ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್

ಚೀನಾ ಮತ್ತು ಅಮೆರಿಕದ ಇಬ್ಬರು ನಾಯಕರ ನಡುವಿನ ನೇರ ಪತ್ರಗಳ ವಿನಿಮಯದ ನಂತರ ಚೀನಾ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿಲ್ಲ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಇರಾನ್​ಗೆ ವಿದೇಶಿ ಮಿಲಿಟರಿ ಬೆಂಬಲದ ಬಗ್ಗೆ ಹೆಚ್ಚಿರುವ ಕಳವಳಗಳ ನಡುವೆ ಈ ಹೇಳಿಕೆಗಳು ಬಂದಿವೆ.

ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್
Trump With Chinese President

Updated on: Apr 15, 2026 | 7:07 PM

ವಾಷಿಂಗ್ಟನ್, ಏಪ್ರಿಲ್ 15: ಇರಾನ್​ಗೆ ಚೀನಾ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ, ನಾವು ಯಾವುದೇ ಆಯುಧಗಳ ಪೂರೈಕೆ ಮಾಡುತ್ತಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿತ್ತು. ಅದರ ಬೆನ್ನಲ್ಲೇ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್ (Donald Trump), ‘ಚೀನಾ ಇರಾನ್​ಗೆ ಶಸ್ತ್ರಾಸ್ತ್ರ ಒದಗಿಸುವುದಿಲ್ಲ ಎಂದಿದೆ. ನಾನು ಹಾರ್ಮುಜ್ ಜಲಸಂಧಿಯನ್ನು ತೆರೆಸುತ್ತಿರುವುದರಿಂದ ಚೀನಾ ಅಧ್ಯಕ್ಷರು ಬಹಳ ಖುಷಿಯಾಗಿದ್ದಾರೆ. ಅವರಿಂದ ನನಗೆ ಬಿಗಿಯಾದ ಅಪ್ಪುಗೆ ಸಿಗುವುದು ಖಚಿತ’ ಎಂದು ಹೇಳಿದ್ದಾರೆ.

ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದರ ವಿರುದ್ಧ ಇತರೆ ದೇಶಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೀನಾ ತಾನು ಇರಾನ್​ಗೆ ಯಾವುದೇ ಶಸ್ತ್ರಾಸ್ತ್ರ ಪೂರೈಕೆ ಮಾಡುವುದಿಲ್ಲ ಎಂದು ಹೇಳಿದೆ. ಕಳೆದ ವಾರ, ಟೆಹ್ರಾನ್‌ಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿರುವ ರಾಷ್ಟ್ರದ ಮೇಲೆ ತಕ್ಷಣ 50% ಸುಂಕವನ್ನು ವಿಧಿಸುವುದಾಗಿ ಅವರು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

“ನಾನು ಶಾಸ್ವತವಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಸಲು ಮುಂದಾಗಿರುವುದಕ್ಕೆ ಚೀನಾ ತುಂಬಾ ಖುಷಿಯಾಗಿದೆ.ನಾನು ಕೆಲವು ವಾರಗಳಲ್ಲಿ ಅಲ್ಲಿಗೆ ಹೋಗಲಿದ್ದೇನೆ. ಆಗ ಚೀನಾದ ಅಧ್ಯಕ್ಷ ಕ್ಸಿ ನನಗೆ ಬಿಗಿಯಾದ ಅಪ್ಪುಗೆಯನ್ನು ನೀಡುತ್ತಾರೆಂಬ ನಿರೀಕ್ಷೆಯಿದೆ. ನಾವು ಒಟ್ಟಿಗೆ ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತಿದ್ದೇವೆ, ನಾವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದೇವೆ!” ಎಂದು ಟ್ರಂಪ್ ಬರೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us