ಅಪ್ಪನ ಗನ್ ಜೊತೆ ಆಟವಾಡುತ್ತಾ ಮುಖಕ್ಕೆ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!

ಅಮೆರಿಕಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಲೂಸಿಯಾನದಲ್ಲಿ 3 ವರ್ಷದ ಬಾಲಕ ತನ್ನ ತಂದೆಯ ಗನ್​ನಿಂದ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡಿದ್ದಾನೆ. ತನ್ನ ಮನೆಯ ಶೆಲ್ಪ್ ಮೇಲೆ ಪಿಸ್ತೂಲ್ ಇಟ್ಟಿದ್ದನ್ನು ಕಂಡ ಬಾಲಕ ಮೇಲೆ ಹತ್ತಿ ಆ ಪಿಸ್ತೂಲ್ ತೆಗೆದುಕೊಂಡು ಆಟವಾಡುವಾಗ ಈ ದುರ್ಘಟನೆ ನಡೆದಿದೆ.

ಅಪ್ಪನ ಗನ್ ಜೊತೆ ಆಟವಾಡುತ್ತಾ ಮುಖಕ್ಕೆ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 20, 2024 | 5:41 PM

ಲೂಸಿಯಾನ: ಅಮೆರಿಕದ ಲೂಸಿಯಾನ ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮೂರು ವರ್ಷದ ಬಾಲಕ ತನ್ನ ತಂದೆಯ ಗನ್‌ ಜೊತೆ ಆಟವಾಡುವಾಗ ಆಕಸ್ಮಿಕವಾಗಿ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡಿದ್ದಾನೆ. ಇದರಿಂದ ಆ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಬೆಡ್​ ರೂಂನಲ್ಲಿ ಇಟ್ಟಿದ್ದ ತನ್ನ ತಂದೆಯ ಗನ್ ಅನ್ನು ತೆಗೆದುಕೊಂಡ ಬಾಲಕ ಅದರೊಂದಿಗೆ ಆಟವಾಡುತ್ತಿದ್ದ. ಇದು ಯಾರ ಗಮನಕ್ಕೂ ಬರಲಿಲ್ಲ. ಈ ವೇಳೆ ಆತ ತನ್ನ ಮುಖದ ಮುಂದೆ ಗನ್ ಹಿಡಿದುಕೊಂಡು ಟ್ರಿಗರ್ ಒತ್ತಿದ್ದಾನೆ. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಶಬ್ದ ಕೇಳಿ ಓಡಿಬಂದ ಆತನ ತಂದೆ ಅವನನ್ನು ಬದುಕಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆದರೆ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಆ ಗನ್ ಅನ್ನು ಹಾಸಿಗೆಯ ಮೇಲ್ಭಾಗದಲ್ಲಿದ್ದ ಶೆಲ್ಫ್​ನಲ್ಲಿ ಇರಿಸಲಾಗಿತ್ತು. ಹೀಗಾಗಿ, ಆ ಮಗುವಿಗೆ ಅದು ಸುಲಭವಾಗಿ ಸಿಕ್ಕಿತ್ತು.

ಇದನ್ನೂ ಓದಿ: ಬಿಹಾರ: ವಿಐಪಿ ಮುಖ್ಯಸ್ಥ, ಮಾಜಿ ಸಚಿವ ಮುಕೇಶ್​ ಸಹಾನಿ ತಂದೆ ಜಿತನ್ ಹತ್ಯೆ

ತಂದೆ ಬಂದೂಕನ್ನು ಸುರಕ್ಷತೆಯ ದೃಷ್ಟಿಯಿಂದ ಇಟ್ಟುಕೊಂಡಿದ್ದರೂ ಅದನ್ನು ಸರಿಯಾಗಿ ಭದ್ರಪಡಿಸದಿರುವುದು ದುರದೃಷ್ಟಕರ ದುರಂತಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ