ವಿಮಾನದ ಚಕ್ರಗಳಡಿ ಮೃತದೇಹ ಪತ್ತೆ

ವಿಮಾನದ ಚಕ್ರಗಳಡಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಹಲವು ಬಾರಿ ಅಕ್ರಮ ವಲಸಿಗರು ಈ ಚಕ್ರಗಳಡಿ ಅವಿತುಕೊಂಡು ಹೋಗಲು ಪ್ರಯತ್ನಿಸಿ ಸಾವನ್ನಪ್ಪಿದ್ದ ಹಲವು ಘಟನೆಗಳು ನಮ್ಮ ಕಣ್ಣೆದುರಿವೆ. ಆದರೆ ಈ ವ್ಯಕ್ತಿ ಅಲ್ಲಿಗೆ ಹೇಗೆ ಬಂದ ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳವಾರ ವಿಮಾನವು ಚಿಕಾಗೋದಿಂದ ಕಹುಲುಯಿ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಲ್ಯಾಂಡಿಂಗ್ ಗೇರ್​ಗಳ ಚಕ್ರಗಳ ಅಡಿಯಲ್ಲಿ ವ್ಯಕ್ತಿಯ ಮೃತದೇಹ ಸಿಕ್ಕಿದೆ.

ವಿಮಾನದ ಚಕ್ರಗಳಡಿ ಮೃತದೇಹ ಪತ್ತೆ
ವಿಮಾನImage Credit source: India TV
Follow us
ನಯನಾ ರಾಜೀವ್
|

Updated on: Dec 26, 2024 | 10:20 AM

ಯುನೈಟೆಡ್ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದೆ. ವಿಮಾನವು ಹವಾಯಿಯಲ್ಲಿ ಇಳಿದಿತ್ತು. ಈ ಸಮಯದಲ್ಲಿ ವಿಮಾನದ ಚಕ್ರದಡಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ವಿಮಾನವು ಚಿಕಾಗೋದಿಂದ ಕಹುಲುಯಿ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಲ್ಯಾಂಡಿಂಗ್ ಗೇರ್​ಗಳ ಚಕ್ರಗಳ ಅಡಿಯಲ್ಲಿ ವ್ಯಕ್ತಿಯ ಮೃತದೇಹ ಸಿಕ್ಕಿದೆ.

ಈ ವ್ಯಕ್ತಿ ಚಕ್ರದಡಿ ಸಿಲುಕಿದ್ಹೇಗೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಈ ಚಕ್ರದ ಬಳಿ ವಿಮಾನದ ಹೊರಗಿನಿಂದ ಮಾತ್ರ ಜನರು ಪ್ರವೇಶಿಸಬಹುದು. ಬೋಯಿಂಗ್ 787-10 ವಿಮಾನದ ಕೆಳಗೆ ಶವ ಪತ್ತೆಯಾಗಿದೆ. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗುತ್ತಿದ್ದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ವಿಭಾಗದಲ್ಲಿ ಶವ ಇರುವುದು ಕಂಡುಬಂದಿದೆ.

ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಮಾಯಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ಅಕ್ರಮ ವಲಸಿಗನೇ ಎಂದು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಲ್ಯಾಂಡಿಂಗ್ ಗೇರ್ ವಿಭಾಗದಲ್ಲಿ ಪ್ರಯಾಣಿಸಲು ಪ್ರಯತ್ನಿಸಿದ ಕಾರಣ ಕಳೆದ ಕೆಲವು ವರ್ಷಗಳಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ.

ಕಜಾಕಿಸ್ತಾನದಲ್ಲಿ ವಿಮಾನ ಪತನ ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಹಾರುತ್ತಿತ್ತು. ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಕಜಾಕ್ ಮಾಧ್ಯಮ ವರದಿ ಮಾಡಿದೆ. ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ