AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರಾ ನದಿಯಲ್ಲಿ ಜಲವಿದ್ಯುತ್​ ಯೋಜನೆ ಪ್ರಾರಂಭಕ್ಕೆ ಮುಂದಾದ ಚೀನಾ: ಭಾರತ-ಬಾಂಗ್ಲಾ ಕಳವಳ

ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಅಣೆಕಟ್ಟು ಕಟ್ಟಲು ಚೀನಾ ಮುಂದಾಗಿದ್ದು, ನದಿಯ ಕೆಳಪಾತ್ರದ ದೇಶಗಳಾದ ಭಾರತ ಮತ್ತು ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ. ನದಿ ನೀರಿನ ಬಳಕೆ ಮಾಡುತ್ತಿರುವವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಭಾರತ ಚೀನಾಕ್ಕೆ ಹೇಳಿದೆ.

ಬ್ರಹ್ಮಪುತ್ರಾ ನದಿಯಲ್ಲಿ ಜಲವಿದ್ಯುತ್​ ಯೋಜನೆ ಪ್ರಾರಂಭಕ್ಕೆ ಮುಂದಾದ ಚೀನಾ: ಭಾರತ-ಬಾಂಗ್ಲಾ ಕಳವಳ
ಬ್ರಹ್ಮಪುತ್ರ ನದಿ (ಎಎನ್​ಐ ಚಿತ್ರ)
Lakshmi Hegde
| Edited By: |

Updated on: Dec 01, 2020 | 3:02 PM

Share

ಬೀಜಿಂಗ್​: ಬ್ರಹ್ಮಪುತ್ರ ನದಿಯ ಮೇಲೆ ನೆರೆ ರಾಷ್ಟ್ರ ಚೀನಾದ ಕಣ್ಣು ಬಿದ್ದಿದೆ. ಈ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಬೃಹತ್​ ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡಲು ಮುಂದಾಗಿದೆ.

14ನೇ ಪಂಚವಾರ್ಷಿಕ ಯೋಜನೆಯಡಿ ಅಣೆಕಟ್ಟು ನಿರ್ಮಿಸಲು ಚೀನಾ ಮುಂದಾಗಿದ್ದು, ಮುಂದಿನ ವರ್ಷದಲ್ಲಿ ಕಾರ್ಯ ಪ್ರಾರಂಭವಾಗಲಿದೆ ಎಂದು ಅಲ್ಲಿನ ಮಾಧ್ಯಮವೊಂದು ಹೇಳಿದೆ.

ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಯಾರ್ಲುಂಗ್​ ಝಾಂಗ್​ಬೋ ನದಿ ಎಂದು ಕರೆಯಲಾಗುತ್ತಿದೆ. ಈ ನದಿಪಾತ್ರದಲ್ಲಿಯೇ ಚೀನಾ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ಈ ಬಗ್ಗೆ ಚೀನಾದ ವಿದ್ಯುತ್​ ನಿರ್ಮಾಣ ನಿಗಮದ ಅಧ್ಯಕ್ಷ ಯಾನ್​ ಝಿಯಾಂಗ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾಗಿ ಗ್ಲೋಬಲ್ ಟೈಮ್ಸ್ ಕೂಡ ವರದಿ ಮಾಡಿದೆ. ಈ ಯೋಜನೆಯ ಸಂಪೂರ್ಣ ವರದಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಇದು ಚೀನಾದ ಜಲವಿದ್ಯುತ್​ ನಿರ್ಮಾಣ ನಿಗಮದ ಉದ್ಯಮದಲ್ಲಿಯೇ ಒಂದು ಐತಿಹಾಸಿಕ ಯೋಜನೆ ಎಂದೂ ಯಾನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಬಾಂಗ್ಲಾ ಆತಂಕ ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಅಣೆಕಟ್ಟು ಕಟ್ಟಲು ಚೀನಾ ಮುಂದಾಗಿದ್ದು, ನದಿಯ ಕೆಳಪಾತ್ರದ ದೇಶಗಳಾದ ಭಾರತ ಮತ್ತು ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ. ನದಿ ನೀರಿನ ಬಳಕೆ ಮಾಡುತ್ತಿರುವವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಭಾರತ ಚೀನಾಕ್ಕೆ ಹೇಳಿದೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಚೀನಾ, ಭಾರತ ಮತ್ತು ಬಾಂಗ್ಲಾದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು, ಯಾವುದೇ ತೊಂದರೆ ಆಗದ ರೀತಿಯಲ್ಲಿ ಅಣೆಕಟ್ಟು ಕಟ್ಟಲಾಗುವುದು. ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದೆ.

ಟಿಬೆಟ್​ನಲ್ಲಿ ಚೀನಾ 2015ರಲ್ಲಿ 1.5 ಶತಕೋಟಿ​ ಡಾಲರ್​ ವೆಚ್ಚದಲ್ಲಿ ಝಾಮ್​ ಜಲಶಕ್ತಿ ಸ್ಥಾವರವನ್ನು ನಿರ್ಮಾಣ ಮಾಡಿದೆ. ಇದೀಗ ಹೊಸ ಡ್ಯಾಮ್​ನ್ನು ಟಿಬೆಟ್​-ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ ಮೆಡೋಗ್​ ಪ್ರದೇಶದಲ್ಲಿ ಕಟ್ಟಲು ಮುಂದಾಗಿದೆ.

ಇದನ್ನೂ ಓದಿ: ಕೊರೊನಾ ಹುಟ್ಟಿದ್ದು ಚೀನಾದಲ್ಲಿ ಅಲ್ಲ ಭಾರತದಲ್ಲಿ.. ಚೀನಾ ಹೊಸ ವರಸೆಗೆ ಬಿದ್ದು ಬಿದ್ದು ನಕ್ಕ ಸಂಶೋಧಕರು

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್