Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ, ದಾವೂದ್ ಸೋದರಳಿಯ ಬಿಚ್ಚಿಟ್ಟ ಒಂದಷ್ಟು ಸಂಗತಿಗಳು ಇಲ್ಲಿವೆ

ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim)ಪಾಕಿಸ್ತಾನದಲ್ಲಿ ಎರಡನೇ ಮದುವೆಯಾಗಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ತನಿಖೆಯಲ್ಲಿ ಬಹಿರಂಗವಾಗಿದೆ.

Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ, ದಾವೂದ್ ಸೋದರಳಿಯ ಬಿಚ್ಚಿಟ್ಟ ಒಂದಷ್ಟು ಸಂಗತಿಗಳು ಇಲ್ಲಿವೆ
ದಾವೂದ್ ಇಬ್ರಾಹಿಂ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 17, 2023 | 6:45 PM

ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim)ಪಾಕಿಸ್ತಾನದಲ್ಲಿ ಎರಡನೇ ಮದುವೆಯಾಗಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ತನಿಖೆಯಲ್ಲಿ ಬಹಿರಂಗವಾಗಿದೆ. ದಾವೂದ್‌ನ ಸೋದರಳಿಯ ಈ ಬಗ್ಗೆ ಎನ್‌ಐಎಗೆ ಮಾಹಿತಿ ನೀಡಿದ್ದು, ದಾವೂದ್ ಮರುಮದುವೆಯಾಗಿರುವುದಾಗಿ ತಿಳಿಸಿದ್ದಾರೆ.  ಇದರೊಂದಿಗೆ ದಾವೂದ್  ಕರಾಚಿಯಲ್ಲಿ ವಾಸವಿರುವ ಕುರಿತು ಕೂಡ ಮಾಹಿತಿ ಲಭ್ಯವಾಗಿದೆ.  ಆತ ತನ್ನ ಮೊದಲ ಪತ್ನಿ ಮಹಜಬೀನ್‌ಗೆ ವಿಚ್ಛೇದನ ನೀಡಿಲ್ಲ ಎಂಬ ಅಂಶವೂ ಬಹಿರಂಗವಾಗಿದೆ. ಈ ಕುರಿತು ಇಂಡಿಯಾ ಟುಡೆ ವರದಿ ಮಾಡಿದೆ.

ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು ಯಾರೊಂದಿಗೆ? ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತನಿಖೆಯಲ್ಲಿ ದಾವೂದ್ ಇಬ್ರಾಹಿಂನ ಎರಡನೇ ಪತ್ನಿ ಪಾಕಿಸ್ತಾನಿ ಪಠಾಣ್ ಕುಟುಂಬದವರು ಎಂಬುದು ತಿಳಿದುಬಂದಿದೆ.

ದಾವೂದ್​ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಈ ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ತನಿಖಾ ಸಂಸ್ಥೆಯು ಇತ್ತೀಚೆಗೆ ಮುಂಬೈ ಸೇರಿದಂತೆ ಹಲವೆಡೆ ದಾಳಿ ನಡೆಸಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಭಯೋತ್ಪಾದಕ ಜಾಲವನ್ನು ಬಹಿರಂಗಪಡಿಸುವ ಮೂಲಕ ಹಲವರನ್ನು ಬಂಧಿಸಿತ್ತು. ಎನ್​ಐಎ ಕೂಡ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ದಾವೂದ್ ಸಂಬಂಧಿ ಎರಡನೇ ಮದುವೆಯ ಬಗ್ಗೆ ಎನ್‌ಐಎಗೆ ತಿಳಿಸಿದ್ದಾರೆ, ಆದರೆ ಎರಡನೇ ಹೆಂಡತಿ ಎಲ್ಲಿ ವಾಸಿಸುತ್ತಾಳೆ ಮತ್ತು ದಾವೂದ್‌ನೊಂದಿಗೆ ಯಾವಾಗ ಮದುವೆಯಾಗಿದ್ದಾಲೆ ಎಂಬ ಮಾಹಿತಿಯನ್ನು ನೀಡಿಲ್ಲ.

ದಾವೂದ್ ಪಾಕಿಸ್ತಾನದ ವಿಳಾಸವನ್ನೂ ಬದಲಾಯಿಸಿದ್ದ ಮರಾಠಿ ಪತ್ರಿಕೆ ಲೋಕಮತ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ದಾವೂದ್ ಇಬ್ರಾಹಿಂ ಕರಾಚಿಯಲ್ಲಿ ತನ್ನ ವಿಳಾಸವನ್ನು ಬದಲಾಯಿಸಿದ್ದಾನೆ ಮತ್ತು ಇದೀಗ ರಕ್ಷಣಾ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದಾನೆ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ತನಿಖೆಯಲ್ಲಿ, ದಾವೂದ್ ಕೆಲವು ದಿನಗಳ ಹಿಂದೆ ಪಾಕಿಸ್ತಾನದಲ್ಲಿ ತನ್ನ ವಿಳಾಸವನ್ನು ಬದಲಾಯಿಸಿದ್ದಾನೆ ಮತ್ತು ಪ್ರಸ್ತುತ ಪಾಕಿಸ್ತಾನಿ ರಕ್ಷಣಾ ಸಚಿವಾಲಯಕ್ಕೆ ಸೇರಿದ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎಂಬ ಸುಳಿವು ಏಜೆನ್ಸಿಗಳಿಗೆ ಸಿಕ್ಕಿದೆ.

1993ರ ಸ್ಫೋಟದ ಬಳಿಕ ದಾವೂದ್ ಪಾಕಿಸ್ತಾನದಲ್ಲಿ ಇದ್ದಾನೆ

ದಾವೂದ್ ಇಬ್ರಾಹಿಂ ಭಾರತದಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದು, 1993 ರಲ್ಲಿ ಮುಂಬೈನಲ್ಲಿ ನಡೆದ ಬಾಂಬ್ ಸ್ಫೋಟದ ನಂತರ ಅವನು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾನೆ ಎನ್ನುವ ಮಾಹಿತಿ ಇತ್ತು. ಆದರೆ, ದಾವೂದ್ ಇಲ್ಲಿದ್ದಾನೆ ಎಂಬುದನ್ನು ಪಾಕಿಸ್ತಾನ ಸದಾ ನಿರಾಕರಿಸುತ್ತಲೇ ಬಂದಿದೆ.

ದಾವೂದ್‌ನ ಮಗಳು ಜಾವೇದ್ ಮಿಯಾಂದಾದ್‌ನ ಮಗನನ್ನು ಮದುವೆಯಾಗಿದ್ದಾಳೆ. ದಾವೂದ್ ಇಬ್ರಾಹಿಂ ಮತ್ತು ಅವರ ಮೊದಲ ಪತ್ನಿ ಮೆಹಜಾಬಿನ್ ಅವರ ಪುತ್ರಿ ಮಹ್ರುಖ್ ಅವರು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಅವರ ಪುತ್ರ ಜುನೈದ್ ಅವರನ್ನು ವಿವಾಹವಾಗಿದ್ದಾರೆ. ಜುನೈದ್ ಮತ್ತು ಮಹ್ರುಖ್ ಕೆಲವು ವರ್ಷಗಳ ಹಿಂದೆ ಪಾಕಿಸ್ತಾನದಲ್ಲಿ ಮದುವೆಯಾಗಿದ್ದರು ಮತ್ತು ಆರತಕ್ಷತೆ ದುಬೈನಲ್ಲಿ ನಡೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Tue, 17 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ