ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಖಂಡನೆ

ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದು, ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಜಾಗತಿಕ ಹಡಗು ಮಾರ್ಗಗಳಲ್ಲಿನ ಅಡಚಣೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಭಾರತದ ಇಂಧನ ಮತ್ತು ವ್ಯಾಪಾರ ಭದ್ರತೆಗಾಗಿ ಸಮುದ್ರ ಕಾರಿಡಾರ್‌ನ ಕಾರ್ಯತಂತ್ರದ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಖಂಡನೆ
Pm Modi

Updated on: Mar 23, 2026 | 6:21 PM

ನವದೆಹಲಿ, ಮಾರ್ಚ್ 23: ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಸ್ತಾಪಿಸಿದರು. “ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮೈತ್ರಿಕೂಟದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಕ್ಕಟ್ಟು ಈ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುತ್ತಿದೆ. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ವಿಶ್ವದ ಜನರು ಮತ್ತು ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಸಂಸತ್ತಿನ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಂತಹ ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಅಡಚಣೆಗಳು ಸ್ವೀಕಾರಾರ್ಹವಲ್ಲ. ರಾಜತಾಂತ್ರಿಕತೆಯ ಮೂಲಕ ಈ ಯುದ್ಧದ ವಾತಾವರಣದಲ್ಲಿಯೂ ಸಹ ಭಾರತೀಯ ಹಡಗುಗಳ ಸುರಕ್ಷಿತ ಸಾಗಣೆಗೆ ಭಾರತ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

“ಹಾರ್ಮುಜ್ ಜಲಸಂಧಿ ಭಾರತದ ಆರ್ಥಿಕತೆಗೆ ಅಗತ್ಯವಾದ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರ ಪೂರೈಕೆಗೆ ಪ್ರಮುಖ ಪಾತ್ರ ವಹಿಸುತ್ತದೆ. ಭಾರತದ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರ ಪೂರೈಕೆಯ ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಈ ಜಲಸಂಧಿಯ ಮೂಲಕ ಹಡಗುಗಳ ಸಂಚಾರ ತುಂಬಾ ಸವಾಲಿನದ್ದಾಗಿದೆ” ಎಂದು ಮೋದಿ ಹೇಳಿದ್ದಾರೆ.

ಈ ಪ್ರದೇಶದಲ್ಲಿನ ಬೆಳವಣಿಗೆಗಳು ಪಶ್ಚಿಮ ಏಷ್ಯಾ ಸಂಘರ್ಷದಿಂದ ಎದುರಾಗಿರುವ ಸವಾಲುಗಳಿಗೆ ಅದರಲ್ಲೂ ವಿಶೇಷವಾಗಿ ವಾಣಿಜ್ಯ ಸರಕುಗಳ ಸಂಚಾರಕ್ಕೆ ಮತ್ತಷ್ಟು ಸವಾಲುಗಳನ್ನು ಹೆಚ್ಚಿಸಿವೆ ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us