ಚೀನಾದಲ್ಲಿ ಜಿಮ್ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ. ಸೋಮವಾರ ಬೆಳಗಿನ ಜಾವ 5.30ರಷ್ಟೊತ್ತಿಗೆ 14 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ಜಿಮ್ನ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಅವಶೇಷಗಳಿಂದ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು.
ಮತ್ತಷ್ಟು ಓದಿ: Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‌ಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಭಾರಿ ಮಳೆಯಿಂದಾಗಿ ಜಿಮ್ನ ಮೇಲ್ಛಾವಣಿ ಕುಸಿದಿದೆ, ನಿರ್ಮಾಣ ಕಂಪನಿಯ ಉಸ್ತುವಾರಿ ವಹಿಸಿರುವವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಕಡಿಮೆ ಸುರಕ್ಷತಾ ಮಾನದಂಡಗಳು ಮತ್ತು ಕಳಪೆ ಕಾಮಗಾರಿಯಿಂದಾಗಿ ಚೀನಾದಲ್ಲಿ ಕಟ್ಟಡಗಳ ಕುಸಿತ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:22 am, Mon, 24 July 23