‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’

|

Updated on: Jun 30, 2020 | 2:57 PM

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ. ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ […]

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’
Follow us on

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ.

ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ ಎತ್ತಿಹಿಡಿಯುವ ಜವಾಬ್ದಾರಿಯನ್ನ ಭಾರತ ಸರ್ಕಾರ ಹೊಂದಿದೆ ಎಂದು ಭಾರತದ ಹೊಣೆಗಾರಿಕೆಯನ್ನು ಉಲ್ಲೇಖಿಸಿ, ಎಚ್ಚರಿಕೆಯ ಮಾತು ಹೇಳಿದ್ದಾರೆ.

Published On - 2:51 pm, Tue, 30 June 20