Covid 19: ಜಗತ್ತಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ; ಒಂದು ವಾರದಲ್ಲಿ 1 ಕೋಟಿಗೂ ಹೆಚ್ಚು ಪ್ರಕರಣಗಳು ದಾಖಲು

Corona Cases: ಜಗತ್ತಿನಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಒಂದು ವಾರದ ಅವಧಿಯಲ್ಲಿ 11 ಮಿಲಿಯನ್​ಗೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಕುರಿತ ವರದಿ ಇಲ್ಲಿದೆ.

Covid 19: ಜಗತ್ತಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ; ಒಂದು ವಾರದಲ್ಲಿ 1 ಕೋಟಿಗೂ ಹೆಚ್ಚು ಪ್ರಕರಣಗಳು ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Mar 18, 2022 | 10:08 AM

ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ (Corona Cases) ಏರಿಕೆಯಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ಮಾಹಿತಿ ಉಲ್ಲೇಖಿಸಿ ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಅಂಕಿಅಂಶಗಳನ್ನು ತೆರೆದಿಟ್ಟಿದೆ. ಮಾರ್ಚ್ 7 ರಿಂದ ಮಾರ್ಚ್ 13ರ ನಡುವೆ 11 ಮಿಲಿಯನ್ (1.1 ಕೋಟಿ) ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಂದು ತಿಂಗಳು ಕೊವಿಡ್ ಇಳಿಕೆಯ ನಂತರ ಇದೀಗ ಮತ್ತೆ ಉಲ್ಬಣವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಸಂಖ್ಯೆಯು ಶೇ.8ರಷ್ಟು ಹೆಚ್ಚಾಗಿದೆ. ಹಲವು ದೇಶಗಳಲ್ಲಿ ಕಡಿಮೆ ಪರೀಕ್ಷೆಗಳು ನಡೆಯುತ್ತಿವೆ. ಅದರ ಹೊರತಾಗಿಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇದು ಇನ್ನೂ ಹೆಚ್ಚಬಹುದು ಎಂದು WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಗುರುವಾರ ಎಚ್ಚರಿಸಿದ್ದಾರೆ. ಜಗತ್ತಿನಲ್ಲಿ ಕೊರೊನಾ ಏರಿಕೆಯ ಕುರಿತ ಮುಖ್ಯಾಂಶಗಳು ಇಲ್ಲಿವೆ.

ಜಗತ್ತಿನಲ್ಲಿ ಕೊರೊನಾ ಏರಿಕೆಯ ಕುರಿತು ಮುಖ್ಯಾಂಶಗಳು:

  1. ಚೀನಾದಲ್ಲಿ ಮತ್ತೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಇದು ಒಮಿಕ್ರಾನ್ ರೂಪಾಂತರದಿಂದ ಸಂಭವಿಸಿದೆ ಎನ್ನಲಾಗುತ್ತಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್ ಆರ್ಥಿಕ ಸ್ಥಿತಿ ಗಮನದಲ್ಲಿಟ್ಟುಕೊಂಡ ನಿಯಮಗಳನ್ನು ಹೇರುವ ಕುರಿತು ಚಿಂತಿಸಿದ್ದಾರೆ ಎಂದು ವರದಿಗಳು ಹೇಳಿವೆ.
  2. ಚೀನಾದಲ್ಲಿ ಬುಧವಾರ 5,200ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಇದು ಕೊರೊನಾ ಆರಂಭಿಕ ಸಮಯದಲ್ಲಿ ಕಂಡುಬಂದಿದ್ದಕ್ಕಿಂತ ಹೆಚ್ಚಾಗಿತ್ತು. ಅದರ 24 ಗಂಟೆಗಳ ನಂತರ 3,000 ಪ್ರಕರಣಗಳು ವರದಿಯಾಗಿದ್ದು, ಕೆಲವೆಡೆ ನಿರ್ಬಂಧಗಳನ್ನು ಮರಳಿ ವಿಧಿಸಲಾಗಿದೆ.
  3. ದಕ್ಷಿಣ ಕೊರಿಯಾದಲ್ಲಿ 6,21,328 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, 429 ಸಾವುಗಳು ವರದಿಯಾಗಿವೆ. ಅದಾಗ್ಯೂ ನಿರ್ಬಂಧಗಳನ್ನು ಕೊನೆಗೊಳಿಸಲು ಚಿಂತಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  4. ಯುರೋಪ್​ನಲ್ಲೂ ಕೊರೊನಾ ಏರಿಕೆಯಾಗುತ್ತಿದೆ. ಜರ್ಮನಿಯಲ್ಲಿ ನಿರ್ಬಂಧಗಳು ಮುಂದುವರೆದಿವೆ.
  5. ಯುರೋಪ್​ಗೆ ಈಗಾಗಲೇ ಕೊರೊನಾದ ಹೊಸ ಅಲೆ ಅಪ್ಪಳಿಸಿದೆ ಎಂದು ಕೆಲವು ತಜ್ಞರು ಅಭಿಪ್ರಾಯ ಹಂಚಿಕೊಂಡಿದ್ದಾರೆ.
  6. ಉಕ್ರೇನ್ ಬಿಕ್ಕಟ್ಟಿನಿಂದ ಯುರೋಪ್​ಗೆ ಸಹಸ್ರಾರು ಜನರು ವಲಸೆ ಹೋಗಿದ್ದಾರೆ. ಈ ಸ್ಥಳಾಂತರವು ಕೊರೊನಾ ಏರಿಕೆಗೆ ಕಾರಣವಾಗಬಹುದು ಎಂದಿದ್ದಾರೆ ತಜ್ಞರು.
  7. ಅಮೇರಿಕಾದ ಉನ್ನತ ವೈದ್ಯಕೀಯ ತಜ್ಞ ಆಂಥೋನಿ ಫೌಸಿ ‘ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾದರೆ ನಿರ್ಬಂಧಗಳನ್ನು ಹೇರಬೇಕಾಗಬಹುದು’’ ಎಂದಿದ್ದಾರೆ.

ಇದನ್ನೂ ಓದಿ:

Ukraine Crisis: 20 ದಿನದಲ್ಲಿ 7,000 ರಷ್ಯನ್ ಸೈನಿಕರ ಸಾವು; ರಷ್ಯಾ- ಉಕ್ರೇನ್ ಬಿಕ್ಕಟ್ಟಿನ 10 ಮುಖ್ಯಾಂಶಗಳು ಇಲ್ಲಿವೆ

Crime News: ವಿಚಾರಣಾಧೀನ ಖೈದಿ ಜೈಲಿನ ಮುಖ್ಯ ದ್ವಾರದಿಂದಲೇ ಎಸ್ಕೇಪ್! ಬೆಳಗಾವಿಯಲ್ಲಿ ಘಟನೆ

Published On - 10:01 am, Fri, 18 March 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್