Canada Ram Mandir: ಕೆನಡಾದಲ್ಲಿ ಮುಂದುವರೆದ ಹಿಂದೂ ದೇಗುಲಗಳ ಮೇಲಿನ ದಾಳಿ, ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹ

|

Updated on: Feb 15, 2023 | 10:27 AM

ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರೆದಿದೆ. ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಬಾರಿ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿರುವ ಪ್ರಕರಣ ಮುನ್ನೆಲೆಗೆ ಬಂದಿದೆ.

Canada Ram Mandir: ಕೆನಡಾದಲ್ಲಿ ಮುಂದುವರೆದ ಹಿಂದೂ ದೇಗುಲಗಳ ಮೇಲಿನ ದಾಳಿ, ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹ
ರಾಮ ಮಂದಿರ
Follow us on

ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರೆದಿದೆ. ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಬಾರಿ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಟೊರೊಂಟೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಇದನ್ನು ಖಂಡಿಸಿದೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: Hindu Temples: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳಿಂದ ದಾಳಿ, ವಿಗ್ರಹಗಳ ಧ್ವಂಸ

ಕಳೆದ ವಾರ ಬ್ರಾಂಪ್ಟನ್​ನಲ್ಲಿರುವ ಗೌರಿಶಂಕರ ದೇವಸ್ಥಾನದ ಗೋಡೆಗಳ ಮೇಲೆ ಹಿಂದ್ಊ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ದೇವಾಲಯಗಳ ಮೇಲಿನ ಹಾನಿ ಕೆನಡಾದ ಭಾರತದ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ.

ಇದಕ್ಕೂ ಮುನ್ನ ಕಳೆದ ವರ್ಷ ಜುಲೈನಲ್ಲಿ ಬ್ರಾಂಪ್ಟನ್​ನಲ್ಲಿ ಇಂತಹ ಮೂರು ಘಟನೆಗಳು ನಡೆದಿವೆ. ಕಳೆದ ಸೆಪ್ಟೆಂಬರ್​ನಲ್ಲಿ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತೀಯರ ವಿರುದ್ಧ ದ್ವೇಷ ಮತ್ತು ಭಾರತ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತೀವ್ರ ಹೆಡಚ್ಚಳವಾಗಿದೆ.

ಕೆನಡಾ ಸರ್ಕಾರದ ಅಂಕಿ-ಅಂಶಗಳ ಪ್ರಕಾರ 2019-2021ರ ನಡುವೆ, ಕೆನಡಾದಲ್ಲಿ ಧರ್ಮ, ಲೈಂಗಿಕ ದೃಷ್ಟಿಕೋನ ಹಾಗೂ ಜನಾಂಗಕ್ಕೆ ಸಂಬಂಧಿಸಿದ ಅಪರಾಧಗಳು ಶೇ.72ರಷ್ಟು ಹೆಚ್ಚಾಗಿದೆ. ಇದು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅದರಲ್ಲೂ ಭಾರತೀಯ ಸಮುದಾಯಗಳಲ್ಲಿ ಭಯ ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 am, Wed, 15 February 23