AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಖಲಿಸ್ತಾನಿ ಬೆಂಬಲಿಗರ ಎರಡು ಗುಂಪುಗಳ ನಡುವೆ ಘರ್ಷಣೆ

ಅಮೆರಿಕದಲ್ಲಿ ಎರಡು ಖಲಿಸ್ತಾನಿ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಸಿಖ್ ಫಾರ್ ಜಸ್ಟಿಸ್ (SFJ) ಮುಖ್ಯಸ್ಥ ಮತ್ತು ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಇತ್ತೀಚೆಗೆ ಅಮೆರಿಕದಲ್ಲಿ ಖಲಿಸ್ತಾನಿ ಚಳವಳಿಯನ್ನು ಉತ್ತೇಜಿಸಲು ಜನಾಭಿಪ್ರಾಯ ಸಂಗ್ರಹಿಸಿದ್ದರು. ಇದೇ ವೇಳೆ ಖಲಿಸ್ತಾನಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಮೆರಿಕ ಪೋಲೀಸರ ಪ್ರಕಾರ, ಈ ಜನಾಭಿಪ್ರಾಯ ಸಂಗ್ರಹವನ್ನು ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿ ಮಾಡಲಾಯಿತು. ಪನ್ನು ಎಲ್ಲಾ ಭಯೋತ್ಪಾದಕ ಸಂಘಟನೆಗಳನ್ನು ಗುಂಪುಗೂಡಿಸಲು ಆಹ್ವಾನಿಸಿದ್ದ. ಆಗ ಹೊಡೆದಾಟ ನಡೆದಿದೆ.

ಅಮೆರಿಕ: ಖಲಿಸ್ತಾನಿ ಬೆಂಬಲಿಗರ ಎರಡು ಗುಂಪುಗಳ ನಡುವೆ ಘರ್ಷಣೆ
ಗುರುಪತ್ವಂತ್ ಸಿಂಗ್ ಪನ್ನು
ನಯನಾ ರಾಜೀವ್
|

Updated on:Feb 05, 2024 | 2:55 PM

Share

ಸಿಖ್ ಫಾರ್ ಜಸ್ಟಿಸ್ (SFJ) ಮುಖ್ಯಸ್ಥ ಮತ್ತು ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು(Guru Patwant Singh Pannun) ಇತ್ತೀಚೆಗೆ ಅಮೆರಿಕದಲ್ಲಿ ಖಲಿಸ್ತಾನಿ ಚಳವಳಿಯನ್ನು ಉತ್ತೇಜಿಸಲು ಜನಾಭಿಪ್ರಾಯ ಸಂಗ್ರಹಿಸಿದ್ದರು. ಇದೇ ವೇಳೆ ಖಲಿಸ್ತಾನಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಮೆರಿಕ ಪೋಲೀಸರ ಪ್ರಕಾರ, ಈ ಜನಾಭಿಪ್ರಾಯ ಸಂಗ್ರಹವನ್ನು ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿ ಮಾಡಲಾಯಿತು. ಪನ್ನು ಎಲ್ಲಾ ಭಯೋತ್ಪಾದಕ ಸಂಘಟನೆಗಳನ್ನು ಗುಂಪುಗೂಡಿಸಲು ಆಹ್ವಾನಿಸಿದ್ದ.

ಅಷ್ಟರಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಮತ್ತು ಸರಬ್ಜಿತ್ ಸಿಂಗ್ ಸಾಬಿ ಗುಂಪಿನ ಸದಸ್ಯರೂ ಅಲ್ಲಿಗೆ ತಲುಪಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ನಂತರ ಮಾತಿನ ಚಕಮಕಿ ನಡೆದಿದೆ. ನಿಜ್ಜಾರ್​ನ ಆಪ್ತ ಸ್ನೇಹಿತನ ಮನೆಯ ಮೇಲೆ ಗುಂಡಿನ ದಾಳಿ ಇತ್ತೀಚೆಗೆ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್​ ಅವರ ಸಂಬಂಧಿಕರ ಮನೆಯಲ್ಲಿ ಗುಂಡಿನ ದಾಳಿ ನಡೆದಿದೆ.

2019 ರಲ್ಲಿ SFJ ಅನ್ನು ಭಾರತ ನಿಷೇಧಿಸಿತು 2019 ರಲ್ಲಿ, ಪನ್ನು ಅವರ ಸಂಘಟನೆ SFJ ಅನ್ನು ಭಾರತ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ನಿಷೇಧಿಸಿತು. ಇದರ ನಂತರ, 1 ಜುಲೈ ಸರ್ಕಾರವು 40 SFJ-ಸಂಬಂಧಿತ ವೆಬ್ ಪುಟಗಳು ಮತ್ತು YouTube ಚಾನಲ್‌ಗಳನ್ನು ನಿಷೇಧಿಸಿತು. 2023 ರಲ್ಲಿ, ಏರ್ ಇಂಡಿಯಾಕ್ಕೆ ಬೆದರಿಕೆ ಹಾಕಿದ ನಂತರ ಪನ್ನು ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದವು.

ಪಂಜಾಬ್: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಆಸ್ತಿಗಳ ಮೇಲೆ ಎನ್​ಐಎ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ ಅಧಿಕಾರಿಗಳು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು( Gurpatwant Singh Pannun ) ಆಸ್ತಿಗಳ ಮೇಲೆ ದಾಳಿ ನಡೆಸಿದೆ. ಆತ ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್​ನ ಮುಖಂಡ. ಚಂಡೀಗಢ ಮತ್ತು ಅಮೃತಸರದಲ್ಲಿರುವ ಆತನ ಆಸ್ತಿಯನ್ನು ಎನ್‌ಐಎ ವಶಪಡಿಸಿಕೊಂಡಿದೆ. ಪನ್ನು ಅಮೃತಸರ ನಿವಾಸಿಯಾಗಿದ್ದು, ಆತನ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿದೆ.

ಮತ್ತಷ್ಟು ಓದಿ:  ಬೆದರಿಕೆ ವಿಡಿಯೊ: ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನುನ್ ವಿರುದ್ಧ ಪ್ರಕರಣ ದಾಖಲು

ಕೆನಡಾದಲ್ಲಿ ಪನ್ನು ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಭಾರತದಲ್ಲಿ ಪನ್ನು ವಿರುದ್ಧ ದೇಶವಿರೋಧಿ ಪಿತೂರಿ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿದ್ದು, ಅದರ ವಿವರಗಳನ್ನು ನೀಡಲಾಗಿದೆ. ಪನ್ನುನ ಅಪರಾಧಗಳ ಬಗ್ಗೆ ಕೆನಡಾಕ್ಕೆ ಹಲವಾರು ಬಾರಿ ತಿಳಿಸಲಾಗಿದೆ. ಆದರೆ ಕೆನಡಾ ಭಯೋತ್ಪಾದಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಚಂಡೀಗಢದಲ್ಲಿ, ಖಾಲಿಸ್ತಾನಿ ಗುರುಪತ್ವಂತ್ ಪನ್ನು ಅವರ ಸೆಕ್ಟರ್ 15 ರ ಮನೆಯನ್ನು ಎನ್ಐಎ ವಶಪಡಿಸಿಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಎನ್‌ಐಎ ತಂಡ ಇಲ್ಲಿ ಹಾಜರಿದ್ದು, ಮನೆಯ ಹೊರಗೆ ಸೂಚನಾ ಫಲಕ ಹಾಕಿತ್ತು. ಅದೇ ರೀತಿ ಅಮೃತಸರದ ಖಾನ್ಕೋಟ್ ಗ್ರಾಮದಲ್ಲಿ ಪನ್ನುವಿನ 46 ಕನಾಲ್ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:53 pm, Mon, 5 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು