ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಲು ರಾಷ್ಟ್ರಗಳಿಗೆ ಸೂಚನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಲು ರಾಷ್ಟ್ರಗಳಿಗೆ ಸೂಚನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ
ಕೊರೊನಾ
Follow us
ನಯನಾ ರಾಜೀವ್
|

Updated on: Dec 25, 2023 | 12:33 PM

ಕೊರೊನಾ(Corona) ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.

ಕ್ರಿಸ್ಮಸ್​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.

ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್‌ ಕೂಡ ಏರಿಕೆ ಕಂಡಿದ್ದು, 7.35 % ಆಗಿದೆ.

ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.

ಬೆಂಗಳೂರಿನಲ್ಲಿ 350-400 ಟೆಸ್ಟ್ ನಡೆಸುತ್ತಿದ್ದು 1000 ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ