಕ್ಕೆ ಏರಿಸಿದೆ. ಚೀನಾದ ಹಣಕಾಸು ಸಚಿವಾಲಯ ಇಂದು ಅಮೆರಿಕದ ಸರಕುಗಳ ಮೇಲಿನ ಹೆಚ್ಚುವರಿ ಸುಂಕವನ್ನು ಶೇ. 84ರಿಂದ ಶೇ. 125ಕ್ಕೆ ಏರಿಸಿರುವುದಾಗಿ ಘೋಷಿಸಿದೆ. ಇದು ಶನಿವಾರದಿಂದ ಜಾರಿಗೆ ಬರಲಿದೆ ಎಂದು ಚೀನಾ ಹೇಳಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 60 ದೇಶಗಳ ಮೇಲಿನ ಹೊಸ ಸುಂಕಗಳು ಅಮೆರಿಕದ ಸಮಯ ಬುಧವಾರ ಮಧ್ಯರಾತ್ರಿಯ ನಂತರ ಜಾರಿಗೆ ಬಂದಿದೆ.

ನಿಲ್ಲದ ಹಗ್ಗಜಗ್ಗಾಟ; ಅಮೆರಿಕದ ಆಮದು ಮೇಲಿನ ಸುಂಕವನ್ನು ಶೇ. 84ರಿಂದ ಶೇ. 125ಕ್ಕೆ ಏರಿಸಿದ ಚೀನಾ
China President
ಸುಷ್ಮಾ ಚಕ್ರೆ
|

Updated on: Apr 11, 2025 | 3:07 PM

Share

ಬೀಜಿಂಗ್, ಏಪ್ರಿಲ್ 11: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ವಿಧಿಸಿದ ಸುಂಕಗಳು ಶೇ. 145ಕ್ಕೆ ತಲುಪಿದ ಹಿನ್ನೆಲೆಯಲ್ಲಿ ಚೀನಾ ಇಂದು ಅಮೆರಿಕದ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 84ರಿಂದ ಶೇ. 125ಕ್ಕೆ ಏರಿಸಿದೆ. ತನ್ನ ಹೊಸ ಸುಂಕಗಳು ಶನಿವಾರದಿಂದ ಜಾರಿಗೆ ಬರಲಿವೆ ಎಂದು ಚೀನಾ ಹೇಳಿದೆ. ಅಮೆರಿಕದ ಸುಂಕ ಹೆಚ್ಚಳದ ನಂತರ ಚೀನಾ ಕೂಡ WTOನಲ್ಲಿ ಮೊಕದ್ದಮೆ ಹೂಡಿದೆ ಎಂದು ಚೀನಾ ವಾಣಿಜ್ಯ ಸಚಿವಾಲಯ ತಿಳಿಸಿದೆ.

ಇದಕ್ಕೂ ಮುನ್ನ, ಚೀನಾ ಶೇ. 84ರಷ್ಟು ಸುಂಕಗಳನ್ನು ವಿಧಿಸಿ, ಕೆಲವು ಅಮೇರಿಕನ್ ಚಲನಚಿತ್ರಗಳ ಆಮದಿನ ಮೇಲೆ ನಿರ್ಬಂಧಗಳನ್ನು ವಿಧಿಸಿ, ಈ ಸಮಸ್ಯೆಯನ್ನು ಪರಿಹರಿಸಲು ಅಮೆರಿಕದೊಂದಿಗೆ ಮಾತುಕತೆ ನಡೆಸಲು ತನ್ನ ಆಸಕ್ತಿಯನ್ನು ವ್ಯಕ್ತಪಡಿಸಿತ್ತು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹಲವು ದೇಶಗಳ ಮೇಲೆ ಸುಂಕ ಹೆಚ್ಚಿಸಿದ್ದಾರೆ. ಆದರೆ, ಡೊನಾಲ್ಡ್ ಟ್ರಂಪ್ ಅವರ ಸುಂಕಗಳ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಏಕೈಕ ದೇಶವೆಂದರೆ ಅದು ಚೀನಾ ಎಂಬುದು ಗಮನಾರ್ಹ ಸಂಗತಿ.

ಬುಧವಾರ ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾದ ಉತ್ಪನ್ನಗಳ ಮೇಲೆ ಶೇ. 125ರಷ್ಟು ಸುಂಕ ವಿಧಿಸುವ ಮೂಲಕ ಚೀನಾವನ್ನು ಹೊರತುಪಡಿಸಿ ಹೆಚ್ಚಿನ ದೇಶಗಳ ಮೇಲಿನ ತನ್ನ ವ್ಯಾಪಕ ಸುಂಕಗಳಲ್ಲಿ 90 ದಿನಗಳ ವಿರಾಮವನ್ನು ಅನುಮೋದಿಸಿದ್ದರು. ಫೆಂಟನಿಲ್ ಪೂರೈಕೆ ಸರಪಳಿಯಲ್ಲಿ ಬೀಜಿಂಗ್ ಭಾಗಿಯಾಗಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಪರಿಚಯಿಸಲಾದ ಶೇ. 20ರಷ್ಟು ಸುಂಕವನ್ನು ಪರಿಗಣಿಸಿ, ಶೇ. 125ರಷ್ಟು ಸುಂಕವು ಶೇ. 145ಕ್ಕೆ ಏರಿಸಲಾಗಿತ್ತು.

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಬಂದಿಳಿದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ

“ಚೀನಾದ ಮೇಲೆ ಯುಎಸ್ ಅಸಹಜವಾಗಿ ಹೆಚ್ಚಿನ ಸುಂಕಗಳನ್ನು ವಿಧಿಸುವುದು ಅಂತಾರಾಷ್ಟ್ರೀಯ ಮತ್ತು ಆರ್ಥಿಕ ವ್ಯಾಪಾರ ನಿಯಮಗಳು, ಮೂಲಭೂತ ಆರ್ಥಿಕ ಕಾನೂನುಗಳು ಮತ್ತು ಸಾಮಾನ್ಯ ಜ್ಞಾನವನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಮತ್ತು ಸಂಪೂರ್ಣವಾಗಿ ಏಕಪಕ್ಷೀಯ ಬೆದರಿಸುವಿಕೆ ಮತ್ತು ಬಲವಂತವಾಗಿದೆ” ಎಂದು ಚೀನಾ ಹಣಕಾಸು ಸಚಿವಾಲಯ ತಿಳಿಸಿದೆ.

“ಅಮೆರಿಕಕ್ಕೆ ರಫ್ತು ಮಾಡುವ ಚೀನೀ ಸರಕುಗಳ ಮೇಲೆ ಅಮೆರಿಕ ಹೆಚ್ಚುವರಿ ಸುಂಕಗಳನ್ನು ವಿಧಿಸುವುದನ್ನು ಮುಂದುವರಿಸಿದರೆ, ಚೀನಾ ಅದನ್ನು ನಿರ್ಲಕ್ಷಿಸುತ್ತದೆ” ಎಂದು ಚೀನಾದ ಹಣಕಾಸು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಚೀನಾ ಬಿಟ್ಟು ಎಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ ಟ್ರಂಪ್

ಚೀನಾದ ವಾಣಿಜ್ಯ ಸಚಿವಾಲಯವು 12 ಅಮೇರಿಕನ್ ಸಂಸ್ಥೆಗಳನ್ನು ತನ್ನ ರಫ್ತು ನಿಯಂತ್ರಣ ಪಟ್ಟಿಗೆ ಸೇರಿಸಿದೆ ಮತ್ತು 6 ಅಮೇರಿಕನ್ ಕಂಪನಿಗಳನ್ನು ತನ್ನ “ವಿಶ್ವಾಸಾರ್ಹವಲ್ಲದ ಘಟಕ”ದ ಪಟ್ಟಿಯ ಭಾಗವಾಗಿ ಗೊತ್ತುಪಡಿಸಿತ್ತು. ಏಪ್ರಿಲ್ 10ರಿಂದ ಅಮೆರಿಕದ ಸರಕುಗಳ ಮೇಲೆ ಈ ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗಿತ್ತು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 60 ದೇಶಗಳ ಮೇಲಿನ ಹೊಸ ಸುಂಕಗಳು ಅಮೆರಿಕದ ಸಮಯ ಬುಧವಾರ ಮಧ್ಯರಾತ್ರಿಯ ನಂತರ ಜಾರಿಗೆ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ