AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ತನಗೆ ಸಂಬಂಧವಿಲ್ಲದಿದ್ದರೂ ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ದಂಡೆತ್ತಿ ಹೋಗಿತ್ತು ಅಮೆರಿಕ. ಅಮೆರಿಕದ ಈ ನಡೆಗೆ ಜಗತ್ತಿನಾದ್ಯಂತ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಸಮಯದಲ್ಲಿ ಬೆಂಬಲ ನೀಡದ ಕಾರಣಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ನ್ಯಾಟೋ ಮಿತ್ರರಾಷ್ಟ್ರಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ದೀರ್ಘಕಾಲದ ಯುಎಸ್ ಮಿತ್ರರಾಷ್ಟ್ರಗಳಾಗಿರುವ ನ್ಯಾಟೋ ರಾಷ್ಟ್ರಗಳನ್ನು "ಹೇಡಿಗಳು, ಕಾಗದದ ಹುಲಿಗಳು" ಎಂದು ಟ್ರಂಪ್ ಲೇವಡಿ ಮಾಡಿದ್ದಾರೆ.

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Mar 20, 2026 | 10:12 PM

Share

ವಾಷಿಂಗ್ಟನ್, ಮಾರ್ಚ್ 20: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ನ ಹಿಡಿತವನ್ನು ಕಡಿಮೆ ಮಾಡಲು ಸೈನ್ಯವನ್ನು ಕಳುಹಿಸಬೇಕೆಂಬ ತನ್ನ ಮನವಿಗೆ ಬೆಂಬಲ ನೀಡದ NATO ಮಿತ್ರರಾಷ್ಟ್ರಗಳ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಟೋ ರಾಷ್ಟ್ರಗಳನ್ನು “ಹೇಡಿಗಳು, ಪೇಪರ್ ಟೈಗರ್​ಗಳು” ಎಂದು ಟೀಕಿಸಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕ ಇಲ್ಲದೆ NATO “ಕಾಗದದ ಹುಲಿ” ಎಂದು ಹೇಳಿದರು. ಈ ಸಂಘರ್ಷವನ್ನು ಈಗಾಗಲೇ ಮಿಲಿಟರಿ ದಾಳಿಯ ಮೂಲಕ ನಾವು ಗೆದ್ದಿದ್ದೇವೆ. ನಮಗೆ ಯಾವುದೇ ಅಪಾಯವಿಲ್ಲ. ಪರಮಾಣು ಚಾಲಿತ ಇರಾನ್ ಅನ್ನು ನಿಲ್ಲಿಸುವ ಹೋರಾಟಕ್ಕೆ ನ್ಯಾಟೋ ರಾಷ್ಟ್ರಗಳು ಸೇರಲು ಬಯಸಲಿಲ್ಲ. ಈಗ ಹೋರಾಟವು ಮಿಲಿಟರಿಯ ದಾಳಿಯಾಗಿ ಗೆದ್ದಿದೆ. ಈಗ ಅವರು ಹೆಚ್ಚಿನ ತೈಲ ಬೆಲೆಗಳ ಬಗ್ಗೆ ದೂರು ನೀಡುತ್ತಿದ್ದಾರೆ. ಅವರಿಂದಲೇ ತೈಲ ಬೆಲೆ ಹೆಚ್ಚಳವಾಗಿದ್ದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಸಹಾಯ ಮಾಡಲು ಅವರು ಬಯಸಲಿಲ್ಲ. ಅವರ ಈ ವರ್ತನೆಯನ್ನು ನಾವು ನೆನಪಿನಲ್ಲಿಟ್ಟುಕೊಳ್ಳುತ್ತೇನೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಹಾರ್ಮುಜ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನು ಸುರಕ್ಷಿತಗೊಳಿಸಲು ಸಹಾಯ ಮಾಡುವಂತೆ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಮುಖ ಮಿತ್ರರಾಷ್ಟ್ರಗಳನ್ನು ಒತ್ತಾಯಿಸಿದ್ದರು. ಆದರೆ, ನ್ಯಾಟೋ ರಾಷ್ಟ್ರಗಳು ಇದಕ್ಕೆ ಬೆಂಬಲ ನೀಡಿರಲಿಲ್ಲ. ಫೆಬ್ರವರಿ 28ರಂದು ಯುಎಸ್-ಇಸ್ರೇಲ್ ದಾಳಿಯೊಂದಿಗೆ ಪ್ರಾರಂಭವಾದ ಯುದ್ಧವು ಜಾಗತಿಕ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿದೆ. ಇದರಿಂದ ದೊಡ್ಡ ಪ್ರಮಾಣದ ಸಾವುನೋವುಗಳಿಗೆ ಕಾರಣವಾಯಿತು ಮತ್ತು ಲಕ್ಷಾಂತರ ಜನರನ್ನು ಸ್ಥಳಾಂತರಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ