AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಉದ್ಯೋಗದ ಜಾಹೀರಾತು ಮೂಲಕ ಬೇರೆ ದೇಶಗಳ ರಹಸ್ಯ ಮಾಹಿತಿ ಕದಿಯಲು ಚೀನಾ ಯತ್ನ!

ವಿಶ್ವದ ಪ್ರಮುಖ 5 ಇಂಗ್ಲಿಷ್ ಭಾಷಿಕ ದೇಶಗಳ ಜಂಟಿ ಗುಪ್ತಚರ ಒಕ್ಕೂಟವಾದ 'ಫೈವ್ ಐಸ್' (ಅಮೆರಿಕ, ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ ಮತ್ತು ನ್ಯೂಜಿಲೆಂಡ್) ಚೀನಾದ ಆನ್‌ಲೈನ್ ಬೇಹುಗಾರಿಕೆಯ ಬಗ್ಗೆ ಜಾಗತಿಕ ಎಚ್ಚರಿಕೆಯನ್ನು ನೀಡಿದೆ. ಪಾಶ್ಚಿಮಾತ್ಯ ದೇಶಗಳ ಮಿಲಿಟರಿ, ರಕ್ಷಣಾ ಮತ್ತು ಸರ್ಕಾರಿ ಅಧಿಕಾರಿಗಳಿಂದ ರಹಸ್ಯ ಮಾಹಿತಿಗಳನ್ನು ಕದಿಯಲು ಚೀನಾದ ಗೂಢಚಾರರು ಆನ್‌ಲೈನ್ ಉದ್ಯೋಗ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಒಕ್ಕೂಟ ಬಹಿರಂಗಪಡಿಸಿದೆ. ಚೀನಾದ ಏಜೆಂಟ್‌ಗಳು ಲಿಂಕ್ಡ್‌ಇನ್, ಇಂಡೀಡ್ ಮತ್ತು ಅಪ್‌ವರ್ಕ್ ನಂತಹ ವೃತ್ತಿಪರ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸಿ ವಂಚನೆ ಮಾಡುತ್ತಾರೆ ಎಂಬುದು ಬಯಲಾಗಿದೆ.

ನಕಲಿ ಉದ್ಯೋಗದ ಜಾಹೀರಾತು ಮೂಲಕ ಬೇರೆ ದೇಶಗಳ ರಹಸ್ಯ ಮಾಹಿತಿ ಕದಿಯಲು ಚೀನಾ ಯತ್ನ!
China PresidentImage Credit source: AP
ಸುಷ್ಮಾ ಚಕ್ರೆ
|

Updated on: Jun 04, 2026 | 7:40 PM

Share

ಲಂಡನ್, ಜೂನ್ 4: ವಿಶ್ವದ ಅತ್ಯಂತ ಶಕ್ತಿಶಾಲಿ ಗುಪ್ತಚರ ಮಾಹಿತಿ ಹಂಚಿಕೆ ಒಕ್ಕೂಟವಾದ ‘ಫೈವ್ ಐಸ್’ (ಆಸ್ಟ್ರೇಲಿಯಾ, ಕೆನಡಾ, ನ್ಯೂಜಿಲೆಂಡ್, ಬ್ರಿಟನ್ ಮತ್ತು ಅಮೆರಿಕ) ದೇಶಗಳ ಸರ್ಕಾರಿ ಮತ್ತು ಮಿಲಿಟರಿ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಚೀನಾ (China) ಆನ್‌ಲೈನ್‌ನಲ್ಲಿ ನಕಲಿ ಉದ್ಯೋಗದ ಜಾಲ ಬೀಸಿದೆ ಎಂದು ಒಕ್ಕೂಟವು ಗಂಭೀರ ಎಚ್ಚರಿಕೆ ನೀಡಿದೆ. ಲಿಂಕ್ಡ್‌ಇನ್ (LinkedIn), ಇಂಡೀಡ್​ನಂತಹ ವೃತ್ತಿಪರ ಜಾಲತಾಣಗಳ ಮೂಲಕ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಪಡೆಯಲು ಚೀನಾ ಈ ಕುತಂತ್ರ ನಡೆಸುತ್ತಿದೆ ಎನ್ನಲಾಗಿದೆ.

ಚೀನಾದ ಮಿಲಿಟರಿ ಗುಪ್ತಚರ ಇಲಾಖೆಯ ಏಜೆಂಟ್‌ಗಳು ಖಾಸಗಿ ಉದ್ಯಮಗಳು ಅಥವಾ ಥಿಂಕ್ ಟ್ಯಾಂಕ್‌ಗಳ ಮಾನವ ಸಂಪನ್ಮೂಲ (HR) ಸಲಹೆಗಾರರಂತೆ ನಟಿಸುತ್ತಾರೆ. ಲಿಂಕ್ಡ್‌ಇನ್ (LinkedIn), ಇಂಡೀಡ್ (Indeed) ಮತ್ತು ಅಪ್‌ವರ್ಕ್ (Upwork)ನಂತಹ ಜನಪ್ರಿಯ ವೆಬ್‌ಸೈಟ್‌ಗಳಲ್ಲಿ ವಿದೇಶಾಂಗ ನೀತಿ ವಿಶ್ಲೇಷಕರು ಅಥವಾ ರಕ್ಷಣಾ ವಿಶ್ಲೇಷಕರ ಹುದ್ದೆಗಳಿಗಾಗಿ ನಕಲಿ ಜಾಹೀರಾತುಗಳನ್ನು ಪೋಸ್ಟ್ ಮಾಡುತ್ತಾರೆ.

ಇದನ್ನೂ ಓದಿ: ಚೀನಾದಿಂದ ತಪ್ಪಿಸಿಕೊಂಡು ಸಮುದ್ರದಲ್ಲಿ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಪ್ರಯಾಣಿಸಿ ದಕ್ಷಿಣ ಕೊರಿಯಾ ತಲುಪಿದ ಮಾಜಿ ಪೊಲೀಸ್

ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಸಂದರ್ಶನದ ಮೂಲಕ ಸಂಪರ್ಕಿಸಿ, ನಂತರ ಸಾರ್ವಜನಿಕವಾಗಿ ಲಭ್ಯವಿಲ್ಲದ ರಹಸ್ಯ ಮತ್ತು ಆಂತರಿಕ ಮಾಹಿತಿಗಳನ್ನು ಒದಗಿಸುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತದೆ. ಚೀನಾದ ಈ ನೇಮಕಾತಿ ತಂತ್ರಕ್ಕೆ ಉನ್ನತ ಮಟ್ಟದ ಭದ್ರತಾ ಅನುಮತಿ ಹೊಂದಿರುವ ಸರ್ಕಾರಿ ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ, ಸರ್ಕಾರದ ಮಾಹಿತಿಗಳಿಗೆ ಪರೋಕ್ಷ ಸಂಪರ್ಕ ಹೊಂದಿರುವ ಪತ್ರಕರ್ತರು ಮತ್ತು ಥಿಂಕ್ ಟ್ಯಾಂಕ್ ಉದ್ಯೋಗಿಗಳೇ ಮುಖ್ಯ ಟಾರ್ಗೆಟ್ ಎನ್ನಲಾಗಿದೆ.

ಚೀನಾದ ಏಜೆಂಟ್‌ಗಳು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಸೂಕ್ಷ್ಮ ಮಾಹಿತಿ ಹೊಂದಿರುವವರನ್ನು ಗುರುತಿಸುತ್ತಾರೆ. ಬಳಿಕ ಚೀನಾದ ವಿದೇಶಾಂಗ ಸಂಬಂಧಗಳು, ರಕ್ಷಣೆ ಅಥವಾ ವ್ಯಾಪಾರದ ಕುರಿತು ವರದಿ ಬರೆಯಲು ಸೂಚಿಸುತ್ತಾರೆ. ನಂತರ ದೇಶದ ರಹಸ್ಯ ಮಾಹಿತಿಗಳನ್ನು ಕೇಳಲು ಆರಂಭಿಸುತ್ತಾರೆ. ಈ ಪ್ರತಿಯೊಂದು ವರದಿಗೂ ಅಭ್ಯರ್ಥಿಗಳಿಗೆ ಪೇಪಾಲ್ ವೆಸ್ಟರ್ನ್ ಯೂನಿಯನ್ ಅಥವಾ ಕ್ರಿಪ್ಟೋಕರೆನ್ಸಿ ಮೂಲಕ ನೂರಾರು ಅಥವಾ ಸಾವಿರಾರು ಡಾಲರ್ ಹಣವನ್ನು ಪಾವತಿಸಲಾಗುತ್ತಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಈ ಬಗ್ಗೆ ಮಾತನಾಡಿದ ಬ್ರಿಟನ್‌ನ ಭದ್ರತಾ ಸಚಿವ ಡಾನ್ ಜಾರ್ವಿಸ್, “ಚೀನಾದ ಗುಪ್ತಚರ ಸಂಸ್ಥೆಗಳ ಗುರಿಯಾಗಬಹುದಾದ ಪ್ರತಿಯೊಬ್ಬರೂ ಇಂತಹ ಆನ್‌ಲೈನ್ ಆಮಿಷಗಳ ಬಗ್ಗೆ ತೀವ್ರ ಜಾಗರೂಕರಾಗಿರಬೇಕು. ನಮ್ಮ ದೇಶದ ಭದ್ರತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ವಿನಂತಿಸಿದ್ದಾರೆ. ಆದರೆ, ಚೀನಾ ಈ ಆರೋಪವನ್ನು ನಿರಾಕರಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ