China: ಚೀನಾದಲ್ಲಿ ಮತ್ತೆ ಕೊವಿಡ್ ಹಾವಳಿ: 2591 ಮಂದಿಯಲ್ಲಿ ಸೋಂಕು ಪತ್ತೆ, 20ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ ಲಾಕ್​ಡೌನ್

Coronavirus in China: ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಚೀನಾದ ಪ್ರಾಂತೀಯ ಸರ್ಕಾರಗಳು ಕೊವಿಡ್​ ನಿರ್ಬಂಧಗಳಿಂದಾಗಿ ಏದುಸಿರು ಬಿಡುತ್ತಿವೆ.

China: ಚೀನಾದಲ್ಲಿ ಮತ್ತೆ ಕೊವಿಡ್ ಹಾವಳಿ: 2591 ಮಂದಿಯಲ್ಲಿ ಸೋಂಕು ಪತ್ತೆ, 20ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ ಲಾಕ್​ಡೌನ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 23, 2022 | 12:54 PM

ಬೀಜಿಂಗ್: ಚೀನಾದಲ್ಲಿ ಕೊರೊನಾ ಸೋಂಕು (Coronavirus) ವ್ಯಾಪಿಸುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 20ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ ಚೀನಾ ಲಾಕ್​ಡೌನ್ ಘೋಷಿಸಿದ್ದು, ಸಂಚಾರಕ್ಕೂ ನಿರ್ಬಂಧಗಳನ್ನು ವಿಧಿಸಿದೆ. ಚೀನಾದಲ್ಲಿ ನಿನ್ನೆ (ಮಾರ್ಚ್ 22) ಒಟ್ಟು 2591 ಮಂದಿಯಲ್ಲಿ ಕೊವಿಡ್ ಸೋಂಕು ಪತ್ತೆಯಾಗಿದೆ ಎಂದು ಚೀನಾ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. ಸ್ಥಳೀಯವಾಗಿ ವರದಿಯಾಗಿರುವ ಸೋಂಕು ಪ್ರಕರಣಗಳ ಪೈಕಿ ಜಿಲಿನ್ ಪ್ರಾಂತ್ಯದಲ್ಲಿ ಅತಿಹೆಚ್ಚು (2,320) ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಫುಜೈನ್ ಪ್ರಾಂತ್ಯದಲ್ಲಿ 110, ಲಿಯಾನಿಂಗ್ ಪ್ರಾಂತ್ಯದಲ್ಲಿ 36, ಟಿನಾಜಿನ್ ಮತ್ತು ಶಾಂಗ್​ಡಾಂಗ್ ಪ್ರಾಂತ್ಯದಲ್ಲಿ ತಲಾ 24, ಗುನ್​ಡೊಂಗ್​ ಪ್ರಾಂತ್ಯದಲ್ಲಿ 15 ಮತ್ತು ಹಿಲೊನ್​ಗ್​ಜಿಯಾಂಗ್ ಪ್ರಾಂತ್ಯದ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಚೀನಾದ ಸುದ್ದಿಸಂಸ್ಥೆಯ ಕ್ಸಿನುವಾ ವರದಿ ಮಾಡಿದೆ.

12 ಸೋಂಕುಗಳು ಇತರ ಪ್ರಾಂತ್ಯಗಳಲ್ಲಿ ವರದಿಯಾಗಿವೆ. ವಿವಿಧೆಡೆಯಿಂದ ಬಂದಿರುವ 76 ಮಂದಿ ಸೋಂಕಿತರೂ ಈ ಪಟ್ಟಿಯಲ್ಲಿ ಸೇರಿದ್ದಾರೆ. ಎಲ್ಲ ಶಂಕಿತ ಸೋಂಕಿತರು ಮತ್ತು ಇತರೆಡೆಗಳಿಂದ ಬಂದವರನ್ನು ಸಾಂಘೈನಲ್ಲಿ ಕಟ್ಟುನಿಟ್ಟಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಾಗತಿಕ ಪಿಡುಗಿನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಹಲವು ಪ್ರಾಂತ್ಯಗಳು ಮತ್ತು ನಗರಗಳಲ್ಲಿ ಪ್ರವಾಸ ನಿರ್ಬಂಧಿಸಿದ್ದು, ಲಾಕ್​ಡೌನ್ ಘೋಷಿಸಿದ್ದಾರೆ. ಜಿಲಿನ್, ಹೆಬೈ, ಗುಂಗ್​ಡೊಂಗ್ ಮತ್ತು ಶಾಂಘೈ ಪ್ರಾಂತ್ಯಗಳಲ್ಲಿ ಪರಿಸ್ಥಿತಿ ವಿಷಮಿಸಿದೆ.

ದೇಶವ್ಯಾಪಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವುದರಿಂದ ಚೀನಾ ತನ್ನ ನಾಗರಿಕರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ‘ಕೊವಿಡ್ ವಿಚಾರದಲ್ಲಿ ಮತ್ತು ನಿರ್ಬಂಧಗಳನ್ನು ಪಾಲಿಸುವಲ್ಲಿ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಿ’ ಎಂದು ಈ ಮೊದಲು ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಕೊವಿಡ್ ನಿರ್ವಹಣೆಗಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

‘ಕೊರೊನಾ ವೈರಸ್ ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆ’ (Novel Coronavirus Diagnosis And Treatment Plan) ದಾಖಲೆಯನ್ನು ತನ್ನ ವೆಬ್​ಸೈಟ್​ಗೆ ಅಪ್​ಲೋಡ್ ಮಾಡಿದೆ. ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಚೀನಾದ ಪ್ರಾಂತೀಯ ಸರ್ಕಾರಗಳು ಕೊವಿಡ್​ ನಿರ್ಬಂಧಗಳಿಂದಾಗಿ ಏದುಸಿರು ಬಿಡುತ್ತಿವೆ. ಆರೋಗ್ಯ ವೆಚ್ಚದ ಏರಿಕೆ ಮತ್ತು ನಿರ್ಬಂಧದ ಆದೇಶಗಳ ಅಡಕತ್ತರಿಯಲ್ಲಿ ಸ್ಥಳೀಯ ಸರ್ಕಾರಗಳು ಸಿಲುಕಿವೆ.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

ಇದನ್ನೂ ಓದಿ: ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ವೈರಸ್ ಪತ್ತೆ; ಚೀನಾದಲ್ಲಿ ಸೂಪರ್ ಮಾರ್ಕೆಟ್​ಗಳು ಬಂದ್

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು