Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Shaheen Cyclone in Oman: ಶಾಹೀನ್ ಚಂಡಮಾರುತದಿಂದ ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು
ಚಂಡಮಾರುತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 04, 2021 | 10:23 AM

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ ಅಬ್ಬರ ಜೋರಾಗಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಓಮನ್​ನಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಶವಗಳನ್ನು ಹೊರಗೆ ತೆಗೆದಿದ್ದಾರೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ವಿಮಾನ ಸಂಚಾರ ವ್ಯತ್ಯಯವಾಗಿದೆ.

ಮಸ್ಕತ್​ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾಗಿ, ಮನೆಯೊಳಗೆ ನೀರು ನುಗ್ಗಿದೆ. ಶಾಹೀನ್ ಚಂಡಮಾರುತದಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನೂ ಚಂಡಮಾರುತದ ಅಬ್ಬರ ಹೆಚ್ಚುತ್ತಲೇ ಇದ್ದು, ಸ್ಥಳೀಯ ಸರ್ಕಾರಗಳು ಅಪಾಯವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಿವೆ. ಓಮನ್​ನಲ್ಲಿ ಮಳೆ ಹೆಚ್ಚಾಗಿರುವುದರಿಂದ 2 ದಿನಗಳ ರಾಷ್ಟ್ರೀಯ ರಜೆಯನ್ನು ಘೋಷಿಸಲಾಗಿದೆ.

ಇರಾನ್​ನ ಚಬಾಹರ್ ಬಂದರಿನಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇರಾನ್​ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದು ಅಪಾರ ಹಾನಿಯಾಗಿದೆ. ಇರಾನ್​ನ ಕರಾವಳಿ ತೀರದಲ್ಲಿ 220 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಯುಎಇಯಲ್ಲಿ ಕೂಡ ಶಾಹೀನ್ ಚಂಡಮಾರುತದ ಆತಂಕ ಹೆಚ್ಚಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Cyclone Shaheen: ಇಂದು ಗುಜರಾತ್​ ಪ್ರವೇಶಿಸಲಿದೆ ಶಾಹೀನ್ ಚಂಡಮಾರುತ; ಪಾಕಿಸ್ತಾನದಲ್ಲಿ ಹೆಚ್ಚಲಿದೆ ಸೈಕ್ಲೋನ್ ಅಬ್ಬರ

Published On - 9:58 am, Mon, 4 October 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್