AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನ ಸೆರಾನಾ ನಗರದಲ್ಲಿ ಲಸಿಕೆ ಪಡೆದದ್ದು ಶೇ 75 ಮಂದಿ, ಶೇ 95ರಷ್ಟು ಇಳಿಕೆ ಆಯ್ತು ಕೊವಿಡ್ ಸಾವು ಪ್ರಕರಣ

Brazil: ವ್ಯಾಕ್ಸಿನೇಷನ್ ಪೂರ್ಣಗೊಳಿಸಲು ವಿಜ್ಞಾನಿಗಳು ಸೆರಾನಾವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದ್ದಾರೆ. ಎಲ್ಲಾ ಮೂರು ಪ್ರದೇಶಗಳಲ್ಲಿ ಲಸಿಕೆಯ ಎರಡನೇ ಡೋಸ್ ಜತೆಗೆ ಸೋಂಕು ಪ್ರಕರಣದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ರೋಗಲಕ್ಷಣಗಳ ರೋಗಿಗಳ ಸಂಖ್ಯೆ 80 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳ ಸಂಖ್ಯೆಯನ್ನು ಶೇಕಡಾ 86 ರಷ್ಟು ಕಡಿಮೆ ಮಾಡಲಾಗಿದೆ

ಬ್ರೆಜಿಲ್​ನ ಸೆರಾನಾ ನಗರದಲ್ಲಿ ಲಸಿಕೆ ಪಡೆದದ್ದು ಶೇ 75 ಮಂದಿ, ಶೇ 95ರಷ್ಟು ಇಳಿಕೆ ಆಯ್ತು ಕೊವಿಡ್ ಸಾವು ಪ್ರಕರಣ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 31, 2021 | 6:23 PM

Share

ಸಾವೊಪೌಲೊ (ಬ್ರೆಜಿಲ್): ವಯಸ್ಕರಿಗೆ ವ್ಯಾಕ್ಸಿನೇಷನ್ ಪೂರ್ಣಗೊಂಡ ನಂತರ, ಬ್ರೆಜಿಲ್ ದೇಶದ ಸೆರಾನಾದಲ್ಲಿ ಕೊವಿಡ್ ಸಾವುಗಳು 95% ರಷ್ಟು ಕಡಿಮೆಯಾಗಿದೆ. ಹೆಚ್ಚಿನ ವಯಸ್ಕರಿಗೆ ಲಸಿಕೆ ಹಾಕಿದ್ದರಿಂದ ಕೊವಿಡ್ ಸಾವು ಕಡಿಮೆ ಆಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕೊವಿಡ್ ರೋಗಿಗಳು ಮತ್ತು ಸಾವು ಪ್ರಕರಣಗಳಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಕೊವಿಡ್ ಸೋಂಕಿನಿಂದ ಬ್ರೆಜಿಲ್‌ನಲ್ಲಿ 46.1 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಲಸಿಕೆ ಕೊರತೆಯಿಂದಾಗಿ ಇಲ್ಲಿ ವ್ಯಾಕ್ಸಿನೇಷನ್ ತುಂಬಾ ನಿಧಾನವಾಗಿತ್ತು.

ಸೆರಾನಾ ಬ್ರೆಜಿಲ್‌ನಲ್ಲಿ ಚೀನಾದ ಸಿನೋವಾಕ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊರೊನಾವಾಕ್ ಲಸಿಕೆಯನ್ನು ಉತ್ಪಾದಿಸುವ ಇನ್‌ಸ್ಟಿಟ್ಯೂಟೊ ಬುಟಾಂಟನ್ (Instituto Butantan) ಅವರ ಅಧ್ಯಯನದ ವಿಷಯವಾಗಿತ್ತು .ವ್ಯಾಕ್ಸಿನೇಷನ್ ಪ್ರಾರಂಭವಾದಾಗ ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದವು. ಆದಾಗ್ಯೂ, ಸುಮಾರು 75 ಪ್ರತಿಶತ ಜನರು ಲಸಿಕೆ ಪಡೆದ ನಂತರ ಇದು ಕುಸಿದಿದೆ.

ವ್ಯಾಕ್ಸಿನೇಷನ್ ಪೂರ್ಣಗೊಳಿಸಲು ವಿಜ್ಞಾನಿಗಳು ಸೆರಾನಾವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದ್ದಾರೆ. ಎಲ್ಲಾ ಮೂರು ಪ್ರದೇಶಗಳಲ್ಲಿ ಲಸಿಕೆಯ ಎರಡನೇ ಡೋಸ್ ಜತೆಗೆ ಸೋಂಕು ಪ್ರಕರಣದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ರೋಗಲಕ್ಷಣಗಳ ರೋಗಿಗಳ ಸಂಖ್ಯೆ 80 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳ ಸಂಖ್ಯೆಯನ್ನು ಶೇಕಡಾ 86 ರಷ್ಟು ಕಡಿಮೆ ಮಾಡಲಾಗಿದೆ. ಕೊವಿಡ್ ಸಾವುಗಳು ಶೇಕಡಾ 95 ರಷ್ಟು ಕಡಿಮೆಯಾಗಿದೆ ಎಂದು ಬುಟಾಂಟನ್ ಅಂಕಿ ಅಂಶಗಳ ಆಧಾರದ ಮೇಲೆ ಟಿವಿ ಗ್ಲೋಬೊ ವರದಿ ಮಾಡಿದೆ.

ಬ್ರೆಜಿಲ್​ನ ಲ್ಲಿ ಭಾನುವಾರ 43,520 ಹೊಸ ಕೊವಿಡ್ ಪ್ರಕರಣ ದಾಖಲಾಗಿದ್ದು, ಒಟ್ಟು 16.5 ದಶಲಕ್ಷ ಪ್ರಕರಣಗಳನ್ನು ತಲುಪಿದೆ. ವಿಶ್ವದಲ್ಲಿ ಕೊವಿಡ್ ಸಾವುಗಳನ್ನು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 874 ಹೊಸ ಸಾವು ಪ್ರಕರಣ ದಾಖಲಿಸಿದ್ದು, ಒಟ್ಟು ಸಾವಿನ ಸಂಖ್ಯೆ 4.61,931 ಕ್ಕೆ ಏರಿದೆ.

ಅಧ್ಯಕ್ಷ ಜೈರ್ ಬೋಲ್ಸನಾರೊ ವಿರುದ್ಧ ಪ್ರತಿಭಟನೆ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಸರ್ಕಾರದ ಕೋವಿಡ್ -19 ಬಿಕ್ಕಟ್ಟಿನ ನಿರ್ವಹಣೆ ಕುರಿತು ಬ್ರೆಜಿಲ್ ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ರಾಜಧಾನಿ ಬ್ರೆಸಿಲಿಯಾದಲ್ಲಿ, ಸಾವಿರಾರು ಜನರು ಕಾಂಗ್ರೆಸ್ ಮುಂದೆ ಜಮಾಯಿಸಿ ಅಧ್ಯಕ್ಷರ ದೋಷಾರೋಪಕ್ಕೆ ಕರೆ ನೀಡಿದರು ಮತ್ತು ಹೆಚ್ಚಿನ ಲಸಿಕೆಗಳನ್ನು ಕೋರಿದರು. ರಿಯೊ ಡಿ ಜನೈರೊ ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳು ನಡೆದವು.

ಸಾಂಕ್ರಾಮಿಕ ರೋಗಕ್ಕೆ ಅವರ ಪ್ರತಿಕ್ರಿಯೆಯ ಮೇಲೆ ಬೋಲ್ಸೊನಾರೊ ಅವರ ಜನಪ್ರಿಯತೆಯು ಕುಸಿಯಿತು. ಬ್ರೆಜಿಲ್ ಸುಮಾರು 460,000 ಸಾವುಗಳನ್ನು ದಾಖಲಿಸಿದೆ. ಅಮೆರಿಕ ನಂತರ ವಿಶ್ವದ ಎರಡನೇ ಅತಿ ಹೆಚ್ಚು ಸಾವು ಪ್ರಕರಣ ವರದಿ ಆಗಿದ್ದು ಇಲ್ಲೇ. ಕೊರೊನಾವೈರಸ್ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದೆ ಬ್ರೆಜಿಲ್.

ಶನಿವಾರದ ಪ್ರತಿಭಟನೆಯು ಬೋಲ್ಸೊನಾರೊ ಅವರ ಮೇಲೆ ಮತ್ತಷ್ಟು ಒತ್ತಡವನ್ನು ಬೀರಿತು. ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ರೀತಿ ಮತ್ತು ಲಸಿಕೆ ಕಾರ್ಯಕ್ರಮದ ನಿಧಾನಗತಿಯ ಬಗ್ಗೆ ಬ್ರೆಜಿಲ್ ನ ಸೆನೆಟ್ ತನಿಖೆ ನಡೆಸಲಿದೆ.

ವಿರೋಧ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಸಾಮಾಜಿಕ ಚಳುವಳಿಗಳು ಬೋಲ್ಸನಾರೊ ಅವರು ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಅದರ ಪರಿಣಾಮಗಳನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿವೆ.

ಇದನ್ನೂ ಓದಿ: Coronavirus: ವಿಶ್ವದಲ್ಲಿ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಭಾರತ

Published On - 6:20 pm, Mon, 31 May 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ