Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು

125 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ವಾಯುಪಡೆಯ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡು ಕನಿಷ್ಠ ಮೂವತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಕೊಲಂಬಿಯಾದ ಪುಟುಮಾಯೊ ಇಲಾಖೆಯ ಗವರ್ನರ್ ತಿಳಿಸಿದ್ದಾರೆ.ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಈ ಅಪಘಾತವು ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಸಂಭವಿಸಿದೆ ಎಂದು ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು
ವಿಮಾನ ಪತನ

Updated on: Mar 24, 2026 | 8:20 AM

ಕೊಲಂಬಿಯಾ, ಮಾರ್ಚ್​ 24: ಕೊಲಂಬಿಯಾದಲ್ಲಿ 124 ಜನರಿದ್ದ ವಾಯುಪಡೆಯ ವಿಮಾನ(Flight) ಪತ್ನಗೊಂಡಿದ್ದು, 30ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ಸೋಮವಾರ ಟೇಕ್ ಆಫ್ ಆದ ನಂತರ ಪತನಗೊಂಡಿದ್ದು, 34 ಜನರು ಸಾವನ್ನಪ್ಪಿದ್ದಾರೆ, ಸುಮಾರು 20ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಅಪಘಾತ ಇದಾಗಿದೆ. ಈ ದುರಂತವು ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಸಂಭವಿಸಿದೆ ಎಂದು ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ವಿಮಾನವು ಮದ್ದುಗುಂಡುಗಳನ್ನು ಹೊತ್ತೊಯ್ಯುತ್ತಿತ್ತು, ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ನೆಲಕ್ಕೆ ಅಪ್ಪಳಿಸಿ ನಂತರ ಅದು ಸ್ಫೋಟಗೊಂಡಿತು ಮತ್ತು ಪರಿಣಾಮವಾಗಿ, ವಿಮಾನವು ಬೆಂಕಿಗೆ ಆಹುತಿಯಾಯಿತು.

ವಿಮಾನ ಪತನ

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳು ವಿಮಾನ ಅಪಘಾತದ ಅವಶೇಷಗಳು ಇನ್ನೂ ಉರಿಯುತ್ತಿರುವುದನ್ನು ತೋರಿಸುತ್ತವೆ, ಆದರೆ ರಕ್ಷಣಾ ಕಾರ್ಯಕರ್ತರು ಬದುಕುಳಿದವರನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ. ಒಂದು ದೃಶ್ಯವು ದಟ್ಟವಾದ ಹುಲ್ಲು ಮತ್ತು ಕಾಡಿನಿಂದ ಆವೃತವಾದ ಅವಶೇಷಗಳಿಂದ ದಟ್ಟವಾದ ಹೊಗೆ ಏರುತ್ತಿರುವುದನ್ನು ತೋರಿಸಿದೆ.

ಮತ್ತಷ್ಟು ಓದಿ: ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಮತ್ತೊಂದು ವೀಡಿಯೊವು ವಿಮಾನವು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ನೆಲಕ್ಕೆ ಅಪ್ಪಳಿಸುವುದನ್ನು ಕಾಣಬಹುದು. ಪುಟುಮಾಯೊ ಇಲಾಖೆಯ ಗವರ್ನರ್ ಜಾನ್ ಗೇಬ್ರಿಯಲ್ ಮೋಲಿನಾ ಸ್ಥಳೀಯ ಸುದ್ದಿ ಸಂಸ್ಥೆಗೆ ತಿಳಿಸಿದ್ದು, 34 ಜನರು ಸಾವನ್ನಪ್ಪಿದ್ದಾರೆ, 70 ಜನರು ಗಾಯಗೊಂಡಿದ್ದಾರೆ ಮತ್ತು 21 ಜನರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ.

ಹಲವಾರು ಜನರು ಇನ್ನೂ ಕಾಣೆಯಾಗಿರುವುದರಿಂದ ಸಾವಿನ ಸಂಖ್ಯೆ ಬದಲಾಗಬಹುದು ಎಂದು ಅವರು ಹೇಳಿದ್ದಾರೆ. ಸೋಮವಾರ ಸಂಜೆ ವೇಳೆಗೆ ಸಾವಿನ ಸಂಖ್ಯೆ ದ್ವಿಗುಣಗೊಂಡು 66ಕ್ಕೆ ತಲುಪಿತ್ತು ಎಂದು ರಾಯಿಟರ್ಸ್​ ವರದಿ ಮಾಡಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:19 am, Tue, 24 March 26

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us