AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Landslide: ಚೀನಾದಲ್ಲಿ ಭೂಕುಸಿತ, ಗೈರಾಂಗ್ ಬಂದರಿನಲ್ಲಿ 16 ಸಾವು, 49 ಭಾರತೀಯರು ಸೇರಿ 546 ಮಂದಿ ನಾಪತ್ತೆ

ಚೀನಾದ ಗೈರಾಂಗ್ ಬಂದರಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 16 ಜನರು ಸಾವನ್ನಪ್ಪಿದ್ದು, 546 ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 49 ಭಾರತೀಯರು ಸೇರಿದಂತೆ 261 ವಿದೇಶಿ ಪ್ರಜೆಗಳು ಸೇರಿದ್ದಾರೆ. ಈ ಪ್ರದೇಶ ಕೈಲಾಸ-ಮಾನಸ ಸರೋವರ ಯಾತ್ರೆಯ ಪ್ರಮುಖ ಮಾರ್ಗವಾಗಿದೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ತುರ್ತು ರಕ್ಷಣಾ ಕಾರ್ಯಕ್ಕೆ ಆದೇಶಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ತೀವ್ರ ಸವಾಲುಗಳಿದ್ದು, ದ್ವಿತೀಯ ವಿಪತ್ತುಗಳ ಭೀತಿಯೂ ಇದೆ.

China Landslide: ಚೀನಾದಲ್ಲಿ ಭೂಕುಸಿತ, ಗೈರಾಂಗ್ ಬಂದರಿನಲ್ಲಿ 16 ಸಾವು, 49 ಭಾರತೀಯರು ಸೇರಿ 546 ಮಂದಿ ನಾಪತ್ತೆ
ಚೀನಾ ಭೂಕುಸಿತ
ನಯನಾ ರಾಜೀವ್
|

Updated on: Aug 30, 2026 | 9:00 AM

Share

ಬೀಜಿಂಗ್, ಆಗಸ್ಟ್​ 30: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ(Flood)ದ ಬೆನ್ನಲ್ಲೇ, ನೈಋತ್ಯ ಚೀನಾದ ಕ್ಸಿಜಾಂಗ್ (ಟಿಬೆಟ್) ಸ್ವಾಯತ್ತ ಪ್ರದೇಶದ ಚೀನಾ-ನೇಪಾಳ ಗಡಿಯಲ್ಲಿರುವ ಗೈರಾಂಗ್ ಭೂ ಬಂದರು ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತ ಮತ್ತು ಹಿಮಕುಸಿತಕ್ಕೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 546 ಜನರು ನಾಪತ್ತೆಯಾಗಿದ್ದಾರೆ. ಪತ್ತೆಯಾಗದವರಲ್ಲಿ ಭಾರತ, ನೇಪಾಳ, ಅಮೆರಿಕ, ಬ್ರಿಟನ್ ಸೇರಿದಂತೆ 23 ದೇಶಗಳ ಒಟ್ಟು 261 ವಿದೇಶಿ ಪ್ರಜೆಗಳು ಸೇರಿದ್ದಾರೆ ಎಂದು ಚೀನಾದ ಪ್ರಾದೇಶಿಕ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಭಾರತೀಯರ ವಿವರ: ಭಾರತದ 49 ಯಾತ್ರಿಕರು ನಾಪತ್ತೆಯಾಗಿದ್ದಾರೆ. ನೇಪಾಳ (104), ಲಾಟ್ವಿಯಾ (33), ಅಮೆರಿಕ (18), ಬ್ರಿಟನ್ (15), ಆಸ್ಟ್ರೇಲಿಯಾ (6), ಕೆನಡಾ (6), ದಕ್ಷಿಣ ಆಫ್ರಿಕಾ (4), ಜರ್ಮನಿ (3), ರಷ್ಯಾ (3), ಮಲೇಷ್ಯಾ (3), ಫ್ರಾನ್ಸ್ (2), ನೆದರ್‌ಲ್ಯಾಂಡ್ಸ್ (2), ನ್ಯೂಜಿಲೆಂಡ್ (2), ಐರ್ಲೆಂಡ್ (2), ಎಸ್ಟೋನಿಯಾ (2) ಹಾಗೂ ಸ್ಪೇನ್, ಪೋರ್ಚುಗಲ್, ಉಕ್ರೇನ್, ಫಿನ್‌ಲ್ಯಾಂಡ್, ಹಂಗೇರಿ, ಕಜಕಿಸ್ತಾನ್, ಲಿಥುವೇನಿಯಾದಿಂದ ತಲಾ ಒಬ್ಬರು ನಾಪತ್ತೆಯಾಗಿದ್ದಾರೆ.

24 ಗಂಟೆಗಳ ತುರ್ತು ಹಾಟ್‌ಲೈನ್: ಸಂತ್ರಸ್ತರ ಕುಟುಂಬಗಳ ಸಂಪರ್ಕಕ್ಕಾಗಿ ಚೀನಾ ಸರ್ಕಾರ ಎರಡು ಇಂಗ್ಲಿಷ್ ಸಹಾಯವಾಣಿಗಳನ್ನು ಆರಂಭಿಸಿದೆ: 0086-891-6817165 ಮತ್ತು 0086-18308026705.

ಅಧ್ಯಕ್ಷ ಷಿ ಜಿನ್‌ಪಿಂಗ್ ತುರ್ತು ಸಭೆ , ಪ್ರಧಾನಿ ಲಿ ಕಿಯಾಂಗ್ ಭೇಟಿ ಉನ್ನತ ಮಟ್ಟದ ಸಮಿತಿ ಸಭೆ: ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಚೀನಾ ಕಮ್ಯುನಿಸ್ಟ್ ಪಕ್ಷದ ಪೊಲಿಟ್‌ಬ್ಯೂರೋ ಸಭೆಯ ಅಧ್ಯಕ್ಷತೆ ವಹಿಸಿದ್ದ ಷಿ ಜಿನ್‌ಪಿಂಗ್, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದರು. ಚೀನಾದ ಪ್ರಧಾನಿ ಲಿ ಕಿಯಾಂಗ್ ಅವರು ಗೈರಾಂಗ್ ಕೌಂಟಿಗೆ ಖುದ್ದು ಭೇಟಿ ನೀಡಿ ಪರಿಹಾರ ಮತ್ತು ಸುರಕ್ಷತಾ ಕಾರ್ಯಗಳ ನೇತೃತ್ವ ವಹಿಸಿದ್ದಾರೆ.

ಮತ್ತಷ್ಟು ಓದಿ: ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು

ನೇಪಾಳದ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರಿಗೆ ಶೋಕ ಸಂದೇಶ ಕಳುಹಿಸಿರುವ ಷಿ ಜಿನ್‌ಪಿಂಗ್, ಗಡಿಯಾಚೆಗಿನ ರಕ್ಷಣಾ ಕಾರ್ಯಾಚರಣೆ ಹಾಗೂ ತುರ್ತು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಕೈಲಾಸ-ಮಾನಸ ಸರೋವರ ಕಾರಿಡಾರ್: ಗೈರಾಂಗ್ ಗಡಿ ಮಾರ್ಗವು ನೇಪಾಳ ಮತ್ತು ಟಿಬೆಟ್ ನಡುವಿನ ಪ್ರಮುಖ ವ್ಯಾಪಾರ ಹಾಗೂ ಕೈಲಾಸ-ಮಾನಸ ಸರೋವರ ಯಾತ್ರೆಯ ಸಂಪರ್ಕ ಕೊಂಡಿಯಾಗಿದೆ. ದುರಂತದ ಸಮಯದಲ್ಲಿ ನೂರಾರು ವಿದೇಶಿ ಯಾತ್ರಿಕರು ಮತ್ತು ಪ್ರವಾಸಿಗರು ಈ ಮಾರ್ಗದಲ್ಲಿ ಚಲಿಸುತ್ತಿದ್ದರು.

ವಿಡಿಯೋ

ಎರಡನೇ ವಿಪತ್ತುಗಳ ಭೀತಿ: ಕಡಿದಾದ ಕಣಿವೆಗಳು, ತೀವ್ರ ಚಳಿ ಮತ್ತು ಹಿಮ ಸರೋವರಗಳ ಅಸ್ಥಿರತೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಭಾರಿ ಸವಾಲು ಎದುರಾಗಿದೆ. ಹೊಸ ಕೃತಕ ಸರೋವರಗಳು ಒಡೆಯುವ ಸಾಧ್ಯತೆಯಿರುವುದರಿಂದ ಸ್ಥಳದಲ್ಲಿದ್ದ ತುರ್ತು ರಕ್ಷಣಾ ತಂಡಗಳಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ